AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ

ಅನಾರೋಗ್ಯದಿಂದಾಗಿ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ವಿಧಿವಶರಾಗಿದ್ದು, ಹಾಸನದ ಮಾವಿನಕೆರೆ ಬೆಟ್ಟದ ತಪ್ಪಲಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದ ಸಮೀಪದ ಮೈದಾನದಲ್ಲಿ ಮತ್ತು ನಾಳೆ ರೇವಣ್ಣ ಅವರ ಹೊಳೆನರಸೀಪುರದ ಮನೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆ: ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ
ಸಕಲ ಸರ್ಕಾರಿ ಗೌರವದೊಂದಿಗೆ ನಾಳೆ ಚೆನ್ನಮ್ಮ ಅಂತ್ಯಕ್ರಿಯೆImage Credit source: Tv9 Kannada
ಶಿವಪ್ರಸಾದ್​ ಬಿ.
| Edited By: |

Updated on:Jul 19, 2026 | 7:07 AM

Share

ಮುಖ್ಯಾಂಶಗಳು

  • ಮಾಜಿ ಪ್ರಧಾನಮಂತ್ರಿ ಹೆಚ್​.ಡಿ.ದೇವೇಗೌಡ ಪತ್ನಿ ಚೆನ್ನಮ್ಮ ವಿಧಿವಶ
  • ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ಎಂದು ಸಿಎಂ ಘೋಷಣೆ
  • ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತಿಮ ವಿಧಿ ವಿಧಾನ

ಬೆಂಗಳೂರು, ಜುಲೈ 19: ಅನಾರೋಗ್ಯದಿಂದ ನಿನ್ನೆ (ಜುಲೈ 18) ವಿಧಿವಶರಾಗಿರುವ ಮಾಜಿ ಪ್ರಧಾನಮಂತ್ರಿ ಹೆಚ್​. ಡಿ. ದೇವೇಗೌಡರ ಪತ್ನಿ ಚೆನ್ನಮ್ಮನವರ ಅಂತ್ಯಕ್ರಿಯೆ ನಾಳೆ ಹಾಸನದ ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ನಡೆಯಲಿದೆ.  ದೇವೇಗೌಡರ ಪದ್ಮನಾಭನಗರದ ನಿವಾಸ ಸಮೀಪದ ಮೈದಾನದಲ್ಲಿ ಇಂದು ಬೆಳಿಗ್ಗೆ 7 ರಿಂದ 11 ಗಂಟೆವರೆಗೆ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಹಾಸನ ಜಿಲ್ಲೆಯ ಹೊಳೆನರಸೀಪುರವರೆಗೆ ಚೆನ್ನಮ್ಮ ಅಂತಿಮ ಯಾತ್ರೆ ನಡೆಯಲಿದೆ. ಹೊಳೆನರಸೀಪುರದ ರೇವಣ್ಣ ನಿವಾಸದಲ್ಲಿ ನಾಳೆ ಬೆಳಗ್ಗೆ 7 ರಿಂದ 9.30ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, 10 ಗಂಟೆಗೆ ಹೊಳೆನರಸೀಪುರದಿಂದ ಪಾರ್ಥಿವ ಶರೀರ ರವಾನೆಯಾಗಲಿದೆ. ಬೆಳಗ್ಗೆ 11.30ಕ್ಕೆ ಮಾವಿನ‌ಕೆರೆ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಅಂತಿಮಯಾತ್ರೆ ಸಾಗುವ ಮಾರ್ಗ

ಬೆಂಗಳೂರಿನಿಂದ ನೆಲಮಂಗಲ ಕ್ರಾಸ್, ಸೋಲೂರು ಕ್ರಾಸ್, ಮರೂರು ಹ್ಯಾಂಡ್ ಪೋಸ್ಟ್, ಕುಣಿಗಲ್ ಕ್ರಾಸ್, ಬೆಳ್ಳೂರು ಕ್ರಾಸ್, ಕದಬಳ್ಳಿ ಕ್ರಾಸ್, ಹಿರಿಸಾವೆ, ಚನ್ನರಾಯಪಟ್ಟಣ, ಎಲೆಯೂರು, ಹಾಸನ ಡೈರಿ ಸರ್ಕಲ್, ಭೂನಳ್ಳಿ ಕ್ರಾಸ್, ಶಾಂತಿ ಗ್ರಾಮ, N.R.ಸರ್ಕಲ್ ಮೂಲಕ ಮೊಸಳೆ ಹೊಸಳ್ಳಿಗೆ ತಲುಪಲಿದೆ.

ಇದನ್ನೂ ಓದಿ: ಆ್ಯಸಿಡ್‌ ದಾಳಿಗೂ ಮುನ್ನ ಮಾಜಿ ಪ್ರಧಾನಿ ಪತ್ನಿ ಚೆನ್ನಮ್ಮ ಹೇಗಿದ್ರು ಗೊತ್ತಾ? ಇಲ್ಲಿವೆ ಅಪರೂಪದ ಚಿತ್ರಗಳು

ಶೈತ್ಯಾಗಾರ ಪೆಟ್ಟಿಗೆ ಮೇಲೆರಗಿ ದೇವೇಗೌಡರು ಕಣ್ಣೀರು

ಇನ್ನು ಪತ್ನಿಯ ಅಗಲುವಿಕೆಯ ನೋವಲ್ಲಿರುವ ದೇವೇಗೌಡರು, ದುಃಖ ತಾಳಲಾರದೆ ಚೆನ್ನಮ್ಮ ಅವರ ಪಾರ್ಥಿವ ಶರೀರ ಇರಿಸಿದ್ದ ಶೈತ್ಯಾಗಾರ ಪೆಟ್ಟಿಗೆ ಮೇಲೆರಗಿ ಕಣ್ಣೀರು ಹಾಕಿದ್ದಾರೆ. ಈ ವೇಳೆ ಮಾಜಿ ಪ್ರಧಾನಿಗಳನ್ನು ಮಗಳು ಶೈಲಜಾ ಸಂತೈಸಿದ್ದಾರೆ.

ಸಕಲ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಚೆನ್ನಮ್ಮನ್ನವರ ಅಂತಿಮ ದರ್ಶನ ಪಡೆದ ಬಳಿಕ ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆಗೆ ತೀರ್ಮಾನಿಸಿರೋದಾಗಿ ಸಿಎಂ ಡಿ.ಕೆ. ಶಿವಕುಮಾರ್​​ ತಿಳಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ದೇಶದ ಮಾಜಿ ಪ್ರಧಾನಿಯ ಧರ್ಮಪತ್ನಿ, ಕೇಂದ್ರ ಸಚಿವರ ತಾಯಿ ಎಂಬುದನ್ನು ಗಮನದಲ್ಲಿರಿಸಿ ಈ ತೀರ್ಮಾನ ಮಾಡಿರೋದಾಗಿ ಹೇಳಿದ್ದಾರೆ. ಇಂದು ನಡೆಯಲಿರುವ ಕ್ಯಾಬಿನೆಟ್​​ ಸಭೆಯಲ್ಲಿಯೂ ಚೆನ್ನಮ್ಮನವರಿಗೆ ಗೌರವ ನಮನ ಸಲ್ಲಿಸಲಾಗುತ್ತೆ ಎಂದು ಮಾಹಿತಿ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 6:41 am, Sun, 19 July 26

Follow Us
ಶಿವಪ್ರಸಾದ್​ ಬಿ.
ಶಿವಪ್ರಸಾದ್​ ಬಿ.

2015 ರಲ್ಲಿ ಸಮಯ ವಾಹಿನಿ ಮೂಲಕ ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವರದಿಗಾರನಾಗಿ ವೃತ್ತಿ ಆರಂಭಿಸಿದೆ. ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಹಿರಿಯ ಕ್ರೈಮ್ ವರದಿಗಾರನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ . ಬೆಂಗಳೂರು ನಗರದಲ್ಲಿ ನಡೆಯುವ ಅಪರಾಧ ಕೃತ್ಯಗಳ ಬಗ್ಗೆ ನಿರಂತರ ವರದಿಗಳನ್ನು ಮಾಡುತ್ತಿದ್ದೇನೆ. ಮೂಲತಃ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನವನಾಗಿದ್ದು, ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಎಂಎಸ್ (ಕಮ್ಯೂನಿಕೇಷನ್) ಸ್ನಾತಕೋತ್ತರ ಪದವಿ ಹಾಗೂ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಕಾನೂನು ಪದವೀಧರನಾಗಿದ್ದೇನೆ.

Read More
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಕನ್​​ಫೆಷನ್ ರೂಮಿನಲ್ಲಿ ಬಿಕ್ಕಿ-ಬಿಕ್ಕಿ ಅತ್ತ ಮಂಜ: ವಿಡಿಯೋ ನೋಡಿ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಪ್ರತಿಭಟನೆ ವೇಳೆ ದೆಹಲಿಯಲ್ಲಿ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಪೊಲೀಸ್ ವಶಕ್ಕೆ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿಗೆ ರಭಸವಾಗಿ ಬಡಿದ ಗಿಡುಗ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ರಂಗನಾಥಸ್ವಾಮಿ ದೇಗುಲದಲ್ಲಿ ಎಚ್.ಡಿ. ಕುಮಾರಸ್ವಾಮಿ,ರೇವಣ್ಣ ವಿಶೇಷ ಪೂಜೆ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಇನ್ಮುಂದೆ ಆಸ್ಪತ್ರೆ ಬಿಲ್​​ಗಳಲ್ಲಿ ಔಷಧಗಳ ಖರೀದಿ ಬೆಲೆ, MRP ನಮೂದು ಕಡ್ಡಾಯ
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್
ಕರ್ನಾಟಕಕ್ಕೆ ಕೇರಳದ ಮೆಡಿಕಲ್ ತ್ಯಾಜ್ಯ ಡಂಪ್