ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು
ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ.
ಬೆಂಗಳೂರು: ಕೊಲೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಆರೋಪಿಯಾಗಿದ್ದಾರೆ. ಕೊಲೆ ಪ್ರಕರಣದಲ್ಲಿ ಈ ಹಿಂದೆ ಸುಪ್ರೀಂಕೋರ್ಟ್ ಜಾಮೀನು ನೀಡಿತ್ತು. ಇದೀಗ ಜನಪ್ರತಿನಿಧಿಗಳ ಕೋರ್ಟ್ನಿಂದ ಸಾಕ್ಷಿನಾಶ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜಾಮೀನು ಸಿಕ್ಕಿದೆ.
ಜಾಮೀನು ದೊರೆತ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಶೀಘ್ರ ಬಿಡುಗಡೆಯಾಗುವ ಸಾಧ್ಯತೆಯಿದೆ. ಜೈಲಿನಿಂದ ಬಿಡುಗಡೆಯಾದರೂ ಧಾರವಾಡ ಪ್ರವೇಶಿಸುವಂತಿಲ್ಲ. ಸುಪ್ರೀಂಕೋರ್ಟ್ ಜಾಮೀನು ನೀಡುವಾಗ ಈ ಷರತ್ತು ವಿಧಿಸಿದೆ. ಪ್ರಕರಣದ ಮತ್ತೋರ್ವ ಆರೋಪ ಚಂದ್ರಶೇಖರ ಇಂಡಿಗೂ ಜಾಮೀನು ಸಿಕ್ಕಿದೆ.
ಯೋಗೇಶ್ಗೌಡ ಹತ್ಯೆ ಪ್ರಕರಣದ ಆರೋಪಿಯಾಗಿರುವ ವಿನಯ್ ಕುಲಕರ್ಣಿ ಪ್ರಸ್ತುತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ನ.5ರಂದು ಒಂದು ದಿನ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಕೋರ್ಟ್, ನ.6ರಂದು ಮತ್ತೆ ಮೂರು ದಿನಗಳಿಗೆ ಅವಧಿ ವಿಸ್ತರಿಸಿತ್ತು. ನ.9ರಂದು ನ್ಯಾಯಾಂಗ ಬಂಧನದ ಅವಧಿಯನ್ನು 14 ದಿನಗಳಿಗೆ ವಿಸ್ತರಿಸಲಾಯಿತು. ನಂತರದ ದಿನಗಳಲ್ಲಿ ಸುಮಾರು ಒಂಬತ್ತು ತಿಂಗಳಿನಿಂದ ವಿನಯ್ ಕುಲಕರ್ಣಿ ಜೈಲಿನಲ್ಲಿಯೇ ಇದ್ದಾರೆ. ಇದೀಗ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದಲೂ ವಿನಯ್ ಕುಲಕರ್ಣಿಗೆ ಜಾಮೀನು ದೊರೆತಿದ್ದು, ಷರತ್ತುಬದ್ಧ ಬಿಡುಗಡೆಗೆ ಹಾದಿ ಮುಕ್ತವಾಗಿದೆ.
(Former Minister Vinay Kulkarni Got Bail in Yogesh Gowda Murder Case)
ಇದನ್ನೂ ಓದಿ: ತಾಲಿಬಾನಿಗಳ ವಿರುದ್ಧ ಶಸ್ತ್ರ ಹಿಡಿದಿದ್ದ ಅಫ್ಘಾನಿಸ್ತಾನದ ಮಹಿಳಾ ಗವರ್ನರ್ ಬಂಧನ
Published On - 4:24 pm, Thu, 19 August 21