AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಾರಂ 7 ಸಲ್ಲಿಕೆ ಕೇಸ್​: ಕಾಂಗ್ರೆಸ್ ಮುಖಂಡನ ದೂರು ಆಧರಿಸಿ ದಾಖಲಾಗಿದ್ದ ಎಫ್ಐಆರ್​ಗೆ ಹೈಕೋರ್ಟ್ ತಡೆ

ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು ಫಾರಂ 7 ದುರ್ಬಳಕೆ ಆರೋಪದ ಮೇಲೆ ವಸಂತಲಕ್ಷ್ಮಿ ಮತ್ತು ದೀಪಕ್ ಸಿಂಗ್ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. 778 ಫಾರಂ 7 ಅರ್ಜಿಗಳ ಸಲ್ಲಿಕೆಯ ಹಿಂದೆ ದುರುದ್ದೇಶವಿರಬಹುದು ಎಂಬ ದೂರಿನ ಬಗ್ಗೆ ನ್ಯಾಯಾಲಯವು ಪ್ರಶ್ನಿಸಿದ್ದು, ಇದು ಆತುರದ ದೂರು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

ಫಾರಂ 7 ಸಲ್ಲಿಕೆ ಕೇಸ್​: ಕಾಂಗ್ರೆಸ್ ಮುಖಂಡನ ದೂರು ಆಧರಿಸಿ ದಾಖಲಾಗಿದ್ದ ಎಫ್ಐಆರ್​ಗೆ ಹೈಕೋರ್ಟ್ ತಡೆ
ಹೈಕೋರ್ಟ್Image Credit source: Getty images
ರಮೇಶ್​ ಎಮ್​.
| Edited By: |

Updated on:Oct 09, 2026 | 6:11 PM

Share

ಮುಖ್ಯಾಂಶಗಳು

  • SIR ವೇಳೆ ತಪ್ಪು ಮಾಹಿತಿ ನೀಡಿ ಫಾರಂ 7 ಸಲ್ಲಿಕೆ ಆರೋಪ
  • ಎಫ್ಐಆರ್​ಗೆ ಮಧ್ಯಂತರ ತಡೆಯಾಜ್ಞೆ ನೀಡಿದ ಹೈಕೋರ್ಟ್
  • ಇದು ಮೇಲ್ನೋಟಕ್ಕೇ ಆತುರದ ದೂರು ಎಂದ ಹೈಕೋರ್ಟ್

ಬೆಂಗಳೂರು, ಅಕ್ಟೋಬರ್​​ 09: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವೇಳೆ ತಪ್ಪು ಮಾಹಿತಿ ನೀಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಫಾರಂ 7 ಸಲ್ಲಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಎಫ್​ಐಆರ್​ಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದು ಮೇಲ್ನೋಟಕ್ಕೇ ಆತುರದ ದೂರು ಎಂದು ಹೈಕೋರ್ಟ್ ಅಭಿಪ್ರಯಾಪಟ್ಟಿದೆ.

ಎಫ್‌ಐಆರ್ ರದ್ದು ಕೋರಿ ಅರ್ಜಿ

ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್​ ದೂರು ಆಧರಿಸಿ ಬೆಂಗಳೂರಿನ ವೈಯಾಲಿಕಾವಲ್ ಠಾಣೆಯಲ್ಲಿ ಮಲ್ಲೇಶ್ವರಂನ ಬೂತ್ ಏಜೆಂಟ್ ವಸಂತಲಕ್ಷ್ಮೀ ಮತ್ತು ದೀಪಕ್ ಸಿಂಗ್​​ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು. ಹಾಗಾಗಿ ಎಫ್‌ಐಆರ್ ರದ್ದು ಕೋರಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ಮಾಡಿದ ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರಿದ್ದ ಪೀಠ ಎಫ್​ಐಆರ್​ಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.

ಅರ್ಜಿದಾರರ ಪರ ವಕೀಲರ ವಾದವೇನು?

‘ಬಿಎಲ್ಎಗಳಾಗಿ ವೋಟರ್ ಲಿಸ್ಟ್​ನಿಂದ ತೆಗೆಯಲು ಅರ್ಜಿ ಸಲ್ಲಿಸಿದ್ದಾರೆ. ಚುನಾವಣಾ ಅಧಿಕಾರಿಗಳು ಪರಿಶೀಲಿಸಿ ತೀರ್ಮಾನಿಸಲು ಅವಕಾಶವಿದೆ’ ಎಂದು ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ವಾದ ಮಂಡಿಸಿದರು. ಅರ್ಜಿದಾರರ ವಾದಕ್ಕೆ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಅನೂಪ್ ಕುಮಾರ್ ಆಕ್ಷೇಪ ವ್ಯಕ್ತಪಡಿಸಿದ್ದು, ‘50 ಅರ್ಜಿ ಸಲ್ಲಿಸಬಹುದು, ಆದರೆ 778 ಫಾರಂ 7 ಸಲ್ಲಿಸಿದ್ದಾರೆ. ದುರುದ್ದೇಶದಿಂದ ಮತದಾರರನ್ನ ಡಿಲೀಟ್ ಮಾಡಲು ಯತ್ನಿಸಿದ್ದಾರೆ’ ಎಂದು ವಾದಿಸಿದರು.

LIVE TV

50ಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದರೆ ಯಾವ ಕಾಯ್ದೆಯಡಿ ಅಪರಾಧ?

ಇನ್ನು ವಿಚಾರಣೆ ವೇಳೆ ನ್ಯಾ.ಅನಂತ್ ರಾಮನಾಥ್ ಹೆಗ್ಡೆ ಅವರು ಸರ್ಕಾರದ ಪರ ವಕೀಲರಿಗೆ ಕೆಲ ಪ್ರಶ್ನೆ ಮಾಡಿದರು. 50ಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದರೆ ಯಾವ ಕಾಯ್ದೆಯಡಿ ಅಪರಾಧ? ಫಾರಂ 7 ಸಲ್ಲಿಸಿದಾಗ ಆ ಬಗ್ಗೆ ಅಧಿಕಾರಿಗಳು ವಿಚಾರಣೆ ಮಾಡುತ್ತಾರಲ್ಲವೇ? ತಪ್ಪು ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ತೀರ್ಮಾನಿಸುತ್ತಾರಲ್ಲವೇ? ಡಿಲೀಟ್ ಆಗುವ ಜನರಿಗೂ ನೋಟಿಸ್ ನೀಡುವುದಿಲ್ಲವೇ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.

ಇದನ್ನು ಓದಿ: ಬೆಂಗಳೂರಿನಲ್ಲೂ SIR ಫಾರ್ಮ್-7 ವಿವಾದ: ಮಲ್ಲೇಶ್ವರಂನಲ್ಲಿ ಅಕ್ರಮ ಆರೋಪ, ಇಬ್ಬರ ವಿರುದ್ಧ ಎಫ್​​ಐಆರ್​​

ಇನ್ನು ಮತದಾರರು ಇಂಥವರಿಗೇ ಮತ ಹಾಕಿದ್ದಾರೆಂದು ತಿಳಿಯುವುದಿಲ್ಲವಲ್ಲ ಎಂದು ಪ್ರಶ್ನಿಸಿರುವ ನ್ಯಾಯಾಲಯ, ಇದು ಮೇಲ್ನೋಟಕ್ಕೇ ಆತುರದ ದೂರು ಎಂದು ಅಭಿಪ್ರಯಾಪಟ್ಟಿದೆ. ವಾದ ಪ್ರತಿವಾದದ ಬಳಿಕ ಕಾಂಗ್ರೆಸ್ ಮುಖಂಡ ಅನೂಪ್ ಅಯ್ಯಂಗಾರ್ ದೂರು ಆಧರಿಸಿ ದಾಖಲಿಸಿದ್ದ ಎಫ್ಐಆರ್​ಗೆ ತಡೆಯಾಜ್ಞೆ ನೀಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Published On - 5:52 pm, Fri, 9 October 26

Follow Us
ರಮೇಶ್​ ಎಮ್​.
ರಮೇಶ್​ ಎಮ್​.

ರಮೇಶ್​ ಎಂ ವಿಶೇಷ ವರದಿಗಾರರಾಗಿದ್ದಾರೆ, ಮೂಲತಃ ಕಾನೂನು ಪದವೀಧರನಾಗಿದ್ದು ಕಳೆದ 18 ವರ್ಷಗಳಿಂದ ಟಿವಿ9 ಸುದ್ದಿ ವಾಹಿನಿಯಲ್ಲಿ ಕಾನೂನು ಸಂಬಂಧಿತ ವರದಿ ನೀಡುತ್ತಿದ್ದಾರೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಹಾಗೂ ವಿಚಾರಣಾ ನ್ಯಾಯಾಲಯಗಳ ಪ್ರಮುಖ ಪ್ರಕರಣಗಳ ವರದಿಗಾರಿಕೆ ಮಾಡುತ್ತಿದ್ದು, ಬೆಂಗಳೂರಿನ ನಿವಾಸಿಯಾಗಿದ್ದಾರೆ.

Read More
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
KPSC ಹಗರಣ: ಅಕ್ರಮದ ಹಣದಲ್ಲಿ ಆರೋಪಿಗಳಿಂದ ಪ್ಲೈಟ್ ಟಿಕೆಟ್​ ಬುಕ್ಕಿಂಗ್
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಜಂಬೂಸವಾರಿ: ಮಹೇಂದ್ರ ಆನೆಯನ್ನು ಕ್ಯಾಪ್ಟನ್ ರೇಸ್​ನಿಂದ ಹೊರಗಿಟ್ಟಿದ್ದೇಕೆ?
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ಮೈಸೂರು ದಸರಾ 2026: ಗಜಪಡೆಗೆ ಸಿಡಿಮದ್ದು ತರಬೇತಿ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ದಾವಣಗೆರೆ ಸ್ಕ್ಯಾನಿಂಗ್ ಕೇಂದ್ರಗಳ ಮೇಲೆ ಭ್ರೂಣ ಲಿಂಗ ಪತ್ತೆ ಶಂಕೆ
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಧರೆಗುರುಳಿದ ಬೃಹತ್ ಮರ, ಹೊಯ್ಸಳ ಪೊಲೀಸ್ ಕಾರು ಜಸ್ಟ್ ಮಿಸ್
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಸ್ಟಿಂಗ್ ಆಪರೇಷನ್​​: ಪೆನ್‌ಡ್ರೈವ್​ ಪ್ರದರ್ಶಿಸಿ ಗಣಿಗ ರವಿ ಸ್ಫೋಟಕ ಆರೋಪ
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಪಿಜಿಸಿಇಟಿ ಕೌನ್ಸಿಲಿಂಗ್ ವಿಳಂಬ: ಕೆಇಎ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ!
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಗಾನವಿ ಕೊಟ್ಟ ಕೌಂಟರ್​​ಗೆ ಸೈಲೆಂಟ್ ಆದ ತಾಂಡವ್ ರಾಮ್
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!
ಬೆಂಗಳೂರಿನಲ್ಲಿ ಭಕ್ತರ ಗಮನ ಸೆಳೆಯುತ್ತಿದೆ ಮಂತ್ರಾಲಯದ ಮಾದರಿಯ ಗಣೇಶ ಮಂಟಪ!