S.M Krishna: ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ, ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆಯೇ ಇಲ್ಲ: ಎಸ್.ಎಂ.ಕೃಷ್ಣ ಘೋಷಣೆ

| Updated By: ಗಂಗಾಧರ​ ಬ. ಸಾಬೋಜಿ

Updated on: Jan 04, 2023 | 4:41 PM

ರಾಜಕೀಯದಿಂದ ನಾನು ನಿವೃತ್ತಿ ಪಡೆಯುತ್ತಿದ್ದೇನೆ. ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆಯೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಹೇಳಿದ್ದಾರೆ.

S.M Krishna: ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ, ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆಯೇ ಇಲ್ಲ: ಎಸ್.ಎಂ.ಕೃಷ್ಣ ಘೋಷಣೆ
ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ
Image Credit source: theweek.in
Follow us on

ಬೆಂಗಳೂರು: ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ (S.M Krishna) ಅವರು ನಿರಾಕರಿಸಿದ್ದರು. ಬಳಿಕ ಒತ್ತಾಯದ ಮೇರೆಗೆ ಮಾತನಾಡಿ ಅವರು ನಾನು ರಾಜಕೀಯದಿಂದ ನಿವೃತ್ತಿಯಾಗಿ ಸುಮಾರು ದಿನಗಳಾಗಿವೆ ಎಂದು ಹೇಳಿದ್ದರು. ಸದ್ಯ ಈ ವಿಚಾರವಾಗಿ ಬೆಂಗಳೂರಿದನಲ್ಲಿ ಇಂದು (ಜ.4) ಅವರು ಮಾತನಾಡಿ, ರಾಜಕೀಯದಿಂದ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಸ್ಪಷ್ಟ ಪಡಿಸಿದರು. ಈ ವಿಚಾರವನ್ನು ಹೈಕಮಾಂಡ್​ ಗಮನಕ್ಕೆ ತಂದಿದ್ದೀರಾ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜಕೀಯದಲ್ಲಿ ಯಾರೂ ಪಿಂಚಣಿ ನೀಡುವುದಿಲ್ಲ. ಹಾಗಾಗಿ ಹೈಕಮಾಂಡ್ ಗಮನಕ್ಕೆ ತರುವ ಅವಶ್ಯಕತೆಯೇ ಇಲ್ಲ ಎಂದು ಹೇಳಿದರು. ಈಗಾಲೇ ನನಗೆ 90 ವರ್ಷ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವು ಇರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ ಮಾಡಲು ಸಾಧ್ಯವಿಲ್ಲ. ವಯಸ್ಸಿಗೆ ಬೆಲೆ ಕೊಟ್ಟು ಸಾರ್ವಜನಿಕ ಜೀವನದಿಂದ ಹಿಂದೆ ಸರಿಯುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಹೇಳಿದರು.

ಇನ್ನು ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ((Mysore-Bengaluru Expressway) ಹೈವೇಗೆ ನಾಲ್ವಡಿ ಕೃಷ್ಣರಾಜ ಒಡೆಯರ್​ ಹೆಸರಿಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ನಾಲ್ವಡಿ ಕೃಷ್ಣರಾಜ ಒಡೆಯರ್ ದೇಶ ಕಂಡ ಮಹಾನ್ ವ್ಯಕ್ತಿ. ಅಭಿವೃದ್ಧಿ ವಿಚಾರವಾಗಿ ಅವರು ಅನೇಕ ಕೆಲಸಗಳನ್ನ ಮಾಡಿದ್ದಾರೆ. ದಶಪಥಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್ ಎಂದು ಹೆಸರಿಡಲು ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಸಿಎಂ‌ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದೇನೆ. ಅವರು ಏನು ನಿರ್ಧಾರ ತೆಗೆದುಕೊಳ್ಳುತ್ತಾರೋ ನೋಡಬೇಕು ಎಂದು ತಿಳಿಸಿದರು.

ಇದನ್ನೂ ಓದಿ: ಎಸ್ ಟಿ ಸೋಮಶೇಖರ್ ತಾಯಿ ಆಸೆಯನ್ನು ಈಡೇರಿಸಿದ ಮಾಜಿ ಸಿಎಂ ಎಸ್ ಎಂ ಕೃಷ್ಣ

ಇದೇ ಹೆದ್ದಾರಿಗೆ ಕಾವೇರಿ ನದಿ ಹೆಸರು ಇಡುವಂತೆ ಪ್ರತಾಪ ಸಿಂಹ್​ ಮನವಿ 

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್​ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದರು. 10ಲೇನ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಅನ್ನು ಭಾರತಮಾಲಾ ಪರಿಯೋಜನಾ ಹಂತ-ಎಲ್ ಅಡಿಯಲ್ಲಿ ನಿರ್ಮಿಸಲಾಗುತ್ತಿದೆ. ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.

ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ

ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್​​ಪ್ರೆಸ್​ವೇ, ಗಂಗಾ ಎಕ್ಸ್​​ಪ್ರೆಸ್​ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್​ಪ್ರೆಸ್​ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್​​ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.

ಇದನ್ನೂ ಓದಿ: ನಾಳೆ ಗುರುವಾರ ಮೈಸೂರು ಎಕ್ಸ್‌ಪ್ರೆಸ್‌ ವೇ ಕಾಮಗಾರಿ ಪರಿಶೀಲನೆಗೆ ದಶಪಥ ಹೆದ್ದಾರಿಯಲ್ಲೆ ಹೆಲಿಕಾಪ್ಟರ್ ಇಳಿಸಲಿದ್ದಾರೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ

ಮೃತ್ಯುಕೂಪವಾದ ಹೆದ್ದಾರಿ

ಸಾವಿರಾರು ಕೋಟಿ ರೂ ವೆಚ್ಚದಲ್ಲಿ ಕೆಲವೇ ತಿಂಗಳುಗಳ ಕೆಳಗೆ ನಿರ್ಮಾಣವಾಗಿರುವ ಈ ಹೆದ್ದಾರಿ ಕೆಲವೇ ಗಂಟೆಗಳಲ್ಲಿ ಎರಡು ಪ್ರಮುಖ ನಗರಗಳನ್ನ ಬೆಸೆಯುತ್ತದೆ. ಆದರೆ ಇದೇ ಹೆದ್ದಾರಿ ಮೃತ್ಯುಕೂಪವಾಗಿಯೂ ಪ್ರಯಾಣಿಕರನ್ನು ಕಾಡುತ್ತಿದೆ. ಹೆದ್ದಾರಿ ಉದ್ಘಾಟನೆಗೂ ಮೊದಲೇ ಅಪಘಾತಗಳ ಸಂಖ್ಯೆ, ಸಾಯುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಂದರವಾದ ರಸ್ತೆಯಲ್ಲಿ ವಾಹನಗಳ ವೇಗದ ಮಿತಿಗೆ ಇದುವರೆಗೂ ಕಡಿವಾಣ ಬಿದ್ದಿಲ್ಲ. ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ, ಅಪಘಾತದಿಂದಾಗಿ ಸಾಯುವವರ ಸಂಖ್ಯೆ ಹೆಚ್ಚಾಗಿದೆ. ಇದು ವಾಹನ ಸವಾರರು, ಸ್ಥಳೀಯರ ಆತಂಕಕ್ಕೂ ಕೂಡ ಕಾರಣವಾಗಿದೆ. ಹೀಗಾಗಿ ಹೆದ್ದಾರಿಯಲ್ಲಿ ವಾಹನಗಳ ವೇಗದ ಮಿತಿಗೆ ಕಡಿವಾಣ ಹಾಕಬೇಕು ಎಂದು ಒತ್ತಾಯ ಕೇಳಿಬರುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:23 pm, Wed, 4 January 23