ನಟಿ ರಶ್ಮಿಕಾ ಟ್ವೀಟ್ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಬೇಜವಾಬ್ದಾರಿ ಹೇಳಿಕೆ
ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ ಸಾಲು ಸಾಲು ಹಿಟ್ ಸಿನಿಮಾಗಳಿಂದ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಈ ಟ್ವೀಟ್ನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ರೀಟ್ವೀಟ್ ಮಾಡಿದ್ದಾರೆ. ಈ ವಿಡಿಯೋ ವಿಚಾರವಾಗಿ ಕಾಂಗ್ರೆಸ್‌ನ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್(Anjali Nimbalkar) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರು, ಮೇ.18: ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ತಮ್ಮ ಸಾಲು ಸಾಲು ಹಿಟ್ ಸಿನಿಮಾಗಳಿಂದ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ದಕ್ಷಿಣ ಭಾರತದ ಸಿನಿಮಾಗಳಿಗಿಂತಲೂ ಬಾಲಿವುಡ್ ಪ್ರಾಜೆಕ್ಟ್ಗಳನ್ನು ಬಾಚಿಕೊಳ್ಳುವುದರ ಮೇಲೆ ಹೆಚ್ಚು ಗಮನವಹಿಸಿದ್ದಾರೆ. ಇದೀಗ ಮುಂಬೈನ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಹೆಮ್ಮೆಯ ಮಾತುಗಳನ್ನಾಡಿದ್ದಾರೆ. ಜೊತೆಗೆ ಈ ಟ್ವೀಟ್ನ್ನು ಪ್ರಧಾನಿ ನರೇಂದ್ರ ಮೋದಿ ಅವರು ರೀಟ್ವೀಟ್ ಕೂಡ ಮಾಡಿದ್ದಾರೆ. ಈ ವಿಡಿಯೋ ವಿಚಾರವಾಗಿ ಖಾನಾಪುರ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್(Anjali Nimbalkar) ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.
ಡಾ.ಅಂಜಲಿ ನಿಂಬಾಳ್ಕರ್ ವಿವಾದಾತ್ಮಕ ಹೇಳಿಕೆ
ಹೌದು, ಮುಂಬೈನ ಅಟಲ್ ಸೇತುವೆ ಮೇಲೆ ನಿಂತು ಅಭಿವೃದ್ಧಿಗೆ ಮತಹಾಕಿ ಎಂದು ನಟಿ ರಶ್ಮಿಕಾ ಮಂದಣ್ಣ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಟ್ವೀಟ್ ಮೂಲಕ ‘ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್ ಮಾಡಲ್ಲ ಎಂದು ನಟಿ ರಶ್ಮಿಕಾ ವಿರುದ್ಧ ಖಾನಾಪುರ ಕ್ಷೇತ್ರದ ಕಾಂಗ್ರೆಸ್‌ನ ಮಾಜಿ ಶಾಸಕಿ ಡಾ.ಅಂಜಲಿ ನಿಂಬಾಳ್ಕರ್ ವಿವಾದಾತ್ಮಕ ಮಾತುಗಳನ್ನಾಡಿದ್ದಾರೆ.
ಡಾ.ಅಂಜಲಿ ನಿಂಬಾಳ್ಕರ್ ಟ್ವೀಟ್
Do you have anything to say about the Bullet train.
Mumbai – Ahmedabad Bullet Train: A disaster in the making.
Stop boot licking, this will not help u in making a megastar… #AmchiMumbai#MyINDIA https://t.co/a1Sh8W2d1G
— Dr. Anjali Hemant Nimbalkar (@DrAnjaliTai) May 17, 2024
ಇದನ್ನೂ ಓದಿ:ಭಾರತ ವೇಗವಾಗಿ ಬೆಳೆಯುತ್ತಿದೆ, ಈ ಪ್ರಗತಿ ನಿಲ್ಲಬಾರದು: ರಶ್ಮಿಕಾ ಮಂದಣ್ಣ
ರಶ್ಮಿಕಾ ಟ್ವೀಟ್
South India to North India… West India to East India… Connecting people, connecting hearts! 🤍 #MyIndia pic.twitter.com/nma43rN3hM
— Rashmika Mandanna (@iamRashmika) May 16, 2024
ಅಟಲ್ ಸೇತುಗೆ ಬಗ್ಗೆ ಮಾತನಾಡಿದ್ದ ರಶ್ಮಿಕಾ, ‘ಭಾರತದ ಅತಿ ಉದ್ದನೆಯ ಸಮುದ್ರ ಬ್ರಿಜ್. ಬರೋಬ್ಬರಿ 22 ಕಿಲೋಮೀಟರ್ ಉದ್ದವಿದೆ. ಎರಡು ಗಂಟೆಗಳ ಪ್ರಯಾಣ ಈಗ ಕೇವಲ 20 ನಿಮಿಷಗಳಲ್ಲಿ ಮುಗಿಯುತ್ತದೆ. ನಂಬಲೂ ಅಸಾಧ್ಯ. ಕೆಲ ವರ್ಷಗಳ ಹಿಂದೆ ಯಾರೂ ಇದನ್ನು ಊಹಿಸಿಯೂ ಇರಲಿಲ್ಲ’. ‘ಭಾರತ ದೊಡ್ಡದಾಗಿ ಕನಸು ಕಾಣಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದರೆ, ಏಳೇ ವರ್ಷಗಳಲ್ಲಿ ಈ ದೊಡ್ಡ ಬ್ರಿಡ್ಜ್ ನಿರ್ಮಾಣ ಮಾಡಿದ್ದೇವೆ. ಅಟಲ್ ಸೇತು ಇದು ಕೇವಲ ಸೇತುವೆ ಅಲ್ಲ, ಯುವ ಭಾರತಕ್ಕೆ ಇದು ಗ್ಯಾರಂಟಿ. ಈ ರೀತಿಯ ನೂರು ಅಟಲ್ ಸೇತುವೆ ಸ್ಥಾಪಿಸಬೇಕು ಎಂದರೆ ಅಭಿವೃದ್ಧಿಗೆ ಮತ ಹಾಕಿ’ ಎಂದು ರಶ್ಮಿಕಾ ಹೇಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:11 pm, Sat, 18 May 24