AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪಗೆ ರಿಲೀಫ್

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ ಅಂಗೀಕರಿಸಿದೆ.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಎಸ್ ಈಶ್ವರಪ್ಪಗೆ ರಿಲೀಫ್
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ
Ramesha M
| Edited By: |

Updated on: Jul 15, 2023 | 5:19 PM

Share

ಬೆಂಗಳೂರು: ಗುತ್ತಿಗೆದಾರ ಸಂತೋಷ್ (Contractor Santosh) ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ (KS Eshwarappa) ಅವರಿಗೆ ರಿಲೀಫ್ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯ ಬಿ ರಿಪೋರ್ಟ್ (B Report) ಅಂಗೀಕರಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್​​ ಸಲ್ಲಿಕೆ ಮಾಡಿದ್ದರು.

ಗುತ್ತಿಗೆದಾರ ಸಂತೋಷ್​ ಆತ್ಮಹತ್ಯೆ

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಎಸ್‌. ಈಶ್ವರಪ್ಪ ಅವರು ಗ್ರಾಮೀಣ ಮತ್ತು ಪಂಚಾಯತ್‌ರಾಜ್‌ ಇಲಾಖೆ ಸಚಿವರಾಗಿದ್ದಾಗ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ 2022ರ ಏಪ್ರಿಲ್ 12 ರಂದು ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಕಮೀಷನ್‌ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕೆಎಸ್​​ ಈಶ್ವರಪ್ಪ ಅವರ ವಿರುದ್ಧ ಆರೋಪ ಕೇಳಿಬಂದಿತ್ತು. ಇದು ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಬಳಿಕ ಕೆಎಸ್​ ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

ಇದನ್ನೂ ಓದಿ: ಕೋರ್ಟ್​​ಗೆ ಬಿ ರಿಪೋರ್ಟ್‌ ಸಲ್ಲಿಕೆ: ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪಗೆ ಕ್ಲೀನ್ ಚಿಟ್

ಪ್ರಕರಣದ ತನಿಖೆ ನಡೆಸಿದ್ದ ಉಡುಪಿ ಪೊಲೀಸರು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ಅವರ ಮೇಲಿನ ಆರೋಪಕ್ಕೆ ಸೂಕ್ತ ಸಾಕ್ಷಾಧಾರಗಳು ಇಲ್ಲವೆಂದು ಬಿ ರಿಪೋರ್ಟ್‌ ಸಲ್ಲಿಕೆ ಮಾಡಿದ್ದರು. ಈ ಬಿ ರಿಪೋರ್ಟ್ ಸಲ್ಲಿಕೆಯನ್ನು ಪ್ರಶ್ನಿಸಿ ಮೃತ ಗುತ್ತಿಗೆದಾರ ಸಂತೋಷ್ ಪಾಟೀಲ್ ಸಹೋದರ ಪ್ರಶಾಂತ್ ಪಾಟೀಲ್ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್​ ವಾದ-ಪ್ರತಿವಾದ ಆಲಿಸಿ ಇಂದು (ಜು.15) ಬಿ ರಿಪೋರ್ಟ್ ಅಂಗೀಕರಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?