AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics: 2023ರ ಚುನಾವಣೆಯಲ್ಲಿ123 ಕ್ಷೇತ್ರ ಗೆಲ್ಲುವುದೇ ಜೆಡಿಎಸ್ ಪಕ್ಷದ ಗುರಿ: ಎಚ್ ಡಿ ಕುಮಾರಸ್ವಾಮಿ ವಿಶ್ವಾಸ

ರಾಜ್ಯದ ಮುಂದಿನ ರಾಜಕಾರಣ ಈಗಲೂ ಜೆಡಿಎಸ್​ ಪಕ್ಷದಿಂದಲೇ ಉಳಿಯಲಿದೆ ಎಂಬ ಭಾವನೆ ರಾಜ್ಯದ ಜನರಲ್ಲಿದೆ ಅವರು ದೃಢವಾಗಿ ಹೇಳಿದರು.

Karnataka Politics: 2023ರ ಚುನಾವಣೆಯಲ್ಲಿ123 ಕ್ಷೇತ್ರ ಗೆಲ್ಲುವುದೇ ಜೆಡಿಎಸ್ ಪಕ್ಷದ ಗುರಿ: ಎಚ್ ಡಿ ಕುಮಾರಸ್ವಾಮಿ ವಿಶ್ವಾಸ
ಹೆಚ್​ ಡಿ ಕುಮಾರಸ್ವಾಮಿ
TV9 Web
| Edited By: |

Updated on:Aug 12, 2021 | 11:38 PM

Share

ಬೆಂಗಳೂರು: 2023ಕ್ಕೆ ಜೆಡಿಎಸ್ ಪಕ್ಷದ ಗುರಿ ಏನಿದ್ದರೂ ‘123’ ಮಾತ್ರ. 2023ರಲ್ಲಿ ರಾಜ್ಯದಲ್ಲಿ 2023ರಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಕಂಡರೆ ಭಯವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.ರಾಜ್ಯದಲ್ಲಿ ಜೆಡಿಎಸ್ ಪಕ್ಷ ನಶಿಸಿಹೋಗಿದೆ ಎನ್ನುವವರಿಗೆ ಮುಂದಿನ ರಾಜ್ಯ ರಾಜಕಾರಣ ಜೆಡಿಎಸ್​ನಿಂದಲೇ ಉಳಿಯಲಿದೆ ಎಂದು ಉತ್ತರ ಕೊಡಬಯಸುತ್ತೇನೆ. ರಾಜ್ಯದ ಮುಂದಿನ ರಾಜಕಾರಣ ಈಗಲೂ ಜೆಡಿಎಸ್​ ಪಕ್ಷದಿಂದಲೇ ಉಳಿಯಲಿದೆ ಎಂಬ ಭಾವನೆ ರಾಜ್ಯದ ಜನರಲ್ಲಿದೆ ಅವರು ದೃಢವಾಗಿ ಹೇಳಿದರು.

ಸಚಿವ ಸ್ಥಾನ ಅಥವಾ ಡಿಸಿಎಂ ಸ್ಥಾನದ ಆಕಾಂಕ್ಷಿ ನಾನಲ್ಲ: ಬಿ ವೈ ವಿಜಯೇಂದ್ರ ಕಲಬುರಗಿ: ನಾನು ಯಾವುದೇ ಹುದ್ದೆ ಹುಡುಕಿಕೊಂಡು ಹೋಗಿಲ್ಲ. ಬಿಜೆಪಿ ಉಪಾಧ್ಯಕ್ಷನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ. ನಾನು ಸಚಿವ, ಡಿಸಿಎಂ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಮಾಜಿ ಸಿಎಂ, ತಂದೆ ಬಿ.ಎಸ್.ಯಡಿಯೂರಪ್ಪ ರಾಜೀನಾಮೆ ನೀಡುವ ವೇಳೆ ಯಾವುದೇ ಬೇಡಿಕೆ ಇಟ್ಟಿರಲಿಲ್ಲ ಎಂದು ಕಲಬುರಗಿ ನಗರದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ಪಷ್ಟಪಡಿಸಿದರು.

ನನಗೆ ಇನ್ನೂ ವಯಸ್ಸಿದೆ, ಪಕ್ಷ ಸಂಘಟನೆ ನನ್ನ ಕರ್ತವ್ಯ. ರಾಜ್ಯದಲ್ಲಿ ಸಚಿವ ಸ್ಥಾನದ ಬಗ್ಗೆ ಅಸಮಾಧಾನ ವಿಚಾರವಾಗಿ ಸಿಎಂ ಎಲ್ಲಾ ಭಿನ್ನಾಭಿಪ್ರಾಯಗಳನ್ನು ಬಗೆಹರಿಸುತ್ತಾರೆ. ಬಿಜೆಪಿಗೆ ಬಂದ 17 ಶಾಸಕರಲ್ಲಿ ಆನಂದ್ ಸಿಂಗ್ ಮೊದಲಿಗರು. ಅವರಿಗೆ ಗೌರವ ನೀಡುವುದು‌ ನಮ್ಮ ಕರ್ತವ್ಯ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ತನ್ನ ಅವಧಿಯನ್ನು ಪೂರೈಸುತ್ತದೆ. ಕಲಬುರಗಿ, ಯಾದಗಿರಿಗೆ ಮಂತ್ರಿ ಸ್ಥಾನ ಸಿಗಬೇಕಿತ್ತು. ನಾನು ಕಲಬುರಗಿ ಅಳಿಯನಾಗಿ ಈ ಭಾಗಕ್ಕೆ ನ್ಯಾಯ ದೊರಕಿಸಲು ಪ್ರಯತ್ನಿಸುತ್ತೇನೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರೂ ಆಗಿರುವ ಬಿ.ವೈ.ವಿಜಯೇಂದ್ರ ತಿಳಿಸಿದರು.

ಇದನ್ನೂ ಓದಿ: 

ಸಿಎಂ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಮಾಸ್ಕ್​, ಗ್ಲೌಸ್ ಖರೀದಿಗೆ 6 ಲಕ್ಷ ಅನುದಾನ ಬಿಡುಗಡೆಗೊಳಿಸಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

Assembly Session: ಸೆಪ್ಟೆಂಬರ್​ನಲ್ಲಿ ವಿಧಾನಸಭಾ ಅಧಿವೇಶನ; ಸಿಎಂ ಬಸವರಾಜ ಬೊಮ್ಮಾಯಿ

(Former CM HD Kumaraswamy says JDS aims to win 123 constituencies in 2023 elections)

Published On - 7:23 pm, Thu, 12 August 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ