ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ

ಗಣೇಶ ಹಬ್ಬ ಹಿನ್ನೆಲೆ ಗಣಪತಿ ವೇಷಧರಿಸಿ ಬಾಲಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾನೆ. ಗಣೇಶ ವೇಷದಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತನಾಡಿದ್ದಾರೆ.

ಗಣೇಶ ಹಬ್ಬದ ಸಂಭ್ರಮದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ; ಗಣೇಶ ವೇಷಧಾರಿ ಜತೆ ಮಾತುಕತೆ
ಗಣೇಶ ವೇಷದಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ
Follow us
TV9 Web
| Updated By: preethi shettigar

Updated on:Sep 10, 2021 | 9:15 AM

ಬೆಂಗಳೂರು: ನಾಡಿನೆಲ್ಲೇಡೆ ಇಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಅದರಂತೆ ಈ ಸಂಭ್ರಮಾಚರಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೂಡ ಭಾಗಿಯಾಗಿದ್ದಾರೆ. ಬಿಡದಿ ತೋಟದ ಮನೆಯಲ್ಲಿ ಕುಮಾರಸ್ವಾಮಿ ಗಣೇಶ ಹಬ್ಬ ಆಚರಣೆ ಮಾಡುತ್ತಿದ್ದು, ಗಣೇಶ ಹಬ್ಬ(Ganesha Chaturthi 2021) ಹಿನ್ನೆಲೆ ಗಣಪತಿ ವೇಷಧರಿಸಿ ಬಾಲಕ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲು ಆಗಮಿಸಿದ್ದಾನೆ. ಗಣೇಶ ವೇಷಧಾರಿ ಬಾಲಕನ ಜೊತೆ ಮಾಜಿ ಸಿಎಂ ಕುಮಾರಸ್ವಾಮಿ ಕೆಲ ಕಾಲ ಮಾತನಾಡಿದ್ದಾರೆ.

ಗಣೇಶ ಹಬ್ಬದ ಹಿನ್ನಲೆ ಕೆ.ಆರ್ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಹಬ್ಬಕ್ಕೆ ಹೂವು, ಹಣ್ಣು ಸೇರಿದಂತೆ ಇತರೆ ವಸ್ತುಗಳ ದರ ಏರಿಕೆಯಾಗಿದೆ. ದರ ಏರಿಕೆ‌ ಮಧ್ಯೆಯೂ ಅಗತ್ಯ ವಸ್ತುಗಳ ಖರೀದಿಗೆ ಜನ ಮುಂದಾಗಿದ್ದಾರೆ. ಇಂದು ಕೆ. ಆರ್. ಮಾರುಕಟ್ಟೆಯಲ್ಲಿನ ಹೂವಿನ ಬೆಲೆ ಹೀಗಿವೆ. ಸೇವಂತಿಗೆ (ಒಂದು ಮಾರು)70-90 ರೂ. ಸುಗಂಧರಾಜ ಹಾರ 130-170 ರೂ. ಮಲ್ಲಿಗೆ ಹೂವು (ಮೊಳ) 40-50 ರೂ. ಮಾವಿನ ಸೊಪ್ಪು (1 ಕಟ್ಟು) 20-25 ರೂ. ಬಾಳೆ ಕಂದು‌ ಜೋಡಿ 50-80 ರೂ.

ಹಾಸನ: ಕೊವಿಡ್ ನಿಯಮ ಮರೆತು ಹಬ್ಬದ ಖರೀದಿಗೆ ಮುಗಿಬಿದ್ದ ಜನರು ಹಾಸನದಲ್ಲಿ ಗಣೇಶ ಚತುರ್ಥಿ ಸಡಗರ ಜೋರಾಗಿದ್ದು, ಕೊವಿಡ್ ನಿಯಮ ಮರೆತು ಹಬ್ಬದ ಖರೀದಿಗೆ ಜನರು ಮುಗಿಬಿದ್ದಿದ್ದಾರೆ. ಅಪಾರ ಸಂಖ್ಯೆಯಲ್ಲಿ ಜನರು ಮಾರುಕಟ್ಟೆಯಲ್ಲಿ  ಭಾಗಿಯಾಗಿದ್ದಾರೆ. ಕೊರೊನಾ ನಿಯಮ ಪಾಲಿಸಿ ಹಬ್ಬ ಆಚರಣೆಗೆ ಅನುಮತಿ ನೀಡಿರುವ ಸರ್ಕಾರದ ನಿಯಮವನ್ನು ಗಾಳಿಗೆ ತೂರಲಾಗಿದೆ.

ಬೆಳಗಾವಿಯಲ್ಲಿ ಹೂವು ಖರೀದಿಗೆ ಮುಗಿಬಿದ್ದಿರುವ ಜನ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ನೆಹರು ನಗರದಲ್ಲಿರುವ ಪುಷ್ಪ ಖರೀದಿ ಮಾರುಕಟ್ಟೆಯಲ್ಲಿ ಜನಸಾಗರ ನಿರ್ಮಾಣವಾಗಿದೆ. ದೈಹಿಕ ಅಂತರ ಮರೆತು, ಮಾಸ್ಕ್ ಧರಿಸದೆ ಜನರು ನಿರ್ಲಕ್ಷ್ಯ ತೋರಿದ್ದಾರೆ. ವ್ಯಾಪಾರಸ್ಥರು ಕೂಡ ಕೊವಿಡ್ ನಿಯಮ ಮರೆತು ವಹಿವಾಟು ನಡೆಸುತ್ತಿದ್ದಾರೆ. ಆದರೆ ಮಾರುಕಟ್ಟೆಯತ್ತ ಪೊಲೀಸರು, ಮಹಾನಗರ ಪಾಲಿಕೆ ಸಿಬ್ಬಂದಿಗಳು ಮಾತ್ರ ಭೇಟಿ ನೀಡಿಲ್ಲ.

ಜೆಪಿ ನಗರದ ಸತ್ಯಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಹಾಗೂ ಪೂಜೆ ಇವತ್ತು ಗಣೇಶ ಚತುರ್ಥಿಯ ಹಿನ್ನಲೆಯಲ್ಲಿ ಜೆಪಿ ನಗರದ ಸತ್ಯಗಣಪತಿ ದೇವಸ್ಥಾನದಲ್ಲಿ ವಿಶೇಷ ಆಲಂಕಾರ ಹಾಗೂ ಪೂಜೆ ನಡೆಸಲಾಗಿದೆ. ಶ್ರೀಸತ್ಯ ಗಣಪತಿ ದೇವಸ್ಥಾನದಲ್ಲಿ ಮುಸುಕಿನ ಜೋಳ, ಸೊಪ್ಪುಗಳನ್ನು ಹಾಗೂ ಹೂವುಗಳನ್ನು ಬಳಸಿ ಗಣೇಶನಿಗೆ ಅಲಂಕಾರ ಮಾಡಲಾಗಿದೆ. ದೇವರ ದರ್ಶನಕ್ಕೆ ಭಕ್ತ ಸಮೂಹ ಆಗಮಿಸುತ್ತಿದ್ದು, ಭಕ್ತಾಧಿಗಳ ಮನಸೆಳೆಯಲು ದೇವಾಲಯ ಸಜ್ಜಾಗಿದೆ.

ಇದನ್ನೂ ಓದಿ: ಗಣೇಶ ಹಬ್ಬದ ಮಾರ್ಗಸೂಚಿಗೆ ಅಸಮಾಧಾನ; ಬಿಬಿಎಂಪಿ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧಾರ

ಗಣಪತಿಯನ್ನೇ ಪರಬ್ರಹ್ಮ ಎಂದು ಆರಾಧಿಸುವ ಪಂಥ ಗಾಣಪತ್ಯ: ಶ್ರೀನಗರದ ಗಾಣಪತ್ಯರ್ ದೇಗುಲಕ್ಕೂ ಅಫ್ಘಾನಿಸ್ತಾನಕ್ಕೂ ಇದೆ ನಂಟು

Published On - 8:38 am, Fri, 10 September 21

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ