ಬೆಂಗಳೂರು: ಹೃದಯಾಘಾತದಿಂದ ಮಾಜಿ ಸಚಿವ ಅಂಜನಮೂರ್ತಿ(72) ನಿಧನರಾಗಿದ್ದಾರೆ. ಇಂದು ಮುಂಜಾನೆ ಮಲ್ಲೇಶ್ವರಂನ ಅಪೋಲೊ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಸತಿ ಸಚಿವರಾಗಿ, ಉಪಸಭಾಪತಿಯಾಗಿ ಅಂಜನಮೂರ್ತಿ ಕಾರ್ಯನಿರ್ವಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದ ಇಂದಿರಾನಗರ ನಿವಾಸಿಯಾದ ಅಂಜನಮೂರ್ತಿ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಹೀಗಾಗಿ ಕಳೆದ ಎರಡು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ಅಂಜನ ಮೂರ್ತಿ ಅವರು 10ನೇ ಏಪ್ರಿಲ್ 1941ರಲ್ಲಿ ಜನಿಸಿದರು. ಬಿಎ, ಬಿ.ಎಲ್ ಪದವೀಧರರು. 1989-1994 ಮತ್ತು 1999 ರಿಂದ 23 ಫೆಬ್ರವರಿ 2004 ರಿಂದ 2007 ಠಂಪಿಂಗ್ ಮೂರು ಬಾರಿ ಆಯ್ಕೆ ಸಮೀಪದ ಪ್ರತಿಸ್ಪರ್ಧಿಗಿಂತ 37000 ಮತಗಳ ಬಹುಮತ ಸಾಧಿಸಿದ್ದರು.
ಮಾರ್ಚ್ 1993ರಲ್ಲಿ ಕರ್ನಾಟಕ ವಿಧಾನಸಭೆಯ ಉಪ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2005-06 ರಿಂದ ವಸತಿ ಸಚಿವರಾಗಿದ್ದರು. ನವದೆಹಲಿಯಲ್ಲಿ ನಡೆದ 89 ಅಂತರ ಸಂಸದೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಅಖಿಲ ಭಾರತ ಪೀಠಾಧಿಪತಿಗಳಾಗಿ ಹಾಜರಾಗಿದ್ದರು. 1994ರಲ್ಲಿ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಪೀಠಾಧಿಪತಿಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಶಿಯೋಮಣಿ ಸಂಸ್ಥೆ, ನವದೆಹಲಿಯಿಂದ ಶಿರೋಮಣಿ ವಿಕಾಸ್ ಪ್ರಶಸ್ತಿ ನೀಡಿ ಅಂಜನ ಮೂರ್ತಿಯವರನ್ನು ಗೌರವಿಸಿತ್ತು. ಮಾನವ ಸೇವಾ ಪುರಸ್ಕಾರ, 1993ರಲ್ಲಿ ವಿಶೇಷ ಸ್ಕ್ರಾಲ್ ಆಫ್ ಆನರ್ ಸೇರಿದಂತೆ ಕೆಲವು ಗೌರವಗಳು ಸಿಕ್ಕಿವೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 6:48 am, Thu, 23 March 23