ಅಕ್ರಮವಾಗಿ ಫಾರ್ಮ್-7 ಸಲ್ಲಿಸಿಕೆ ಆರೋಪ: ಚುನಾವಣಾ ಆಯೋಗದ ಕಚೇರಿಯಲ್ಲೇ ಪ್ರತಿಭಟನೆ ಕುಳಿತ ಸಿಎಂ ಆ್ಯಂಡ್​ ಟೀಮ್​

ಚುನಾವಣಾ ಆಯೋಗದ ಫಾರ್ಮ್-7 ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ, ನಿಗದಿಯಾಗಿದ್ದ ಸಂಪುಟ ಸಭೆಯನ್ನು ರದ್ದುಗೊಳಿಸಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವರು ಹಾಗೂ ಶಾಸಕರು ಚುನಾವಣಾ ಆಯೋಗದ ಕಚೇರಿಯ ಮೆಟ್ಟಿಲುಗಳ ಮೇಲೆ ಕುಳಿತು ದಿಢೀರ್ ಪ್ರತಿಭಟನೆ ನಡೆಸಿದರು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ ನಡೆಸುವುದಾಗಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಅಕ್ರಮವಾಗಿ ಫಾರ್ಮ್-7 ಸಲ್ಲಿಸಿಕೆ ಆರೋಪ: ಚುನಾವಣಾ ಆಯೋಗದ ಕಚೇರಿಯಲ್ಲೇ ಪ್ರತಿಭಟನೆ ಕುಳಿತ ಸಿಎಂ ಆ್ಯಂಡ್​ ಟೀಮ್​
ಡಿಕೆ ಶಿವಕುಮಾರ್​ ಪ್ರತಿಭಟನೆ
Image Credit source: tv9 kannada
Edited By:

Updated on: Oct 01, 2026 | 5:57 PM

ಮುಖ್ಯಾಂಶಗಳು

  • ಅಕ್ರಮವಾಗಿ ಫಾರ್ಮ್-7 ಸಲ್ಲಿಸಿ ಮತದಾರರ ಡಿಲೀಟ್ ಆರೋಪ
  • ಸಚಿವ ಸಂಪುಟ ಸಭೆ ರದ್ದುಗೊಳಿಸಿ ಪ್ರತಿಭಟನೆ ಕುಳಿತ ಸಿಎಂ ಡಿಕೆ ಶಿವಕುಮಾರ್​
  • ರಾಜ್ಯ ಚುನಾವಣಾ ಆಯೋಗದ ಕಚೇರಿ ಮೆಟ್ಟಿಲುಗಳ ಮೇಲೆ ಧರಣಿ

ಬೆಂಗಳೂರು, ಅಕ್ಟೋಬರ್​​ 01: ಚುನಾವಣಾ ಆಯೋಗ ನಡೆಸುತ್ತಿರುವ ಎಸ್​ಐಆರ್ ಪ್ರಕ್ರಿಯೆ ವಿರುದ್ಧ ಸಿಎಂ ಡಿಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ. ಅಕ್ರಮವಾಗಿ ಫಾರ್ಮ್-7 ಸಲ್ಲಿಸಿ ಮತದಾರರನ್ನ ವ್ಯವಸ್ಥಿತವಾಗಿ ಡಿಲೀಟ್ ಮಾಡಿಸಲಾಗಿದೆ ಎಂದು ದೂರಿದ್ದಾರೆ. ಈ ಕುರಿತಾಗಿ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ದೂರು ಕೂಡ ಸಲ್ಲಿಸಿದ್ದಾರೆ. ‘ತಪ್ಪಿತಸ್ಥರ ವಿರುದ್ಧ ಕೇಸ್ ದಾಖಲಿಸುವ ತನಕ ತೆರಳಲ್ಲ’ ಎಂದು ಪಟ್ಟು ಹಿಡಿದಿರುವ ಸಿಎಂ, ಚುನಾವಣಾ ಆಯೋಗದ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಡಿಕೆ ಶಿವಕುಮಾರ್​ಗೆ​ ಸಚಿವರು, ಶಾಸಕರು ಸಾಥ್​ ನೀಡಿದ್ದು, ನಿಗದಿಯಾಗಿದ್ದ ಸಂಪುಟ ಸಭೆ ರದ್ದಾಗಿದೆ.

ಆಯೋಗದ ಮೆಟ್ಟಿಲುಗಳ ಮೇಲೆ ಕುಳಿತು ನಾಯಕರ ಆಕ್ರೋಶ

ಅರ್ಹ ಮತದಾರರ ಹೆಸರುಗಳನ್ನು ಕೈಬಿಡುವ ಉದ್ದೇಶದಿಂದ ವ್ಯವಸ್ಥಿತವಾಗಿ ಫಾರ್ಮ್-7 ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಸಿಎಂ ಡಿ.ಕೆ. ಶಿವಕುಮಾರ್, ಸಚಿವರು ಮತ್ತು ಶಾಸಕರೊಂದಿಗೆ ಚುನಾವಣಾ ಆಯೋಗದ ಕಚೇರಿ ಮುಂಭಾಗದ ಮೆಟ್ಟಿಲುಗಳ ಮೇಲೆಯೇ ಕುಳಿತು ಧರಣಿ ಕುಳಿತರು. ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವಂತೆ ಪಟ್ಟು ಹಿಡಿದಿದ್ದಾರೆ.

ಕೆಲವರು ತಾವು ಬಿಜೆಪಿ ಕಾರ್ಯಕರ್ತರು ಎಂದು ಒಪ್ಪಿಕೊಂಡಿದ್ದಾರೆ ಎಂದ ಸಿಎಂ 

ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್​, ‘ಫಾರ್ಮ್-7 ಸಲ್ಲಿಸಿ ಮತದಾರರ ಡಿಲೀಟ್ ಬಗ್ಗೆ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಎಲ್ಲಾ ದಾಖಲೆ ಸಲ್ಲಿಸಿದ್ದೇವೆ. ರಾಜ್ಯದ ಮುಖ್ಯಮಂತ್ರಿಯಾಗಿ ಜನರ ಹಕ್ಕು ರಕ್ಷಣೆ ಮಾಡಬೇಕಿದೆ’ ಎಂದರು.

ಇದನ್ನೂ ಓದಿ: 45 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್‌ಗೆ ಷಡ್ಯಂತ್ರ, ಅಲ್ಪಸಂಖ್ಯಾತ, ದಲಿತ ಮತಗಳೇ ಟಾರ್ಗೆಟ್: ಸಿಎಂ ಡಿಕೆಶಿ ಗಂಭೀರ ಆರೋಪ

‘ಹಲವು ಕ್ಷೇತ್ರಗಳಲ್ಲಿ ಅಕ್ರಮವಾಗಿ ಫಾರ್ಮ್-7 ಸಲ್ಲಿಸಲಾಗಿದೆ. ಈಗಾಗಲೇ ಕೆಲವರು ತಾವು ಮಾಡಿದ ತಪ್ಪನ್ನು ಒಪ್ಪಿಕೊಂಡಿದ್ದು, ಕೆಲವರು ತಾವು ಬಿಜೆಪಿ ಕಾರ್ಯಕರ್ತರು ಎಂದು ಒಪ್ಪಿಕೊಂಡಿದ್ದಾರೆ. ತಮ್ಮ ವಿರುದ್ಧ ಕ್ರಮಕೈಗೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ’ ಎಂದು ಹೇಳಿದರು.

ಕ್ರಮಕೈಗೊಳ್ಳುವವರೆಗೂ ಪ್ರತಿಭಟನೆ 

‘ತಪ್ಪು ಮಾಡಿದವರ ವಿರುದ್ಧ ಕಾನೂನಾತ್ಮಕವಾಗಿ ಕ್ರಮ ಆಗಬೇಕು. ಅಲ್ಪಸಂಖ್ಯಾತರು, SC-ST, ಒಬಿಸಿ ಮತದಾರರೇ ಟಾರ್ಗೆಟ್​ ಮಾಡಲಾಗಿದೆ. ನಾವು ಬಿಜೆಪಿ, ಕಾಂಗ್ರೆಸ್ ಪರ ಮತದಾರರು ಎಂದು ಹೇಳುತ್ತಿಲ್ಲ. ರಾಜ್ಯದ ಸಿಎಂ ಆಗಿ ಜನರ ಮತದಾನದ ಹಕ್ಕು ಉಳಿಸಿಬೇಕಿದೆ. ಫಾರ್ಮ್-7 ಸಲ್ಲಿಸಿದವರ ಬಗ್ಗೆ ದಾಖಲೆಗಳನ್ನು ಸಲ್ಲಿಸಿದ್ದೇವೆ. ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಆಯೋಗದ ಪರ ವಕೀಲರು ಕೋರ್ಟ್​ನಲ್ಲಿದ್ದಾರೆಂದು ಹೇಳಿದ್ದಾರೆ. ಚುನಾವಣಾ ಆಯೋಗ ಕ್ರಮಕೈಗೊಳ್ಳುವವರೆಗೂ ಇಲ್ಲೇ ಇರುತ್ತೇವೆ. ಚುನಾವಣಾ ಆಯೋಗದ ಕಚೇರಿ ಮುಂದೆ ಪ್ರತಿಭಟನೆ ಕೂರುತ್ತೇವೆ. ಸಚಿವರು, ಪಕ್ಷದ ಪದಾಧಿಕಾರಿಗಳ ಜೊತೆ ಇಲ್ಲೇ ಇರುತ್ತೇನೆ’ ಎಂದು ಡಿಕೆ ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

DK Shivakumar Protest: ಚುನಾವಣಾ ಆಯೋಗದ ಫಾರ್ಮ್​-7 ದುರ್ಬಳಕೆ ಆರೋಪ.. ಆಯೋಗದ ಕಚೇರಿ ಎದುರು ಪ್ರತಿಭಟನೆ | #TV9D

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 5:43 pm, Thu, 1 October 26

ಪ್ರಮೋದ್​ ಶಾಸ್ತ್ರಿ ಜಿ.
Loading...
Unable to load recommendations.
Follow Us