ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ನಾಯಕ ಎಂ. ರಘುಪತಿ ನಿಧನ

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿ, ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ.

ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ನಾಯಕ ಎಂ. ರಘುಪತಿ ನಿಧನ
ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ನಾಯಕ ಎಂ. ರಘುಪತಿ ಇನ್ನಿಲ್ಲ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jun 18, 2022 | 1:36 PM

ಬೆಂಗಳೂರು: ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ ಹಿರಿಯ ನಾಯಕ ಎಂ.ರಘುಪತಿ (M. Raghupati) ಅವರು ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಘುಪತಿ, ವೈದೇಹಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ಮಲ್ಲೇಶ್ವರಂನ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಇವರು ಮಲ್ಲೇಶ್ವರಂ ಶಾಸಕರಾಗಿ ಸೇವೆ ಸಲ್ಲಿಸಿದ್ದು, ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.

ಕಳೆದ ಎಂಟು ದಿನಗಳಿಂದ ಕರುಳಿನ ಸೋಂಕಿಗೆ ತುತ್ತಾಗಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ರಾಮಕೃಷ್ಣ ಹೆಗಡೆ ಅವರ ಸಿಎಂ ಆಗಿದ್ದಾಗ ಶಿಕ್ಷಣ ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ರಾಜಕಾರಣದಲ್ಲಿಯೂ ಎಂ.ರಘುಪತಿ ಗುರುತಿಸಿಕೊಂಡಿದ್ದರು. ಎಂ.ರಘುಪತಿ ಅವರು ಶಿಕ್ಷಣ ಸಚಿವರಾಗಿದ್ದಾಗ ಸರ್ಕಾರಿ ಶಾಲೆಯ ಮಕ್ಕಳಿಗೆ ಸಮವಸ್ತ್ರವನ್ನು ಪರಿಚಯಿಸಿದ್ದು ಇವರೇ. ಜನತಾ ಪಕ್ಷದಲ್ಲಿ ಎಂ ರಘುಪತಿ ಅವರು ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದು, ಒಂದು ಬಾರಿ ಎಂಎಲ್​ಸಿ ಸಹ ಆಗಿ ವಿಧಾನ ಪರಿಷತ್ ಪ್ರವೇಶಿಸಿದ್ದರು.

ಮಾಜಿ ಸಚಿವರು, ಹಿರಿಯ ನಾಯಕರಾದ ಶ್ರೀ ಎಂ. ರಘುಪತಿ ಅವರು ಕಾಲವಾದ ವಿಷಯ ತಿಳಿದು ಅತೀವ ನೋವಾಯಿತು. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಯುತರು ಸೇವೆ ಸಲ್ಲಿಸಿದ್ದರು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ವರ್ಗದವರಿಗೆ ಸಾಂತ್ವನಗಳು ಎಂದು ಅಧ್ಯಕ್ಷ ಡಿ.ಕೆ ಶಿವಕುಮಾರ ಟ್ವೀಟ್​ ಮಾಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ಮಾಜಿ ಸಚಿವ, ಬಹು ಕಾಲದ ಸ್ನೇಹಿತ, ಒಂದು ಕಾಲದ ನನ್ನ ಸಹದ್ಯೋಗಿ ಎಂ.ರಘುಪತಿ ಅವರ ನಿಧನದಿಂದ ಆಘಾತಗೊಂಡಿದ್ದೇನೆ. ಅಪಾರ ಜನಪರ ಕಾಳಜಿಯ‌ ರಘುಪತಿ ಬಹಳ ಬೇಗ ರಾಜಕೀಯವಾಗಿ ತೆರೆಮರೆಗೆ ಸರಿದವರು. ಇವರ ಬಂಧು-ಬಾಂಧವರು ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. ಇವರ ಆತ್ಮಕ್ಕೆ ಶಾಂತಿ‌ಕೋರುವೆ ಎಂದು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Sai Pallavi: ಸಾಯಿ ಪಲ್ಲವಿ ವಿವಾದದ ಬಳಿಕ ‘ವಿರಾಟ ಪರ್ವಂ’ ಚಿತ್ರಕ್ಕೆ ಜನರು ನೀಡಿದ ರೇಟಿಂಗ್​ ಎಷ್ಟು?

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:22 am, Sat, 18 June 22