AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!

ಆಕಸ್ಮಿಕವಾಗಿ ನಮ್ಮ ಮೆಟ್ರೋದ ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ನಮ್ಮ ಮೆಟ್ರೋದಲ್ಲಿ ಭದ್ರತಾ ಲೋಪ, ಹಳಿಗೆ ಜಿಗಿದ ಮಗು!
ಮೆಟ್ರೋ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Aug 02, 2024 | 11:35 AM

Share

ಬೆಂಗಳೂರು, ಆಗಸ್ಟ್​​ 02: ಆಕಸ್ಮಿಕವಾಗಿ ನಮ್ಮ ಮೆಟ್ರೋದ (Namma Metro) ಹಳಿಗೆ ನಾಲ್ಕು ವರ್ಷದ ಮಗು ಜಿಗಿದಿದ್ದು, ಅದೃಷ್ಟವಶಾತ್​ ಪ್ರಾಣಾಪಾಯದಿಂದ ಪಾರಾಗಿದೆ. ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಬೈಯಪ್ಪನಹಳ್ಳಿ ರೈಲು ನಿಲ್ದಾಣದಲ್ಲಿ ಮೆಟ್ರೋ ಹಳಿಗೆ ಮಗು ಜಿಗಿದಿದೆ. ಕೂಡಲೆ ಬಿಎಂಆರ್​ಸಿಎಲ್​ ಸಿಬ್ಬಂದಿ ಎರಡೂ ಮಾರ್ಗದ ರೈಲು ಸಂಚಾರ, ಹಳಿಯ ವಿದ್ಯುತ್​ ಸಂಚಾರ ಸ್ಥಗಿತಗೊಳಿಸಿ ಮಗುವನ್ನು ರಕ್ಷಿಸಿದ್ದಾರೆ. ಮಗು ಪ್ರಾಣಾಪಾಯದಿಂದ ಪಾರಾಗಿದೆ. ಇದರಿಂದ ಕೆಲಹೊತ್ತು ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಆಗಿತ್ತು. ಮತ್ತೆ ಸಂಚಾರ ಯಥಾಸ್ಥಿತಿಗೆ ಬಂದಿದೆ.

ಯುವಕ ಆತ್ಮಹತ್ಯೆಗೆ ಯತ್ನ

ಜೂನ್​ ತಿಂಗಳಲ್ಲಿ ಯುವಕನೋರ್ವ ನೇರಳೆ ಮಾರ್ಗದ ಹೊಸಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಹಳಿಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದನು. ಕೂಡಲೆ ಮೆಟ್ರೋ ಸಿಬ್ಬಂದಿ ಯುವಕನನ್ನು ಸದ್ಯ ರಕ್ಷಿಸಿ ಆಸ್ಪತ್ರೆಗೆ ದಾಖಲು ಮಾಡಿದ್ದರು.

ಇದನ್ನೂ ಓದಿ: ಮೆಟ್ರೋ ಹಂತ-3 ಯೋಜನೆಗೆ ಕೇಂದ್ರ ಹಣಕಾಸು ಸಚಿವಾಲಯ ಅನುಮತಿ, ಡಬಲ್ ಡೆಕ್ಕರ್ ಮೇಲ್ಸೇತುವೆಗಳಿಗೆ ಚಿಂತನೆ

ಇದಕ್ಕೂ ಮುನ್ನ ನೇರಳೆ ಮಾರ್ಗದ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ಇದೇ ರೀತಿ ಯುವಕನೊಬ್ಬ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು ಪ್ರಾಣ ಬಿಟ್ಟಿದ್ದನು. ರೈಲು ಬರೋದನ್ನೇ ಕಾಯುತ್ತಿದ್ದ ಧ್ರುವ ಟಕ್ಕರ್‌ ಎಂಬ ಯುವಕ ನೋಡ ನೋಡುತ್ತಿದ್ದಂತೆ ಹಳಿಗೆ ಹಾರಿದ್ದನು. ಕ್ಷಣ ಮಾತ್ರದಲ್ಲೇ ಆತನ ಮೇಲಿ ರೈಲು ಹರಿದು ಅಲ್ಲೇ ಪ್ರಾಣ ಬಿಟ್ಟಿದ್ದನು. ಆತನ ದೇಹ ಎರಡು ತುಂಡಾಗಿತ್ತು.

ಅಷ್ಟಕ್ಕೂ ಧ್ರುವ ಹಳಿಗೆ ಜಿಗಿಯುತ್ತಿದ್ದಂತೆ ಜತೆಗಿದ್ದ ಸ್ನೇಹಿತರು ಎಳೆಯೋ ಪ್ರಯತ್ನ ಮಾಡಿದ್ದರು. ಆದರೆ ರೈಲು ಬರ್ತಿದ್ದಂತೆ ಅವರೆಲ್ಲಾ ಹಿಂದೆ ಸರಿದಿದ್ದರು. ಮುಂಬೈ ಮೂಲದ ಧ್ರುವ ಟಕ್ಕರ್‌, ನ್ಯಾಷನಲ್‌ ಕಾಲೇಜ್‌ನಲ್ಲಿ ಮೊದಲ ವರ್ಷದ ಲಾ ವ್ಯಾಸಂಗ ಮಾಡುತ್ತಿದ್ದ. ಆದರೆ ಅಂದು ಏನಾಯ್ತೋ ಏನೋ. ಸ್ನೇಹಿತರ ಜತೆ ಫೋನ್‌ನಲ್ಲಿ ಮಾತನಾಡ್ತಾ ಬಂದವನು ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದನು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:35 am, Fri, 2 August 24

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ