ಸಚಿವರ ಹೆಸರಾಯ್ತು, ಈಗ ಗವರ್ನರ್ ಹೆಸರಲ್ಲೂ ಚೀಟಿಂಗ್: ಬಳ್ಳಾರಿ ಮೂಲದ ವ್ಯಕ್ತಿಯ ಬಂಧನ
ಯೂನಿವರ್ಸಿಟಿ ಸಿಂಡಿಕೇಟ್ ಮೆಂಬರ್ ಮಾಡುತ್ತೇನೆ ಎಂದು ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ಆಸಾಮಿಯನ್ನು
ಬೆಂಗಳೂರು: ವಿವಿ ಸಿಂಡಿಕೇಟ್ ಸದಸ್ಯ ಮಾಡುವುದಾಗಿ ನಂಬಿಸಿ ರಾಜ್ಯಪಾಲ (Governor) ಥಾವರ್ಚಂದ್ ಗೆಹ್ಲೋಟ್ ಹೆಸರಿನಲ್ಲಿ ವಂಚನೆ ಮಾಡಿದ್ದ, ಬಳ್ಳಾರಿ ಮೂಲದ ಸದರುಲ್ಲಾ ಖಾನ್ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಗವರ್ನರ್ ಅಧೀನ ಕಾರ್ಯದರ್ಶಿ ಎಂದು ಹೇಳಿಕೊಂಡಿದ್ದು, ಎಲ್ಲಾ ವಿವಿಗಳಿಗೆ ಸೆನೆಟ್ ಸದಸ್ಯ ಎಂದು ಆಸಾಮಿ ಹೇಳಿಕೊಂಡಿದ್ದ. ನಕಲಿ ಗುರುತಿನ ಚೀಟಿ ಮಾಡಿಕೊಂಡು ಆರೋಪಿ ಓಡಾಡುತ್ತಿದ್ದ. ಇನ್ನೂ ರಾಜ್ಯಪಾಲರ ಹೆಸರು ಹೇಳಿದರೆ ಜನ ಬೇಗ ನಂಬುತ್ತಾರೆ. ರಾಜ್ಯಪಾಲರ ಕಚೇರಿ ಹೆಸರು ಬಳಸಿಕೊಂಡು ವಂಚಿಸುತ್ತಿದ್ದ ವಿಚಾರ ತಿಳಿದು ರಾಜ್ಯಪಾಲರ ಕಚೇರಿ ಸಿಬ್ಬಂದಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಯಾರು ತನ್ನ ಮೇಲೆ ಅನುಮಾನ ಪಡೋದಿಲ್ಲ ಎಂದು ರಾಜ್ಯಪಾಲರ ಹೆಸರು ಬಳಕೆ ಮಾಡಿದ್ದು, ಗವರ್ನರ್ ಕಚೇರಿಯಿಂದ ಎಂದು ಕೆಲವು ಗಣ್ಯ ವ್ಯಕ್ತಿಗಳಿಗು ಕರೆ ಮಾಡಿರುವುದು ಬೆಳಕಿಗೆ ಬಂದಿದೆ. ನಿಮ್ಮವರನ್ನ ಸಿಂಡಿಕೇಟ್ ಸದಸ್ಯರಾಗಿ ಮಾಡುತ್ತೇನೆ ಎಂದು ಆರೋಪಿ ಕರೆ ಮಾಡಿದ್ದ. ಈ ಬಗ್ಗೆ ಆರೋಪಿ ಸದರುಲ್ಲಾ ಖಾನ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ಸಚಿವರ ಹೆಸರಿನಲ್ಲಿ ನಕಲಿ ನೇಮಕಾತಿ ಅಧಿಸೂಚನೆ ಪ್ರಕರಣ: ಕನ್ನಡ ಶಿಕ್ಷಕ ಜ್ಞಾನದೇವ್ ಜಾಧವ್ ಬಂಧನ
ಯೂನಿವರ್ಸಿಟಿ ಸಿಂಡಿಕೇಟ್ ಮೆಂಬರ್ ಮಾಡುವುದಾಗಿ ವಂಚನೆ
ಗವರ್ನರ್ ಅಧೀನ ಕಾರ್ಯದರ್ಶಿ ಎಂದು ಆರೋಪಿ ಸದರುಲ್ಲಾ ಖಾನ್ ಹೇಳಿಕೊಂಡಿದ್ದು, ತಾನು ಎಲ್ಲಾ ಯೂನಿವರ್ಸಿಟಿಗಳಿಗೆ ಸೆನೆಟ್ ಸದಸ್ಯ ಎಂದು ಹೇಳಿಕೊಂಡಿದ್ದ. ನಕಲಿ ಗುರುತಿನ ಚೀಟಿ ತೋರಿಸಿ ಹಲವರಿಂದ ಅಕ್ರಮವಾಗಿ ಹಣ ಪಡೆದು ವಂಚನೆ ಮಾಡಿದ್ದಾನೆ. ಇತ್ತೀಚಿಗೆ ಮಹಿಳೆಯೊಬ್ಬರನ್ನ ಸಂಪರ್ಕಿಸಿದ್ದ ಆಸಾಮಿ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾಗಿ ಮಾಡುವುದಾಗಿ ಆಮಿಷ ತೋರಿಸಿದ್ದಾನೆ. ಅದಕ್ಕಾಗಿ ನಕಲಿ ನೇಮಕಾತಿ ಪತ್ರ ಹೊರಡಿಸಿದ. ರಾಜ್ಯಪಾಲರು ಮತ್ತು ಕಚೇರಿ ಹೆಸರಿನಲ್ಲಿ ವಂಚನೆಗೆ ಮುಂದಾಗಿದ್ದ. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಫ್ರಭುಶಂಕರ್ ಅವರಿಂದ ದೂರು ನೀಡಿದ್ದು, ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಟ್ಯೂಷನ್ ನಡೆಸುತ್ತಿದ್ದ ಆಸಾಮಿ:
ಸದ್ಯ ಪ್ರಕರಣಕ್ಕೆ ಸಂಬಂಧ ಬಳ್ಳಾರಿ ಮೂಲದ ಸದರುಲ್ಲಾ ಖಾನ್ ಎಂಬಾತನನ್ನು ಬಂಧನ ಮಾಡಲಾಗಿದೆ. ಉನ್ನತ ವ್ಯಾಸಂಗ ಮಾಡಿರುವ ಆರೋಪಿ ಸದರುಲ್ಲಾ ಖಾನ್, ಟ್ಯೂಷನ್ ಮಾಡುತ್ತಾ ಜೀವನ ನಡೆಸುತ್ತಿದ್ದ. ಆದರೆ ಕೊರೊನಾ ಕಾಲದಲ್ಲಿ ಟ್ಯೂಷನ್ ಕ್ಲೋಸ್ ಆಗಿತ್ತು. ಈ ವೇಳೆ ಸಂಕಷ್ಟಕ್ಕೆ ಸಿಲುಕಿ ವಂಚನೆ ದಾರಿ ಹಿಡಿದಿದ್ದ. ಇದೇ ರೀತಿ ಹಲವರಿಗೆ ಸಣ್ಣ ಪುಟ್ಟ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ ಮಾಡಿದ್ದ. ನಂತರ ಯೂನಿವರ್ಸಿಟಿ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡುತ್ತೇನೆ ಎಂದು ಹೊಸ ಡೀಲ್ ಶುರು ಮಾಡಿದ್ದು, ರಾಜ್ಯಪಾಲರ ಕಚೇರಿ ಹೆಸರು ಬಳಸಿಕೊಂಡು ವಂಚಿಸುತ್ತಿದ್ದ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.