AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ

ಬೆಂಗಳೂರಿನ ಫಾಕ್ಸ್‌ಕಾನ್ ಕಾರ್ಖಾನೆಯ ಶೌಚಾಲಯದಲ್ಲಿ ಭ್ರೂಣವೊಂದು ಪತ್ತೆಯಾಗಿದ್ದು, 19 ವರ್ಷದ ಉದ್ಯೋಗಿಯನ್ನು ಬಂಧಿಸಲಾಗಿದೆ. ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಶೌಚಾಲಯದ ಗುಂಡಿಯಲ್ಲಿ ಫ್ಲಶ್ ಮಾಡಲು ಯತ್ನಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಬ್ಲಾಕ್ ಆಗಿದ್ದ ಪೈಪ್‌ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಗರ್ಭಧಾರಣೆಯನ್ನು ಮುಚ್ಚಿಡಲು ಯುವತಿ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿ, ಕತ್ತು ಸೀಳಿ ಫ್ಲಶ್ ಮಾಡಲು ಯತ್ನಿಸಿದ 19 ವರ್ಷದ ಯುವತಿಯ ಬಂಧನ
ಸಆಂದರ್ಭಿಕ ಚಿತ್ರ Image Credit source: AI image
ಅಕ್ಷಯ್​ ಪಲ್ಲಮಜಲು​​
|

Updated on:Apr 24, 2026 | 2:56 PM

Share

ಬೆಂಗಳೂರು, ಏ.24 : ಸಿಲಿಕಾನ್ ಸಿಟಿಯ ಹೊಸೂರು ರಸ್ತೆಯಲ್ಲಿರುವ ಪ್ರಸಿದ್ಧ ಆಪಲ್ ಫೋನ್ ಉತ್ಪಾದನಾ ಘಟಕದ (ಫಾಕ್ಸ್‌ಕಾನ್) ಆವರಣದಲ್ಲಿ ಭ್ರೂಣವೊಂದು ಪತ್ತೆಯಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿತ್ತು. ಈ ಸಂಬಂಧ ಘಟಕದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾರ್ಖಾನೆಯ ಶೌಚಾಲಯದ ಬ್ಲಾಕ್‌ನಲ್ಲಿ ಶುಚಿಗೊಳಿಸುವ ಸಿಬ್ಬಂದಿಗೆ ಭ್ರೂಣವೊಂದು ಪತ್ತೆಯಾಗಿತ್ತು. ಕೂಡಲೇ ಅವರು ಆಡಳಿತ ಮಂಡಳಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರಿಗೆ ದೂರು ನೀಡಲಾಯಿತು.

ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯೊಬ್ಬಳನ್ನು ಬಂಧನ ಮಾಡಲಾಗಿದೆ. ಘಟನೆ ನಡೆದ ಸಮಯದಲ್ಲಿ ಶೌಚಾಲಯದ ಕಡೆಗೆ ಹೋದವರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ, ಅಲ್ಲಿನ ಸಿಬ್ಬಂದಿಯೊಬ್ಬರ ಮೇಲೆ ಅನುಮಾನ ವ್ಯಕ್ತಪಡಿಸಿದರು. ಈ ಬಗ್ಗೆ ತನಿಖೆ ನಡೆಸಿದಾಗ ಪೊಲೀಸರಿಗೆ ಅಚ್ಚರಿಯ ವಿಚಾರವೊಂದು ತಿಳಿಯಿತು. 19 ವರ್ಷದ ಯುವತಿಯು ಈ ಕೃತ್ಯ ಎಸಗಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಇದೀಗ ಆಕೆಯನ್ನು ಬಂಧನ ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಭ್ರೂಣವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಯುವತಿಯು ಗರ್ಭಪಾತ ಮಾಡಿಕೊಂಡಿದ್ದಾಳೆಯೇ ಅಥವಾ ಅಕ್ರಮ ಗರ್ಭಧಾರಣೆಯನ್ನು ಮುಚ್ಚಿಡಲು ಈ ಕೃತ್ಯ ಎಸಗಿದ್ದಾಳೆಯೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಅಷ್ಟಕ್ಕೂ ಶೌಚಾಲಯದ ನಡೆದದ್ದೇನು?

ಸಿಲಿಕಾನ್ ಸಿಟಿಯಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. 19 ವರ್ಷದ ಯುವತಿಯೊಬ್ಬಳು ಶೌಚಾಲಯದಲ್ಲಿ ನವಜಾತ ಶಿಶುವಿಗೆ ಜನ್ಮ ನೀಡಿ, ಅತ್ಯಂತ ಕ್ರೂರವಾಗಿ ಮಗುವಿನ ಕತ್ತು ಸೀಳಿ, ದೇಹವನ್ನು ಶೌಚಾಲಯದ ಗುಂಡಿಯಲ್ಲಿ ಫ್ಲಶ್ (Flush) ಮಾಡಲು ಯತ್ನಿಸಿದ್ದಳು. ಶೌಚಾಲಯಕ್ಕೆ ಹೋದ ಯುವತಿ ಅಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಬಳಿಕ ಮಗುವನ್ನು ಕೊಂದು ಸಾಕ್ಷ್ಯ ನಾಶಪಡಿಸಲು ಮಗುವಿನ ದೇಹವನ್ನು ಶೌಚಾಲಯದ ಪೈಪ್‌ ಒಳಗೆ ತಳ್ಳಲು ಪ್ರಯತ್ನಿಸಿದ್ದಾಳೆ.

ಇದನ್ನೂ ಓದಿ: ಬೆಂಗಳೂರು: ಪ್ರತಿಷ್ಠಿತ ಕಂಪನಿಯ ಮಹಿಳಾ ಶೌಚಾಲಯದಲ್ಲಿ ಭ್ರೂಣ ಪತ್ತೆ; ಬೆಚ್ಚಿಬಿದ್ದ ಸಿಬ್ಬಂದಿ!

ಈ ಕೃತ್ಯ ಬೆಳಕಿಗೆ ಬಂದಿದ್ದು ಹೇಗೆ?

ಶೌಚಾಲಯದ ಪೈಪ್ ಬ್ಲಾಕ್ ಆಗಿದ್ದರಿಂದ ಶುಚಿಗೊಳಿಸುವ ಸಿಬ್ಬಂದಿ ಪರೀಕ್ಷಿಸಿದಾಗ ಮಗುವಿನ ದೇಹ ಪತ್ತೆಯಾಗಿದೆ. ಇದನ್ನು ಕಂಡು ಬೆಚ್ಚಿಬಿದ್ದ ಸಿಬ್ಬಂದಿ ಕೂಡಲೇ ಆಡಳಿತ ಮಂಡಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ಅಲ್ಲಿನ ಸಿಬ್ಬಂದಿಯನ್ನು ವಿಚಾರಣೆಗೆ ಒಳಪಡಿಸಿದಾಗ 19 ವರ್ಷದ ಯುವತಿಯ ಮೇಲೆ ಅನುಮಾನ ವ್ಯಕ್ತವಾಗಿತ್ತು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:08 am, Fri, 24 April 26

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More