Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ

ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್​​ಲಿಫ್ಟ್ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ.

Kasturi Rangan: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್​ಗೆ ಲಘು ಹೃದಯಾಘಾತ
ಕಸ್ತೂರಿ ರಂಗನ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Jul 10, 2023 | 5:20 PM

ಬೆಂಗಳೂರು: ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿ ರಂಗನ್ (Kasturi Rangan) ಅವರಿಗೆ ಕೊಲಂಬೊದಲ್ಲಿ ಇಂದು ಲಘು ಹೃದಯಾಘಾತ ಸಂಭವಿಸಿದೆ. ಸದ್ಯ ಕಸ್ತೂರಿ ರಂಗನ್ ಅವರನ್ನು ಏರ್​​ಲಿಫ್ಟ್ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ HAL ಏರ್​ಪೋರ್ಟ್​ಗೆ ಆಗಮಿಸಲಿದ್ದು, ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಆಗಮಿಸಲಿದ್ದಾರೆ. ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತ ಕಾಣಿಸಿಕೊಂಡಿದೆ. ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗುತ್ತಿದೆ. ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ. ಈ ಕುರಿತಾಗಿ ಡಿಸಿಎಂ ಡಿಕೆ ಶಿವಕುಮಾರ್​ ಖಚಿತಪಡಿಸಿದ್ದು, ಕಸ್ತೂರಿರಂಗನ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನೋಡಿಕೊಳ್ಳುತ್ತವೆ ಎಂದಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಭಾರತ ಸರ್ಕಾರ ನೀಡುವ ಅತ್ಯುನ್ನತ ನಾಗರಿಕ ಪುರಸ್ಕಾರಗಳಾದ ಪ್ರತಿಷ್ಠಿತ ಪದ್ಮಶ್ರೀ, ಪದ್ಮಭೂಷಣ ಮತ್ತು ಪದ್ಮ ವಿಭೂಷಣ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗಿದೆ. ಕಸ್ತೂರಿ ರಂಗನ್ ಅವರು ರಾಜಸ್ಥಾನದ ಕೇಂದ್ರೀಯ ವಿಶ್ವವಿದ್ಯಾಲಯ ಮತ್ತು ಎನ್ಐಐಟಿ ವಿಶ್ವವಿದ್ಯಾಲಯಗಳಲ್ಲಿ ಮಾಜಿ ಕುಲಪತಿಯಾಗಿದ್ದರು. ಅವರು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಮಾಜಿ ಕುಲಪತಿಯೂ ಹೌದು. ಅವರು ಕರ್ನಾಟಕ ಜ್ಞಾನ ಆಯೋಗದ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತಮ್ಮ ಗಮನಾರ್ಹ ವೃತ್ತಿಜೀವನದಲ್ಲಿ ಅವರು 2003 ರಿಂದ 2009 ರವರೆಗೆ ರಾಜ್ಯಸಭೆಯ ವಿಶಿಷ್ಟ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಇದಲ್ಲದೆ, ಅವರು ಸದ್ಯ ಭಾರತದ ಯೋಜನಾ ಆಯೋಗದ ಸದಸ್ಯರಾಗಿ ಮಹತ್ವದ ಸ್ಥಾನವನ್ನು ಅಲಂಕರಿಸಿದ್ದಾರೆ.

ಇದನ್ನೂ ಓದಿ: Tomato: ಈ ಸೀಸನ್​ನ ಟೊಮೆಟೋ ಕಥೆ; ಹಿಮಾಚಲ ದುರ್ಗತಿ, ಇಡೀ ಭಾರತಕ್ಕೀಗ ಬೆಂಗಳೂರೇ ಗತಿ

ಏಪ್ರಿಲ್ 2004 ರಿಂದ 2009 ರವರೆಗೆ ಬೆಂಗಳೂರಿನ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ನಲ್ಲಿ ನಿರ್ದೇಶಕರಾಗಿದ್ದರು. ಪ್ರಸ್ತುತ, ಅವರು ಹೊಸ ಶಿಕ್ಷಣ ನೀತಿ ಕರಡು ಸಮಿತಿಯ ಅಧ್ಯಕ್ಷರಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:01 pm, Mon, 10 July 23

ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ