AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ: ಹಲವು ಯೋಜನೆಗಳ ಜಾರಿಗೆ ಮನವಿ

ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೆ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನೀರಿಕ್ಷೆಯನ್ನು ಹುಸಿಗೊಳಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪತ್ರ: ಹಲವು ಯೋಜನೆಗಳ ಜಾರಿಗೆ ಮನವಿ
ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಸಿದ್ದರಾಮಯ್ಯ
ಕಿರಣ್​ ಹನಿಯಡ್ಕ
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 18, 2023 | 5:22 PM

Share

ಬೆಂಗಳೂರು, ಡಿಸೆಂಬರ್​ 18: ಹೊಸ ಸರ್ಕಾರ ಬಂದು ಬೆಳಗಾವಿಯಲ್ಲಿ ಪ್ರಥಮ ಅಧಿವೇಶನ ನಡೆಸುವ ಸಂದರ್ಭದಲ್ಲಿ ಉತ್ತರ ಕರ್ನಾಟಕ (uttar karnataka) ದ ಬಗ್ಗೆ ವಿಶೇಷ ಚರ್ಚೆ ಮತ್ತು ಸಮರ್ಪಕವಾಗಿ ಉತ್ತರವನ್ನು ಉತ್ತರ ಕರ್ನಾಟಕದ ಜನರು ನಿರೀಕ್ಷೆ ಮಾಡಿದ್ದರು. ಆದರೆ, ಯಾವುದೆ ಅಭಿವೃದ್ಧಿ ಪರ ನಿರ್ಣಯಗಳನ್ನು ಸರ್ಕಾರ ಘೋಷಿಸದೇ ಈಗಾಗಲೇ ಇರುವಂತಹ ಕಾರ್ಯಕ್ರಮಗಳನ್ನು ಪುನಃ ಘೋಷಿಸಿ ಜನರ ನೀರಿಕ್ಷೆಯನ್ನು ಹುಸಿಗೊಳಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಲವು ಯೋಜನೆಗಳ ಜಾರಿ ಕೋರಿ ಸಿಎಂ ಸಿದ್ದರಾಮಯ್ಯಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ತುಂಗಭದ್ರ ಸಮತೋಲನ ಜಲಾಶಯಕ್ಕೆ ಕೂಡಲೇ ನೆರೆ ರಾಜ್ಯಗಳೊಂದಿಗೆ ಮಾತನಾಡಿ ಯೋಜನೆ ಜಾರಿಗೆ ಕ್ರಮ ತೆಗೆದುಕೊಳ್ಳಬೇಕು. ಕೊಪ್ಪಳ ಮತ್ತು ರಾಯಚೂರು ವಿಮಾನ‌ ನಿಲ್ದಾಣಕ್ಕೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ಇಟ್ಟ ಹಣ ಪ್ರಯೋಜನ ಪಡೆಯಲು ಕೂಡಲೇ ಗಮನ ಹರಿಸಬೇಕು.

ಹಾವೇರಿಯಲ್ಲಿ ಮೆಡಿಕಲ್ ಕಾಲೇಜು ಆರಂಭಿಸಿದ್ದು, ಅಗತ್ಯ ಹಣ ಬಿಡುಗಡೆ ಮಾಡಬೇಕು. ಹಾವೇರಿ ಮೆಗಾ ಡೈರಿಗೆ ಕೂಡಲೇ ಹಣ ಬಿಡುಗಡೆ ಮಾಡಬೇಕು. ರಾಣೆ ಬೆನ್ನೂರು ಮಿನಿ ಟೆಕ್ಸ್ ಟೈಲ್ ಪಾರ್ಕ್​​ನ್ನು ಶೀಘ್ರವೇ ಆರಂಭಿಸಬೇಕು.

ಇದನ್ನೂ ಓದಿ: ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳ ಬಗ್ಗೆ ಚರ್ಚೆ ಮಾಡದಿದ್ದರೆ ಸುವರ್ಣಸೌಧ ಏಕೆ? ಹೆಚ್​ ವಿಶ್ವನಾಥ್ ಕಿಡಿ

ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಹಾನಗಲ್ ಬ್ಯಾಡಗಿ ಏತ ನೀರಾವರಿ ಯೋಜನೆ ಪೂರ್ಣಗೊಳಿಸಿ ಬರುವ ಮುಂಗಾರಿನಲ್ಲಿ ಚಾಲನೆ ನೀಡಬೇಕು. ನೂತನ ಏಳು ವಿಶ್ವ ವಿದ್ಯಾಲಯಗಳನ್ನು ಅನುದಾನದ ಕೊರತೆ ನೆಪದಲ್ಲಿ ಮುಚ್ಚುವ ಪ್ರಸ್ತಾಪವನ್ನು ಕೈ ಬಿಡಬೇಕು ಎಂದಿದ್ದಾರೆ.

ವಿಜಯಪುರ ಜಿಲ್ಲೆಯಲ್ಲಿ ದ್ರಾಕ್ಷಿ ಬೆಳೆಯ ಸಂಸ್ಕರಣ ಮತ್ತು ಶೀತಲ ಘಟಕ ಸ್ಥಾಪನೆಗೆ ನಮ್ಮ ಸರ್ಕಾರ ಇದ್ದಾಗ 100 ಕೋಟಿ ರೂ. ಮಂಜೂರು ಮಾಡಿದ್ದು, ಈ ಬಗ್ಗೆ ಯಾವುದೇ ಭರವಸೆ ನೀಡದಿರುವುದು ನಿರಾಸೆಯಾಗಿದೆ. ವಿಜಯಪುರ ವಿಮಾನ ನಿಲ್ದಾಣ ಪೂರ್ಣಗೊಳ್ಳುವ ಹಂತದಲ್ಲಿದ್ದರೂ ಕೂಡ ಈ ವರ್ಷದ ಬಜೆಟ್​ನಲ್ಲಿ ಹಣ ಮೀಸಲಿಡದಿರುವುದು ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮಾರಕವಾಗುತ್ತದೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: Belagavi Session: ಬೆಳಗಾವಿ ಅಧಿವೇಶನಕ್ಕೆ ಇಂದು ತೆರೆ: ಚರ್ಚೆ ಆಗಿದ್ದೇನು, ಬಾಕಿ ಉಳಿದಿದ್ದೇನು?

ಕೊಪ್ಪಳ ಜಿಲ್ಲೆಯ ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದ್ದು, ಈ ಬಗ್ಗೆ ನಿಮ್ಮ ಸರ್ಕಾರ ಆಲೋಚನೆ ಮಾಡದಿರುವುದು ಈ ಭಾಗದ ಪ್ರವಾಸೋದ್ಯಮದ ಅಭಿವೃದ್ಧಿಗೆ ತೋರಿಸುತ್ತಿರುವ ದಿವ್ಯ ನಿರ್ಲಕ್ಷ್ಯವಾಗಿದೆ. ಈಗಾಗಲೇ ನಮ್ಮ ಸರ್ಕಾರದ ಅವಧಿಯಲ್ಲಿ ಹುಬ್ಬಳ್ಳಿ ಪ್ರಾರಂಭವಾಗಿರುವ ಜಯದೇವ ಹೃದ್ರೋಗ ಸಂಸ್ಥೆ ಹಾಗೂ ಬೆಳಗಾವಿಯಲ್ಲಿ ಕಿದ್ವಾಯಿ ಸಂಸ್ಥೆಗಳಿಗೆ ಅನುದಾನ ಘೋಷಣೆ ಮಾಡುತ್ತಾರೆನ್ನುವ ನಿರೀಕ್ಷೆ ಹುಸಿಯಾಗಿದೆ.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ 5000 ಕೋಟಿ ರೂ. ನೀಡುವುದಾಗಿ ಬಜೆಟ್​ನಲ್ಲಿ ಘೋಷಣೆ ಮಾಡಿದ್ದೀರಿ, ಆದರೆ ಇದುವರೆಗೂ ಆ ಭಾಗದ ಯಾವುದೇ ಯೋಜನೆಗಳಿಗೆ ಅನುಮೋದನೆ ನೀಡದಿರುವುದು ಹಿಂದುಳಿದ ಭಾಗದ ಬಗ್ಗೆ ನಿಮಗಿರುವ ನಿರ್ಲಕ್ಷ್ಯದ ಧೋರಣೆ ಎತ್ತಿ ತೋರಿಸುತ್ತದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಬಿಜೆಪಿಯಲ್ಲಿ ಮೊದಲ ಹಂತದ ಶುದ್ಧೀಕರಣ ಕಾರ್ಯ ಮುಗಿದಿದೆ: ಸದಾನಂದಗೌಡ
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು