ಕೊವಿಡ್ ಮತ್ತು ಅಪರಾಧ ಚಟುವಟಿಕೆಗಳ ಹೆಚ್ಚಳದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಳವಳ

ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಕೇವಲ 200 ಅಥವಾ 500 ರೂ.ಗೆ ಕೊಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಹ ಒತ್ತಾಯಿಸಿದರು.

ಕೊವಿಡ್ ಮತ್ತು ಅಪರಾಧ ಚಟುವಟಿಕೆಗಳ ಹೆಚ್ಚಳದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಳವಳ
ಎಚ್.ಡಿ.ಕುಮಾರಸ್ವಾಮಿ
TV9kannada Web Team

| Edited By: guruganesh bhat

Jul 31, 2021 | 3:46 PM

ನೆಲಮಂಗಲ: ಕೊವಿಡ್ 3ನೇ ಅಲೆ ಬರುವ ಬಗ್ಗೆ ಬಗ್ಗೆ ತಜ್ಞರು ಹೇಳುತ್ತಿದ್ದಾರೆ. ರಾಜ್ಯದಲ್ಲಿ ಪ್ರತಿದಿನ 50-100 ಕೊವಿಡ್ ಕೇಸ್ ಹೆಚ್ಚಾಗುತ್ತಿದೆ. ಕೊರೊನಾ 2ನೇ ಅಲೆ ವೇಳೆ ಲಾಕ್‌ಡೌನ್‌ಗೆ (Karnataka Lockdown) ಸಲಹೆ ನೀಡಿದ್ದೆ. ಆಗ ನಿರ್ಲಕ್ಷ್ಯದಿಂದ ಮುಂಜಾಗ್ರತಾ ಕ್ರಮ ಕೈಗೊಂಡಿರಲಿಲ್ಲ. ಈಗಲಾದರೂ ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಬೆಂಗಳೂರಿನ ಸೋಮಶೆಟ್ಟಿಹಳ್ಳಿಯಲ್ಲಿ ಸರ್ಕಾರವನ್ನು ಒತ್ತಾಯಿಸಿದರು. ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ ಅವರು, ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ ಕೇವಲ 200 ಅಥವಾ 500 ರೂ.ಗೆ ಕೊಲೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಸಹ ಒತ್ತಾಯಿಸಿದರು.

ಒಂದೆಡೆ ಕೊರೊನಾ ಹೆಚ್ಚಳ, ಮತ್ತೊಂದೆಡೆ ಪ್ರವಾಹ ಪರಿಸ್ಥಿತಿ. ಇಂತಹ ಸ್ಥಿತಿಯಲ್ಲಿ ಸಚಿವ ಸಂಪುಟ ರಚನೆಗೆ ಗಮನ ಕೊಟ್ಟಿದ್ದಾರೆ. ತಮ್ಮ ಕ್ಷೇತ್ರಗಳಿಗೆ ತೆರಳುವಂತೆ ಶಾಸಕರಿಗೆ ಸಿಎಂ ಸೂಚಿಸಬೇಕು. ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿಗಳಿಗೆ ಜಿಲ್ಲೆಗಳಿಗೆ ತೆರಳಿ ಕೆಲಸ ಮಾಡುವಂತೆ ಸಿಎಂ ಸೂಚಿಸಬೇಕು. ಕೊರೊನಾ 3ನೇ ಅಲೆ ತಡೆಗೆ ಶೀಘ್ರದಲ್ಲೇ ಕ್ರಮಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು. 2 ವರ್ಷಗಳಿಂದ ಸಿಎಂ ಭೇಟಿಗೆ ಜನಸಾಮಾನ್ಯರಿಗೆ ಅವಕಾಶ ದೊರೆಯುತ್ತಿಲ್ಲ. ಜನಸಾಮಾನ್ಯರು ಕಷ್ಟವನ್ನು ಯಾರೂ ನೇರವಾಗಿ ಕೇಳುತ್ತಿಲ್ಲ. ಸಿಎಂ ಬಸವರಾಜ ಬೊಮ್ಮಾಯಿ ಅದನ್ನು ಸರಿಪಡಿಸಬೇಕಾಗಿದೆ ಎಂದು ಸಹ ಜೆಡಿಎಸ್ ವರಿಷ್ಠರೂ ಆಗಿರುವ ಎಚ್.ಡಿ.ಕುಮಾರಸ್ವಾಮಿ ಆಗ್ರಹ ವ್ಯಕ್ತಪಡಿಸಿದರು.

ಇದನ್ನೂ ಓದಿ: 

Karnataka Covid-19: ಕರ್ನಾಟಕದಲ್ಲಿ ಹೊಸ ಮಾರ್ಗಸೂಚಿ ಬಿಡುಗಡೆ; ಕೇರಳ, ಮಹಾರಾಷ್ಟ್ರದ ಪ್ರಯಾಣಿಕರಿಗೆ ಕೊವಿಡ್ ನೆಗೆಟಿವ್ ವರದಿ ಕಡ್ಡಾಯ 

ರಾಜ್ಯ ಕಾಂಗ್ರೆಸ್​ನಲ್ಲಿ ಭಿನ್ನಮತವಿದೆ ಎಂಬುದನ್ನು ಪರೋಕ್ಷವಾಗಿ ಒಪ್ಪಿಕೊಂಡ ಉಸ್ತುವಾರಿ ರಣದೀಪ್ ಸುರ್ಜೇವಾಲಾ

(Former CM HD Kumaraswamy concerns over increase in Covid cases and criminal activities in Bengaluru)

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada