ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ

leopard task force for Bengaluru: ಬೆಂಗಳೂರಿನಲ್ಲಿ ಪದೇ ಪದೇ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಜನರು ಭಯಭೀತರಾಗಿದ್ದಾರೆ. ಮೊನ್ನೇ ಅಷ್ಟೇ ಆನೇಕಲ್ ಭಾಗದಲ್ಲಿ ಚಿರತೆ ಕಾಣಿಸಿಕೊಂಡು ದೊಡ್ಡ ಆತಂಕ ಮೂಡಿಸಿತ್ತು. ಇದೀಗ ಮತ್ತೊಂದು ಚಿರತೆ ನೈಸ್ ರಸ್ತೆ ಸುತ್ತಮುತ್ತ ಓಡಾಡುತ್ತಿದೆ. ಇದರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಬೆಂಗಳೂರಿಗೆ ಅಂತಾನೇ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸೂಚನೆ ನೀಡಿದ್ದಾರೆ.

ಬೆಂಗಳೂರಿಗೆ ಪ್ರತ್ಯೇಕ ಚಿರತೆ ಕಾರ್ಯಪಡೆ ರಚಿಸುವಂತೆ ಸಚಿವ ಈಶ್ವರ ಖಂಡ್ರೆ ಸೂಚನೆ
ಅರಣ್ಯ ಸಚಿವ ಈಶ್ವರ್ ಖಂಡ್ರೆ
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on:Nov 06, 2023 | 9:46 AM

ಬೆಂಗಳೂರು, (ನವೆಂಬರ್ 06): ಬೆಂಗಳೂರು (Bengaluru) ನಗರದ ವಸತಿ ಪ್ರದೇಶಗಳಲ್ಲಿ ಪದೇ ಪದೇ ಚಿರತೆಗಳು(leopard) ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ನಗರಕ್ಕೆ ಪ್ರತ್ಯೇಕ ಸಮರ್ಪಿತ ಕ್ಷಿಪ್ರ ಚಿರತೆ ಕಾರ್ಯಪಡೆ( separate leopard task force) ರಚಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (eshwara khandre) ಸೂಚನೆ ನೀಡಿದ್ದಾರೆ. ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡುವಂತೆ ಸೂಚಿಸಿದ್ದಾರೆ.

ಈ ಬಾರಿ ಮಳೆಯ ಅಭಾವ ಇರುವ ಹಿನ್ನೆಲೆಯಲ್ಲಿ ಆಹಾರ ಹುಡುಕಿಕೊಂಡು ವನ್ಯ ಮೃಗಗಳು ಕಾಡಿನಿಂದ ನಾಡಿಗೆ ಹೆಚ್ಚಾಗಿ ಬರುತ್ತಿವೆ. ಅದರಲ್ಲೂ ಬೆಂಗಳೂರು ನಗರದ ಹೊರವಲಯದಲ್ಲಿ ಕಾಡು ಮತ್ತು ಬೆಟ್ಟಗುಡ್ಡ ಇರುವ ಪ್ರದೇಶದಲ್ಲಿ ಚಿರತೆಗಳು ಕಾಣಿಸಿಕೊಳ್ಳುತ್ತಿದ್ದು, ಜನರಲ್ಲಿ ಆತಂಕ ಮೂಡಿದೆ. ಕೂಡಲೇ ಬೆಂಗಳೂರಿನಲ್ಲಿ ಒಂದು ಕ್ಷಿಪ್ರ ಚಿರತೆ ಕಾರ್ಯಪಡೆ ರಚಿಸಿ, ವನ್ಯಮೃಗಗಳು ನಾಡಿಗೆ ಬಂದರೆ ಕೂಡಲೇ ಸೆರೆ ಹಿಡಿದು ಕಾಡಿಗೆ ಅಥವಾ ಪುನರ್ವಸತಿ ಕೇಂದ್ರಕ್ಕೆ ಕಳುಹಿಸುವ ಕಾರ್ಯವನ್ನು ತ್ವರಿತವಾಗಿ ಮಾಡಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಚಿರತೆ ಆತಂಕ; ಮನೆಯ ಬಾಗಿಲು ಬಳಿ ಚಿರತೆ ಕಂಡು ಕಿರುಚಿದ ಬಾಲಕ

ಈಗಾಗಲೇ ಹಾಲಿ ಇದ್ದ 5 ಆನೆ ಕ್ಷಿಪ್ರಕಾರ್ಯಪಡೆಗಳ ಜೊತೆಗೆ ಬೆಂಗಳೂರು (ಬನ್ನೇರುಘಟ್ಟ) ಮತ್ತು ರಾಮನಗರದಲ್ಲಿ ತಲಾ ಒಂದರಂತೆ 2 ಕಾರ್ಯಪಡೆಯನ್ನು ಹೆಚ್ಚುವರಿಯಾಗಿ ರಚಿಸಲಾಗಿದೆ. ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ತಿಳಿಸಿದ್ದಾರೆ.

ಅದೇ ರೀತಿ ಹೆಚ್ಚು ಕಾಡಿರುವ ಮತ್ತು ಚಿರತೆಗಳು, ಕರಡಿಗಳು ಇರುವ ಬೆಟ್ಟಗುಡ್ಡದ ಪ್ರದೇಶದಲ್ಲಿ ಕನಿಷ್ಠ 3 ಜಿಲ್ಲೆಗೆ ಒಂದರಂತೆ ಕ್ಷಿಪ್ರ ಕಾರ್ಯಪಡೆ ರಚಿಸಿ, ಅತ್ಯಾಧುನಿಕ ಸಲಕರಣೆಗಳನ್ನು ಒದಗಿಸಲು ತಿಳಿಸಿದ್ದು, ಚಿರತೆ ಕಾರ್ಯಪಡೆಯ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಿಸುವಂತೆಯೂ ಸೂಚಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:42 am, Mon, 6 November 23

ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ