AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ಹಾರಿದ 4 ಜೆಡಿಎಸ್ ಸದಸ್ಯರು; 4 ವಾರ್ಡ್​ ಗೆದ್ದಿದ್ದೇ ಅಚ್ಚರಿ ಎಂದ ದೇವೇಗೌಡ

ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಜತೆ ಕಲಬುರಗಿಯಿಂದ ಬೆಂಗಳೂರಿನತ್ತ ವಿಮಾನದಲ್ಲಿ ಜೆಡಿಎಸ್ ಸದಸ್ಯರು ಪ್ರಯಾಣ ಬೆಳೆಸಿದ್ದಾರೆ.

ವಿಮಾನದಲ್ಲಿ ಕಲಬುರಗಿಯಿಂದ ಬೆಂಗಳೂರಿಗೆ ಹಾರಿದ 4 ಜೆಡಿಎಸ್ ಸದಸ್ಯರು; 4 ವಾರ್ಡ್​ ಗೆದ್ದಿದ್ದೇ ಅಚ್ಚರಿ ಎಂದ ದೇವೇಗೌಡ
ಹೆಚ್​.ಡಿ.ದೇವೇಗೌಡ, ಹೆಚ್​.ಡಿ.ಕುಮಾರಸ್ವಾಮಿ
TV9 Web
| Edited By: |

Updated on: Sep 07, 2021 | 4:46 PM

Share

ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆ ಫಲಿತಾಂಶ ಅತಂತ್ರವಾಗಿ ಯಾರೊಬ್ಬರಿಗೂ ಬಹುಮತ ದೊರೆಯದ ಕಾರಣ ಜೆಡಿಎಸ್ ಸದಸ್ಯರ ಬೆಂಬಲ ಮಹತ್ವದ್ದೆನಿಸಿದೆ. ಜೆಡಿಎಸ್ ಸದಸ್ಯರು ಯಾವ ಪಕ್ಷವನ್ನು ಬೆಂಬಲಿಸುವರೋ ಅವರು ಕಲಬುರಗಿ ಪಾಲಿಕೆಯ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾದಂತಾಗಿದೆ. ಈಬೆನ್ನಲ್ಲೇ ಜೆಡಿಎಸ್​ನ ನಾಲ್ವರು ಪಾಲಿಕೆ ಸದಸ್ಯರನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಗಳೂರಿಗೆ ಕರೆಸಿಕೊಂಡಿದ್ದಾರೆ. ಜೆಡಿಎಸ್​ ಮುಖಂಡ ನಾಸೀರ್ ಹುಸೇನ್ ಜತೆ ಕಲಬುರಗಿಯಿಂದ ಬೆಂಗಳೂರಿನತ್ತ ವಿಮಾನದಲ್ಲಿ ಜೆಡಿಎಸ್ ಸದಸ್ಯರು ಪ್ರಯಾಣ ಬೆಳೆಸಿದ್ದಾರೆ.

ಕಲಬುರಗಿ ಪಾಲಿಕೆ ಚುನಾವಣೆಯಲ್ಲಿ 4 ವಾರ್ಡ್‌ಗಳಲ್ಲಿ ಜೆಡಿಎಸ್ ಗೆಲ್ಲುವುದೆಂದು ನಾನೇ ಅಂದುಕೊಂಡಿರಲಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಚ್ಚರಿ ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಬಿಜೆಪಿ, ಜೆಡಿಎಸ್ ಪಕ್ಷದ ಮೈತ್ರಿ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಜೆಡಿಎಸ್ ವರಿಷ್ಠ ದೇವೇಗೌಡ, ಈ ಕುರಿತು ಎಚ್‌.ಡಿ.ಕುಮಾರಸ್ವಾಮಿ ಮತ್ತು ಪಕ್ಷದ ಉನ್ನತ ಮಟ್ಟದ ಪದಾಧಿಕಾರಿಗಳು ತೀರ್ಮಾನಿಸುತ್ತಾರೆ. ಎಚ್.ಡಿ.ಕುಮಾರಸ್ವಾಮಿ ಅವರ ಜತೆ ಈಗಾಗಲೇ ಮಲ್ಲಿಕಾರ್ಜುನ ಖರ್ಗೆಯವರು ಅಧಿಕಾರ ಹಿಡಿಯುವ ಸಂಬಂಧ ಮಾತುಕತೆ ನಡೆಸಿದ್ದಾರೆ. ಆದರೆ ಸ್ಥಳೀಯ ಮುಖಂಡರ ಅಭಿಪ್ರಾಯ ಪಡೆಯಬೇಕು. ಅವರ ಅಭಿಪ್ರಾಯ ಆಧರಿಸಿ ತೀರ್ಮಾನಿಸಲು ಹೇಳಿದ್ದೇನೆ. ಆದರೆ ಬಿಜೆಪಿ ನಾಯಕರು ಯಾರೂ ನನ್ನ ಜೊತೆ ಮಾತನಾಡಿಲ್ಲ. ಎಚ್.ಡಿ.ಕುಮಾರಸ್ವಾಮಿ ಅವರ ಬಳಿ ಮಾತನಾಡಿರಬಹುದು ಎಂದು ಸ್ಪಷ್ಟಪಡಿಸಿದರು.

ಕೋಲಾರ ಶಾಸಕ ಶ್ರೀನಿವಾಸಗೌಡ ಹೇಳಿಕೆ ವಿಚಾರವಾಗಿಯೂ ಪ್ರತಿಕ್ರಿಯಿಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಸಕ ಶ್ರೀನಿವಾಸಗೌಡ ಪಕ್ಷಕ್ಕೆ ಡ್ಯಾಮೇಜ್ ಆಗುವ ರೀತಿ ಮಾತನಾಡಿದ್ದಾರೆ. ಅವರ ವಿರುದ್ಧ ಪಕ್ಷದ ರಾಜ್ಯಾಧ್ಯಕ್ಷರು ಕ್ರಮಕೈಗೊಳ್ಳುತ್ತಾರೆ ಎಂದಷ್ಟೇ ತಿಳಿಸಿದರು.

ಇದನ್ನೂ ಓದಿ: 

ಕಲಬುರಗಿ: ಬಿಜೆಪಿ ಅಧಿಕಾರ ಹಿಡಿಯಲು ಜೆಡಿಎಸ್ ಸಹಕಾರ ಕೇಳುತ್ತಿದ್ದೇವೆ: ರವಿಕುಮಾರ್

ಕಲಬುರಗಿ ಪಾಲಿಕೆ ಚುನಾವಣೆ: ಸ್ಪಷ್ಟ ಬಹುಮತ ನೀಡದ ಮತದಾರ; ಟಿಕೆಟ್ ಹಂಚಿಕೆ, ಕಾರ್ಯಕರ್ತರ ಅಸಮಾಧಾನ ಕಾರಣ

(Former PM HD Deve Gowda wondered about 4 ward win in Kalaburagi Municipal Elections 2021 JDS winners who flew from Kalaburagi to Bengaluru)

ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ