ಮೋದಿ ಕರ್ನಾಟಕ ಭೇಟಿ ಬೆನ್ನಲ್ಲೇ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನ ಮುಗಿಸಿ ಮೋದಿ ದೆಹಲಿಗೆ ವಾಪಸ್ ಆಗಿದ್ದಾರೆ. ಇನ್ನು ಮೋದಿ ಕರ್ನಾಟಕ ಭೇಟಿ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ.
ಬೆಂಗಳೂರು: ಎರಡು ದಿನ ರಾಜ್ಯ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಬೆಳಿಗ್ಗೆ ವಿಶೇಷ ವಿಮಾನ ಮೂಲಕ ದೆಹಲಿಗೆ ತೆರಳಿದ್ದಾರೆ. ನಿನ್ನೆ ಬೆಳಿಗ್ಗೆ ಬೆಂಗಳೂರಿಗೆ ಆಗಮಿಸಿದ್ದ ಮೋದಿ, ಇಂದು ಬೆಳಿಗ್ಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ (International Yoga Day) ಭಾಗಿಯಾಗಿದ್ದರು. ರಾಜ್ಯದಲ್ಲಿ ಆಯೋಜನೆಗೊಂಡಿದ್ದ ಕಾರ್ಯಕ್ರಮಗಳನ್ನ ಮುಗಿಸಿ ಮೋದಿ ದೆಹಲಿಗೆ ವಾಪಸ್ ಆಗಿದ್ದಾರೆ. ಇನ್ನು ಮೋದಿ ಕರ್ನಾಟಕ ಭೇಟಿ ಬೆನ್ನಲ್ಲೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ. ಕುಟುಂಬ ಸಮೇತ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಿದ್ದಾರೆ. ಬಿಎಸ್ವೈ ಜೊತೆ ಪುತ್ರ ಬಿವೈ ವಿಜಯೇಂದ್ರ ಕೂಡ ಇದ್ದಾರೆ.
ಲಾಭದ ನಿರೀಕ್ಷೆಯಲ್ಲಿ ಬಿಜೆಪಿ: ಹಳೇ ಮೈಸೂರು ಭಾಗದಲ್ಲಿ ಬಿಜೆಪಿ ದೊಡ್ಡ ಲಾಭದ ನಿರೀಕ್ಷೆ ಹೊಂದಿದೆ. 2023ರ ವಿಧಾನಸಭಾ ಚುನಾವಣೆ ದೃಷ್ಟಿಯಿಂದ ಬಿಜೆಪಿ ಲೆಕ್ಕಾಚಾರ ಹಾಕುತ್ತೊದೆ. ಹೈಕಮಾಂಡ್ ಹಳೇ ಮೈಸೂರು ಭಾಗದಲ್ಲಿ ರಾಜ್ಯ ನಾಯಕರಿಗೆ ಪಕ್ಷ ಸಂಘಟನೆಗೆಂದು 2 ತಿಂಗಳ ಹಿಂದೆ ಟಾಸ್ಕ್ ನೀಡಿದ್ದತ್ತು. ಏ.1ರಂದು ಬೆಂಗಳೂರಿನಲ್ಲಿ ನಡೆದಿದ್ದ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಅಮಿತ್ ಶಾ ಸಂಘಟನೆಗೆ ನಿರ್ದೇಶನ ನೀಡಿದ್ದರು. ನೀವು ಬಿಟ್ಟರೂ ನಾನು ಬಿಡಲ್ಲವೆಂದು ಸೂಚ್ಯವಾಗಿ ಅಮಿತ್ ಶಾ ಹೇಳಿದ್ದರು.
ಇದನ್ನೂ ಓದಿ: Video Viral: ಬಾಣಲೆಯ ಹೊಡೆತಕ್ಕೆ ಹಿಮ್ಮೆಟ್ಟಿದ ಮೊಸಳೆ
ತಾವೇ ಅಜೆಂಡಾ ರೂಪಿಸುವುದಾಗಿ ಪಕ್ಷದ ವರಿಷ್ಠರು ಸೂಚಿಸಿದ್ದರು. ಕೇಂದ್ರದ ಜನಪ್ರಿಯ ಯೋಜನೆಗಳನ್ನು ಜನರಿಗೆ ತಲುಪಿಸಬೇಕು. ಫಲಾನುಭವಿಗಳಿಗೆ ತಲುಪುವುದು ಪ್ರಮುಖ ಟಾರ್ಗೆಟ್ ಎಂದು ಈ ಹಿಂದೆ ಚರ್ಚೆ ನಡೆದಿದೆ. ಇದರ ಭಾಗವಾಗಿ ಪ್ರಧಾನಿ ಮೋದಿ ನಿನ್ನೆ ಕೇಂದ್ರ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಿದ್ದಾರೆ. ಜೊತೆಗೆ ಮೈಸೂರು ಭಾಗದಲ್ಲಿ ದೇವಾಲಯ, ಮಠಕ್ಕೆ ಭೇಟಿ ನೀಡುವ ಮೂಲಕ ಸಮುದಾಯವಾರು ಪ್ರಭಾವದ ಪ್ರಯತ್ನ ನಡೆಸಿದ್ದಾರೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:29 pm, Tue, 21 June 22