AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಭೇಟಿ ನೀಡಿದ ಬಳಿಕ 'ಮುಖ್ಯಮಂತ್ರಿ ಸಿಂಹಾಸನ ನಶ್ವರ, ಜನತೆಯ ಹೃದಯ‌ ಸಿಂಹಾಸನ ಶಾಶ್ವತ' ಎಂದು ಸಿದ್ದರಾಮಯ್ಯ ಭಾವುಕ ಎಕ್ಸ್ ಪೋಸ್ಟ್ ಹಂಚಿಕೊಂಡಿದ್ದಾರೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು ಎಂದವರು ತಿಳಿಸಿದ್ದಾರೆ.

ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ: ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಸಿಎಂ ಸಿದ್ದರಾಮಯ್ಯImage Credit source: Siddaramaiah X Account
Pramod Shastri G
| Edited By: |

Updated on: Jun 28, 2026 | 7:06 AM

Share

ಮುಖ್ಯಾಂಶಗಳು

  • ಅಭಿಮಾನಿಗಳ ಪ್ರೀತಿ-ಅಭಿಮಾನಕ್ಕೆ ಸಿದ್ದರಾಮಯ್ಯ ಮೂಖವಿಸ್​ಮಿತ
  • 'ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು'
  • ಆದರೆ ಜನರ ಪ್ರೀತಿ ನಿರಂತರ ಎಂದು ಮಾಜಿ ಸಿಎಂ ಸಂದೇಶ

ಬೆಂಗಳೂರು, ಜೂನ್​​ 28: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆ ಮೈಸೂರಿಗೆ ಸಿದ್ದರಾಮಯ್ಯ ಭೇಟಿ ನೀಡಿದ್ದು, ಆ ಬೆನ್ನಲ್ಲೇ ಭಾವುಕ ಸಂದೇಶವೊಂದನ್ನು ಎಕ್ಸ್​​ ಪೋಸ್ಟ್​​ ಮೂಲಕ ಅವರು ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ ಎಂದವರು ತಿಳಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್​​ ಪೋಸ್ಟ್​​ನಲ್ಲಿ ಏನಿದೆ?

ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು. ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ. ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯಿತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು. ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯ‌ಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ‌ ಶಾಶ್ವತ ಒಪ್ಪಂದ. ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ – ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ತಾನು ಸದಾ ಬದ್ಧ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಇದರ ಜೊತೆಗೆ ಅಭಿಮಾನಿಗಳು ತಮಗೆ ಕೋರಿದ್ದ ಅದ್ದೂರಿ ಸ್ವಾಗತದ ವಿಡಿಯೋವನ್ನೂ ಅವರು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ

ಶನಿವಾವರ (ನಿನ್ನೆ) ಮೈಸೂರಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರಿಗೆ ಹೈವೇ ಸರ್ಕಲ್‌ನಲ್ಲಿ ಅಭಿಮಾನಿಗಳು ಬೃಹತ್ ಸೇಬಿನ ಹಾರದೊಂದಿಗೆ ಪಟಾಕಿ ಸಿಡಿಸಿ ಅದ್ಧೂರಿ ಸ್ವಾಗತ ಕೋರಿದ್ದರು. ಶಾಸಕರಾದ ಸ್ವಾಗತಿಸಿದ ತನ್ವೀರ್ ಸೇಠ್, ಹರೀಶ್ ಗೌಡ ಸೇರಿ ಹಲವರು ಸಿದ್ದರಾಮಯ್ಯನವರನ್ನು ಬರಮಾಡಿಕೊಂಡಿದ್ದರು.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
ಪೇಜಾವರಶ್ರೀ ಹೇಳಿಕೆ ಉದಾಹರಣೆ ನೀಡಿ ಬಿಜೆಪಿ ನಾಯಕರಿಗೆ ಹರಿಪ್ರಸಾದ್ ಟಾಂಗ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!