AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.C. Nagesh Death: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು

ಬಿಜೆಪಿಯ ಹಿರಿಯ ನಾಯಕ ಹಾಗೂ ಕರ್ನಾಟಕದ ಮಾಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್ (67) ನಿಧನರಾಗಿದ್ದಾರೆ. ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನಲ್ಲಿ ಕೊನೆಯುಸಿರೆಳೆದರು. ಬಸವರಾಜ ಬೊಮ್ಮಾಯಿ ಸರ್ಕಾರದಲ್ಲಿ ಸಚಿವರಾಗಿ, ತಿಪಟೂರು ಶಾಸಕರಾಗಿ ಸೇವೆ ಸಲ್ಲಿಸಿದ್ದ ಇವರ ಅಂತ್ಯಕ್ರಿಯೆ ಆಗಸ್ಟ್ 19ರಂದು ಸ್ವಕ್ಷೇತ್ರ ತಿಪಟೂರಿನಲ್ಲಿ ನಡೆಯಲಿದೆ. ರಾಜಕೀಯ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.

B.C. Nagesh Death: ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ: ಕಂಬನಿ ಮಿಡಿದ ರಾಜಕೀಯ ಗಣ್ಯರು
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on:Aug 18, 2026 | 11:16 PM

Share

ಬೆಂಗಳೂರು, ಆ.18: ಬಿಜೆಪಿಯ ಹಿರಿಯ ನಾಯಕ, ರಾಜ್ಯದ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (67) ಅವರು ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ದೀರ್ಘಕಾಲದಿಂದ ಬ್ರೈನ್ ಟ್ಯೂಮರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಜಯನಗರದಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ರಾತ್ರಿ ಅವರ ಆರೋಗ್ಯ ಸ್ಥಿತಿ ಕ್ಷೀಣಿಸಿ ಮೃತರಾಗಿದ್ದಾರೆ. ಅವರ ಅಗಲಿಕೆಗೆ ರಾಜ್ಯ ರಾಜಕೀಯ ವಲಯ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಕಳೆದ ಕೆಲ ಕಾಲದಿಂದ ಬ್ರೈನ್ ಟ್ಯೂಮರ್ ಸಮಸ್ಯೆ ಹಾಗೂ ದೀರ್ಘಕಾಲದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರು ಜಯನಗರದ ಮಗಳ ನಿವಾಸದಲ್ಲಿ ವಾಸವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಬಸವರಾಜ ಬೊಮ್ಮಾಯಿ ಅವರ ಬಿಜೆಪಿ ಸರ್ಕಾರದಲ್ಲಿ 2021 ರಿಂದ 2023 ರವರೆಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸಕಾಲ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: NTAಗೆ ಮೇಜರ್ ಸರ್ಜರಿ: 600 ತಜ್ಞರ ವಜಾ, ನಾಲ್ಕು ಹಂತದಲ್ಲಿ ಪ್ರಶ್ನೆಪತ್ರಿಕೆ ತಪಾಸಣೆ ವ್ಯವಸ್ಥೆಗೆ ಜೋಶಿ ಆದೇಶ

ತುಮಕೂರು ಜಿಲ್ಲೆಯ ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಪಾರ್ಥಿವ ಶರೀರವನ್ನು ಇಂದು ರಾತ್ರಿಯೇ ಬೆಂಗಳೂರಿನಿಂದ ಸ್ವಕ್ಷೇತ್ರ ತಿಪಟೂರಿಗೆ ರವಾನಿಸಲಾಗುತ್ತಿದ್ದು, ನಾಳೆ (ಆಗಸ್ಟ್ 19) ಸಾರ್ವಜನಿಕ ದರ್ಶನದ ಬಳಿಕ ಧಾರ್ಮಿಕ ವಿಧಿವಿಧಾನಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:10 pm, Tue, 18 August 26

Follow Us
ವಿನಯ್​ ಕಾಶಪ್ಪನವರ್​
ವಿನಯ್​ ಕಾಶಪ್ಪನವರ್​

ವಿನಯಕುಮಾರ್ ಕಾಶಪ್ಪನವರ್ ಅವರು ಸಮೂಹ ಸಂವಹನ ಹಾಗೂ ತಂತ್ರಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಮತ್ತು ಪತ್ರಿಕೋದ್ಯಮದಲ್ಲಿ ವಿದ್ಯಾಭ್ಯಾಸ ಪಡೆದಿದ್ದಾರೆ. ಕಳೆದ 8 ವರ್ಷಗಳಿಂದ ಟಿವಿ9 ಕನ್ನಡದಲ್ಲಿ ಹಿರಿಯ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಂಗಳೂರು ನಗರ, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳಲ್ಲಿ 10 ವರ್ಷಗಳ ವರದಿಗಾರಿಕೆ ಅನುಭವ ಹೊಂದಿದ್ದು, ಸಮಾಜಮುಖಿ ಹಾಗೂ ತನಿಖಾ ವರದಿಗಳ ಮೂಲಕ ಜನಪರ ವಿಷಯಗಳನ್ನು ಬೆಳಕಿಗೆ ತರುತ್ತಿದ್ದಾರೆ.

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ