ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್​​ ​

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್​​ ಮುಖಂಡ ಸೇರಿದಂತೆ ಇಬ್ಬರನ್ನು ನಗರದ ಆರ್​ಎಂಸಿ ಯಾರ್ಡ್ ಪೊಲೀಸರಿಂದ ಬಂಧಿಸಲಾಗಿದೆ.

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ: ಕಾಂಗ್ರೆಸ್ ಮುಖಂಡ ಸೇರಿದಂತೆ 4 ಜನ ಅರೆಸ್ಟ್​​ ​
ಬಂಧಿತರು
Follow us
|

Updated on: Jun 23, 2023 | 9:29 AM

ಬೆಂಗಳೂರು: ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದವರಿಂದ ಸುಲಿಗೆ ಆರೋಪ ಹಿನ್ನೆಲೆ ಸ್ಥಳೀಯ ಕಾಂಗ್ರೆಸ್​​ (Congress) ಮುಖಂಡ ಸೇರಿದಂತೆ ಇಬ್ಬರನ್ನು ನಗರದ ಆರ್​ಎಂಸಿ ಯಾರ್ಡ್ ಪೊಲೀಸರಿಂದ ಬಂಧಿಸಲಾಗಿದೆ. ಸುಂಕದಕಟ್ಟೆಯ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್ ಹಾಗೂ ಸೋಮುಗೌಡ ಬಂಧಿತರು. ಕಳೆದ ಜೂನ್​ 21 ರಂದು ಬೆಳಗ್ಗೆ 8.30 ಕ್ಕೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಖಾಜಾಮೊಯಿನುದ್ದೀನ್ ಹಾಗೂ ಉಮೇಶ ಎಂಬುವವರು ಮಾಗಡಿಯಲ್ಲಿ ಗೋಮಾಂಸ ಖರೀದಿಸಿ ಶಿವಾಜಿ ನಗರಕ್ಕೆ ಸ್ಕಾರ್ಪಿಯೋ ವಾಹನದಲ್ಲಿ ಸಾಗಾಟ ಮಾಡುತ್ತಿದ್ದರು.

ಈ ವೇಳೆ ತುಮಕೂರು ರಸ್ತೆಯಲ್ಲಿ ವಾಹವನ್ನು ಅಡ್ಡಗಟ್ಟಿದ್ದ ಸ್ಥಳೀಯ ಕಾಂಗ್ರೆಸ್ ಮುಖಂಡ ಪ್ರಶಾಂತ್ ಹಾಗೂ ಸ್ನೇಹಿತರು ನಿಮ್ಮ ವಾಹನ ನಮ್ಮ ಇನ್ನೋವಾ ಕಾರಿಗೆ ಟಚ್ ಆಗಿ ಡ್ಯಾಮೇಜ್​ ಆಗಿದ್ದು, ಹಣ ನೀಡುವಂತೆ ಧಮ್ಕಿ ಹಾಕಿದ್ದಾರೆ. ನಂತರ ವಾಹನದಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದಕ್ಕೆ 2 ಲಕ್ಷ ರೂ.ಗೆ ಡಿಮಾಂಡ್ ಮಾಡಿದ್ದು, ಜತೆಗೆ ಹಲ್ಲೆ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: Part Time Job: ಮಂಗಳೂರಿನಲ್ಲಿ ಹೆಚ್ಚುತ್ತಿದೆ ಆನ್​ಲೈನ್ ಪಾರ್ಟ್​ ಟೈಮ್ ಉದ್ಯೋಗ ವಂಚನೆ

ಅಕ್ರಮ ಗೋಮಾಂಸ ಸಾಗಾಟ ಮಾಡುತ್ತಿದ್ದರ ಬಂಧನ

ವಿಚಾರ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರಿಂದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಪ್ರಕರಣ ದಾಖಲಿಸಿ ಪ್ರಶಾಂತ್ ಹಾಗೂ ಸೋಮು ಗೌಡ ಇಬ್ಬರ ಬಂಧನ ಮಾಡಲಾಗಿದೆ. ಮತ್ತೊಂದೆಡೆ ಗೋಮಾಂಸ ಅಕ್ರಮ ಸಾಗಾಟ ಮಾಡುತ್ತಿದ್ದ ಹಿನ್ನಲೆ ಉಮೇಶ್ ಹಾಗೂ ಖಾಜಾಮೊಯಿನುದ್ದೀನ್​ನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಎರೆಡು ಪ್ರತ್ಯೇಕ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ರಾಯಚೂರು: ಬೈಕ್​ಗೆ ಡಿಕ್ಕಿಯಾಗಿ ಹೊಲಕ್ಕೆ ನುಗ್ಗಿದ ಕೆಎಸ್​ಆರ್​ಟಿಸಿ, 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಬೈಕ್ ಮೇಲೆ ವಸ್ತುಗಳನ್ನ ಇಟ್ಟು ಹೋಗುವವರೇ ಎಚ್ಚರ!

ಬೈಕ್ ನಿಲ್ಲಿಸಿ ಹೋದ ಕ್ಷಣಾರ್ಧದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸುತ್ತಾರೆ. ಡಿಯೋ ಬೈಕ್​​ನಲ್ಲಿ ಬಂದ ಇಬ್ಬರು ಖದೀಮರು ಬೈಕ್​ನಲ್ಲಿಟ್ಟಿದ್ದ ಪ್ಲಂಬಿಂಗ್ ಟೂಲ್ಸ್ ಮತ್ತು ಮಿಷನ್​ ಕಳ್ಳತನ ಮಾಡಿದ್ದಾರೆ. ಹೆಣ್ಣೂರಿನ ಬಾಲಾಜಿ ಲೇಔಟ್​​ನಲ್ಲಿ ಘಟನೆ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಆಗಿದೆ. ರಸ್ತೆ ಬದಿ ಬೈಕ್​ನಲ್ಲಿ ಇಟ್ಟಿದ್ದ ಟೂಲ್ಸ್ ಕದಿದ್ದಾರೆ. ಕಳ್ಳತನದ ವಿಡಿಯೋ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದೂರು ನೀಡಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ