ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್​ ಪಾಸಿಟಿವ್

ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ..

ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ ಅವರಿಗೆ ಕೋವಿಡ್​ ಪಾಸಿಟಿವ್
ಮಾಜಿ ಮುಖ್ಯಮಂತ್ರಿ ಹೆಚ್​ ಡಿ ಕುಮಾರಸ್ವಾಮಿ
Edited By:

Updated on: Jul 11, 2022 | 10:17 PM

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್​​.ಡಿ ಕುಮಾರಸ್ವಾಮಿ (HD Kumarswamy) ಅವರಿಗೆ ಕೊರೊನಾ (Covid) ಸೋಂಕು ದೃಢಪಟ್ಟಿದೆ. ಈ ಸಂಬಂಧ ಟ್ವೀಟ್​ ಮಾಡಿದ ಅವರು, ‘ಸಣ್ಣ ಪ್ರಮಾಣದ ಜ್ವರ, ಮೈಕೈ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದು, ಫಲಿತಾಂಶ ಪಾಸಿಟಿವ್ ಬಂದಿದೆ’ ಎಂದು ತಿಳಿಸಿದ್ದಾರೆ. ಕೋವಿಡ್‌ ಲಕ್ಷಣಗಳು ಕಾಣಿಸಿಕೊಂಡಿರುವ ಕಾರಣ, ವೈದ್ಯರು ಹೋಮ್ ಐಸೋಲೇಷನ್ ನಲ್ಲಿಯೇ ಇದ್ದು ಚಿಕಿತ್ಸೆ ಪಡೆಯುವಂತೆ ಅವರಿಗೆ ಸೂಚಿಸಿದ್ದಾರೆ.

‘ವೈದ್ಯರ ಸೂಚನೆಯಂತೆ, ನಾನು 10 ದಿನಗಳ ಕಾಲ ಮನೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತೇನೆ. ದಯಮಾಡಿ ಯಾರೂ ನನ್ನ ಭೇಟಿಗೆ ಬರಬಾರದೆಂದು ವಿನಂತಿಸುತ್ತೇನೆ. ಯಾರೂ ಅನ್ಯತಾ ಭಾವಿಸಬಾರದು. 3-4 ದಿನಗಳಿಂದ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದಿದ್ದವರೆಲ್ಲರೂ ತಪ್ಪದೇ ಕೋವಿಡ್‌ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಕೋರುತ್ತೇನೆ’ ಎಂಬುದಾಗಿ ಕುಮಾರಸ್ವಾಮಿಯವರು ಟ್ವೀಟ್ ಮಾಡಿದ್ಧಾರೆ.

 

Published On - 10:10 pm, Mon, 11 July 22