AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾವೇರಿ ನದಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ

ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲ ಹೆಚ್​​ ಡಿ ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಶನಿವಾರದಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಇವರ ಆರೋಗ್ಯ ವಿಚಾರಿಸಲೆಂದು ಆಸ್ಪತ್ರೆಗೆ ಆಗಮಿಸಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಅವರಿಗೆ ಕಾವೇರಿ ನದಿ ನೀರು ಹಂಚಿಕೆ ಬಗ್ಗೆ ಚರ್ಚಿಸಿದ್ದಾರೆ.

ಕಾವೇರಿ ನದಿ ಹೋರಾಟಕ್ಕೆ ಆಸ್ಪತ್ರೆಯಿಂದಲೇ ಕರೆ ಕೊಟ್ಟ ಹೆಚ್​ಡಿ ಕುಮಾರಸ್ವಾಮಿ
ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ
Sunil MH
| Updated By: ವಿವೇಕ ಬಿರಾದಾರ|

Updated on: Sep 01, 2023 | 11:57 AM

Share

ಬೆಂಗಳೂರು: ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ತಮಿಳುನಾಡಿಗೆ (Tmil Nadu) ಕಾವೇರಿ (Cauvery) ನೀರು ಬಿಡುತ್ತಿರುವ ಸರ್ಕಾರದ ಕ್ರಮವನ್ನು ಖಂಡಿಸಿ ಮಂಡ್ಯ, ರಾಮನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ಇತ್ತ ಅನಾರೋಗ್ಯದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಅವರು ನಗರದ ಅಪೋಲೊ ಆಸ್ಪತ್ರೆಗೆ ದಾಖಲಾಗಿದ್ದು, ಇದೀಗ ಆಸ್ಪತ್ರೆಯಲ್ಲಿದ್ದುಕೊಂಡೇ ಕಾವೇರಿ ನೀರಿಗಾಗಿ ಹೋರಾಟ ಆರಂಭಿಸುವಂತೆ ಕರೆ ಕೊಟ್ಟಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ಅನಾರೋಗ್ಯದ ಹಿನ್ನೆಲೆಯಲ್ಲಿ ಹೆಚ್​​ ಡಿ ಕುಮಾರಸ್ವಾಮಿಯವರು ಆಸ್ಪತ್ರೆಗೆ ದಾಖಲಾಗಿದ್ದರು. ಇವರ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ನಾಳೆ (ಸೆ.02) ರಂದು ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ. ಇವರ ಆರೋಗ್ಯ ವಿಚಾರಿಸಲೆಂದು ಆಸ್ಪತ್ರೆಗೆ ತೆರಳಿದ್ದ ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಅವರಿಗೆ ಜೆಡಿಎಸ್​​ನಿಂದ ಕಾವೇರಿ ಹೋರಾಟ ಆರಂಭಿಸವಂತೆ ಹೇಳಿದ್ದಾರೆ.

ಈ ಬಗ್ಗೆ ಮಾಜಿ ಶಾಸಕ ಅನ್ನದಾನಿ ಮಾತನಾಡಿ ಸದ್ಯದ ಕಾವೇರಿ ಪರಿಸ್ಥಿತಿ ಬಗ್ಗೆ ಚರ್ಚೆ ಮಾಡಿದರು. ಅರ್ಧಗಂಟೆಗೂ ಹೆಚ್ಚು ಕಾಲ ನನ್ನೊಟ್ಟಿಗೆ ಮಾತನಾಡಿದ್ದಾರೆ, ಆರೋಗ್ಯವಾಗಿದ್ದಾರೆ. ಕಾವೇರಿ ನೀರು ಉಳಿವಿಗಾಗಿ ಹೋರಾಟ ಶುರು ಮಾಡಿ ಅಂತ ಕರೆ ಕೊಟ್ಟಿದ್ದಾರೆ. ನಾಳೆ (ಸೆ.02) ರಾಷ್ಟ್ರೀಯ ಅಧ್ಯಕ್ಷರಾದ ದೇವೆಗೌಡರ ನೇತೃತ್ವದಲ್ಲಿ ಚಳುವಳಿ ಆರಂಭವಾಗಲಿದೆ ಎಂದರು.

ಇದನ್ನೂ ಓದಿ: ಸುಪ್ರೀಂ ಕೋರ್ಟ್‌ನಲ್ಲಿ ಕಾವೇರಿ ಪ್ರಕರಣದ ವಿಚಾರಣೆ ಶುಕ್ರವಾರ ನಡೆಯುವುದು ಅನುಮಾನ; ಕಾರಣ ಇಲ್ಲಿದೆ

ಸದ್ಯದ ನೀರಿನ ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಮುಂದಿನ ದಿನಗಳಲ್ಲಿ ಮಂಡ್ಯ ಸೇರಿದಂತೆ ಬೆಂಗಳೂರಿಗೂ ನೀರಿನ ಅಭಾವ ಎದುರಾಗಲಿದೆ. ಈಗಾಗಿ ಚಳುವಳಿ ಅಗತ್ಯವಿದೆ ಎಂದು ಕುಮಾರಣ್ಣ ಹೇಳಿದ್ದಾರೆ. ಅದರಂತೆ ನಾಳೆಯಿಂದ ಚಳುವಳಿ ಆರಂಭಿಸಿಸುತ್ತೇವೆ ಎಂದು ತಿಳಿಸಿದರು.

 ಕೆಆರ್​ಎಸ್​, ಕಬಿನಿ ಡ್ಯಾಮ್​​ಗಳಿಗೆ ಬಿಜೆಪಿ ಭೇಟಿ

ಕೆಆರ್​ಎಸ್​​ ಡ್ಯಾಮ್​ನಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳಿಗೆ ಭೇಟಿ ನೀಡಲು ವಿಪಕ್ಷ ಬಿಜೆಪಿ ಮುಂದಾಗಿದೆ. ಕೆಆರ್​ಎಸ್​, ಕಬಿನಿ, ಕಾವೇರಿ ನದಿ ಅಚ್ಚುಕಟ್ಟು ಪ್ರದೇಶದ ಜಲಾಶಯಗಳಿಗೆ ಭೇಟಿ ನೀಡಲಿದ್ದಾರೆ. ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ‌ ನೇತೃತ್ವದಲ್ಲಿ ಶೀಘ್ರದಲ್ಲೇ ಭೇಟಿ ನೀಡಲು ಪ್ಲ್ಯಾನ್ ರೂಪಿಸಲಾಗಿದೆ. ಸದ್ಯ ಬಸವರಾಜ ಬೊಮ್ಮಾಯಿ ಕಣ್ಣಿನ ಶಸ್ತ್ರಚಿಕಿತ್ಸೆಗೊಳಪಟ್ಟು ವಿಶ್ರಾಂತಿಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ