ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​; ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು

‘ಕಾವೇರಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ತಮಿಳುನಾಡಿನಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೂ ನೀರಿಗಾಗಿ ಖ್ಯಾತೆ ನಡೆಯುತ್ತಿದೆ. ಸರ್ಕಾರ ಯಾವುದೇ ರೀತಿ ರಾಜ್ಯದ ಜನರ ಪರವಾಗಿ ನಿಲುವು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕಾವೇರಿ ನೀರಿಗಾಗಿ ಕರ್ನಾಟಕ ಬಂದ್​; ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ ಹೇಳಿದ್ದಿಷ್ಟು
ಹೆಚ್​ಡಿ ಕುಮಾರಸ್ವಾಮಿ
Follow us
Sunil MH
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 29, 2023 | 9:00 AM

ಬೆಂಗಳೂರು, ಸೆ.29: ಕಾವೇರಿಗಾಗಿ ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದ್ದು,ಇಂದು ಕರ್ನಾಟಕ ಬಂದ್​(Karnataka Bandh)ಗೆ ಕರೆ ನೀಡಲಾಗಿದೆ. ಈ ವಿಚಾರವಾಗಿ  ಮಾತನಾಡಿದ ಮಾಜಿ ಸಿಎಂ ಹೆಚ್​.ಡಿ ಕುಮಾರಸ್ವಾಮಿ (HD Kumaraswamy) ಅವರು ‘ಈಗಿನ ಪರಿಸ್ಥಿತಿಯಲ್ಲಿ ಕಾವೇರಿ ನೀರಿಗಾಗಿ ಹೋರಾಟ ಮಾಡುವುದು ಅನಿವಾರ್ಯವಾಗಿದೆ.  ‘ಕರ್ನಾಟಕ ಬಂದ್​ಗೆ ನನ್ನ ಸಂಪೂರ್ಣ ಬೆಂಬಲವಿದೆ. ಜೆಡಿಎಸ್ ಪಕ್ಷದಿಂದ ನೈತಿಕ ಬೆಂಬಲ ಘೋಷಣೆ ಮಾಡಿದ್ದೇವೆ.  ಸರ್ಕಾರದ ನಡವಳಿಕೆಯನ್ನು ನೋಡಿದರೆ ಒಲೈಕೆ ರಾಜಕಾರಣ ಮಾಡುತ್ತಿದ್ದಾರೆ ಎಂದರು.

ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ  ಮಾತನಾಡಿ ‘ಕಾವೇರಿ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ತಮಿಳುನಾಡಿನಲ್ಲಿ ಈಗಾಗಲೇ ಸಾಕಷ್ಟು ಮಳೆಯಾಗಿದೆ. ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಆದರೂ ನೀರಿಗಾಗಿ ಖ್ಯಾತೆ ನಡೆಯುತ್ತಿದೆ. ಸರ್ಕಾರ ಯಾವುದೇ ರೀತಿ ರಾಜ್ಯದ ಜನರ ಪರವಾಗಿ ನಿಲುವು ತೆಗೆದುಕೊಳ್ಳುತ್ತಿಲ್ಲ. ಹೀಗಾಗಿ ಹೋರಾಟ ಅನಿವಾರ್ಯವಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕುಮಾರಸ್ವಾಮಿಯವರು ಕಿಡಿಕಾರಿದರು.

ಇದನ್ನೂ ಓದಿ: ಸೆಪ್ಟೆಂಬರ್ 29 ರಂದು ಕರ್ನಾಟಕ ಬಂದ್ ಹಿನ್ನೆಲೆ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆ ಮುಂದೂಡಿಕೆ

ಇನ್ನು ಕರ್ನಾಟಕ ಬಂದ್​ ವಿಚಾರವಾಗಿ  ಬಿಎಸ್ ಯಡಿಯೂರಪ್ಪ ಅವರು ಮಾತನಾಡಿದ್ದು, ‘ಎಲ್ಲರೂ ಸಹ ಬಂದ್​ಗೆ ಸಹಕಾರ ಕೊಡಬೇಕು. ಇದರಿಂದ ಬಂದ್ ಯಶಸ್ವಿಯಾಗುತ್ತೆ. ನಾನು ಅಸ್ಸಾಂಗೆ ಹೊರಡುತ್ತಿದ್ದೇನೆ. ಬಂದ್ ಯಶಸ್ವಿಯಾಗುವ ವಿಶ್ವಾಸ ಇದೆ. ಇನ್ನು ಪ್ರತಿಭಟನಾಕಾರರಿಗೆ ಯಾವುದೇ ಗೊಂದಲ ಇಲ್ಲದೆ ಯಶಸ್ವಿಗೊಳಿಸಲು ಬಿಎಸ್ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಇನ್ನು ಡಾಲರ್ಸ್ ಕಾಲೋನಿಯ ದವಳಗಿರಿ ನಿವಾಸದಿಂದ ಹೊರಟ ಬಿ.ಎಸ್ ಯಡಿಯೂರಪ್ಪ ಅವರು ದೇವನಹಳ್ಳಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಅಸ್ಸಾಂಗೆ ಪ್ರಯಾಣ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:58 am, Fri, 29 September 23

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ಸಂಜು; ವಿಡಿಯೋ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಅತಿ ಎತ್ತರದ ಮಾನವ ಪಿರಮಿಡ್ ನಿರ್ಮಿಸಿ ಭಾರತೀಯ ಸೇನೆಯಿಂದ ವಿಶ್ವ ದಾಖಲೆ
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ಯಾರು ಬಿಗ್ ಬಾಸ್ ಗೆಲ್ತಾರೆ ಅಂತ ನಾನು ಹೇಳಲ್ಲ: ಪ್ರಥಮ್ ಖಡಕ್ ಮಾತು
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ನಿಯೋಗ ಹೊತ್ತು ತಂದಿದ್ದ ಕಬ್ಬನ್ನು ಕಚೇರಿಯಲ್ಲೇ ಮುರಿದು ತಿಂದ ಸಿದ್ದರಾಮಯ್ಯ
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಕೆಡಿಪಿ ಸಭೆಗಳನ್ನು ಹಗುರವಾಗಿ ಪರಿಗಣಿಸುವ ಪ್ರವೃತ್ತಿ ನಿಲ್ಲಬೇಕು
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಸುದೀಪ್ ಬಿಗ್​ಬಾಸ್ ಬಿಡಲು ಅಸಲಿ ಕಾರಣ ಬಿಚ್ಚಿಟ್ಟ ಪ್ರಥಮ್
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಬೆಂಗಳೂರಿನ ಈ ಮಾರ್ಗದಲ್ಲಿ ಫುಲ್ ಟ್ರಾಫಿಕ್ ಜಾಮ್..!
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಮಂತ್ರಾಲಯ ಸಂಸ್ಕೃತ ಶಾಲೆ ವಿದ್ಯಾರ್ಥಿಗಳು ಸಾವು: ಅಪಘಾತಕ್ಕೆ ಕಾರಣವೇನು?
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಒಬ್ಬನಿಗೆ ಮದುವೆಯಾಗಿ ಕೇವಲ 4 ತಿಂಗಳಾಗಿತ್ತು, ಮತ್ತೊಬ್ಬನ ಪತ್ನಿ ಗರ್ಭಿಣಿ!
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ
ಜಿಟಿಡಿ ಹೇಳಿದ ಧಮ್ ಮಾತಿಗೆ ಬಿಜೆಪಿ ನಾಯಕ ರವಿ ಪ್ರತಿಕ್ರಿಯೆ ನೀಡಲಿಲ್ಲ