AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ

ಪಾರ್ಕಿಂಗ್​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ಅಪ್ರಾಪ್ತನೂ ಸೇರಿದಂತೆ ನಾಲ್ವರಿಗೆ ಚಾಕು ಇರಿದಿದ್ದಾನೆ. ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ಘಟನೆ ನಡೆದಿದ್ದು, ಆರೋಪಿ ವೆಂಕಟೇಶ್​ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ
ಪಾರ್ಕಿಂಗ್​ ವಿಚಾರವಾಗಿ ಗಲಾಟೆ: ನಾಲ್ವರಿಗೆ ಚಾಕು ಇರಿತ
ರಾಚಪ್ಪಾಜಿ ನಾಯ್ಕ್
| Edited By: |

Updated on:Sep 27, 2025 | 9:38 AM

Share

ಬೆಂಗಳೂರು, ಸೆಪ್ಟೆಂಬರ್​ 27: ಪಾರ್ಕಿಂಗ್ ​ ವಿಚಾರವಾಗಿ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ವ್ಯಕ್ತಿಯೋರ್ವ ನಾಲ್ವರಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ (Bengaluru) ಮಾರಗೊಂಡನಹಳ್ಳಿ ಆರ್.ಆರ್. ಲೇಔಟ್ ನಲ್ಲಿ ನಡೆದಿದೆ. ಘಟನೆಯಲ್ಲಿ ಹೇಮಂತ್, ಹನುಮಂತಮ್ಮ ಮತ್ತು ರಮೇಶ್ ಸೇರಿ ಓರ್ವ ಅಪ್ರಾಪ್ತ ಗಾಯಗೊಂಡಿದ್ದಾರೆ. ಆರೋಪಿ ವೆಂಕಟೇಶ್​ನನ್ನು ಕೆ.ಆರ್.ಪುರಂ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 24ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾತ್ರಿ 8.30 ಸುಮಾರಿಗೆ ತಮ್ಮ ದೊಡ್ಡಪ್ಪ ರಮೇಶ್​ ಜೊತೆ ಹೇಮಂತ್​ ಮನೆಯ ಮುಂಭಾಗ ಕುಳಿತಿದ್ದರು. ಈ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಮನೆ ಬಳಿ ಇರುವ ಮೋರಿಯ ಮೇಲೆ ಪಾರ್ಕ್​ ಆಗಿದೆ. ಇದನ್ನ ಗಮನಿಸಿದ ಹೇಮಂತ್​, ಯಾಕೆ ಕಿಷ್ಟು ವೇಗವಾಗಿ ಬರುತ್ತೀರಾ ಎಂದು ಚಾಲಕ ವೆಂಕಟೇಶ್ ನನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಅವಾಚ್ಯ ಪದಗಳಿಂದ ವೆಂಕಟೇಶ್​ ನಿಂದಿಸಿದ್ದು, ಗಲಾಟೆ ಮಾಡಿದ್ದಾನೆ. ಯಾಕಪ್ಪ ಹೀಗೆ ಮಾಡ್ತಿದ್ದೀಯ ಎಂದು ಹೇಮಂತ್​ ದೊಡ್ಡಪ್ಪ ರಮೇಶ್​ ಪ್ರಶ್ನಿಸಿದ್ದೇ ತಡ ವೆಂಕಟೇಶ್​ ಕಾರಿನಿಂದ ಚಾಕು ತಂದು ಅಟ್ಯಾಕ್​ ಮಾಡಿದ್ದಾನೆ. ಎಡ ಕಾಲಿನ ತೊಡೆಗೆ ಚಾಕು ಇರಿದ ಪರಿಣಾಮ ರಮೇಶ್​ ಅಲ್ಲೇ ಕುಸಿದಿದ್ದು, ಗಲಾಟೆ ನೋಡಿ ಸ್ಥಳಕ್ಕೆ ಬಂದ ರಮೇಶ್ ಪತ್ನಿ ಹನುಮಂತಮ್ಮ, ಹೇಮಂತ್​ ಸೇರಿ ಅಪ್ರಾಪ್ತನಿಗೂ ಚಾಕುವಿನಿಂದ ಇರಿದು ಅಟ್ಟಹಾಸ ಮೆರೆದಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಅಪ್ಪನ ಜೇಬಿನಿಂದ ಹಣ ಕದ್ದಿದ್ದಕ್ಕೆ ಇಷ್ಟು ದೊಡ್ಡ ಶಿಕ್ಷೆಯೇ? ಅಪ್ರಾಪ್ತ ಮಗಳನ್ನು ಕೊಂದ ತಂದೆ

ಪೂಜೆಗೆ ಬಂದು ಚಿನ್ನ ಕದ್ದ ಅರ್ಚಕ

ಸತ್ಯನಾರಾಯಣ ಪೂಜೆಗೆ ಬಂದಿದ್ದ ಅರ್ಚಕನೇ ದೇವರಿಗೆ ಹಾಕಿದ್ದ 44 ಗ್ರಾಂ ಚಿನ್ನದ ಸರ ಎಗರಿಸಿರುವ ಘಟನೆ ಬೆಂಗಳೂರಿನ ಅಗ್ರಹಾರ ದಾಸರಹಳ್ಳಿಯಲ್ಲಿ ನಡೆದಿದೆ. ಘಟನೆ ಸಂಬಂಧ ಮುನೇಶ್ವರಸ್ವಾಮಿ ದೇವಸ್ಥಾನದ ಅರ್ಚಕ ರಮೇಶ್ ಶಾಸ್ತ್ರಿಯನ್ನ ಪೊಲೀಸರು ಬಂಧಿಸಿದ್ದಾರೆ. ತನಿಖೆ ವೇಳೆ ಅರ್ಚಕನ ಗೋವಾ ಕೆಸಿನೋ ಪ್ಲ್ಯಾನ್ ಬಯಲಿಗೆ ಬಂದಿದ್ದು, ಚಿನ್ನದ ಸರ ಗಿರವಿ ಇಟ್ಟು ರಮೇಶ್ ಹಣ ಪಡೆದಿದ್ದ. ಆ ಬಳಿಕ ಗೋವಾ ಕೆಸಿನೋದಲ್ಲಿ ಹಣ ಕಳೆದುಕೊಂಡಿದ್ದ ಎಂಬುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Sat, 27 September 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್