AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free bus pass) ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕೆಯುಡಬ್ಲೂೃಜೆ (KUWJ)ಅಭಿನಂದನೆ ಸಲ್ಲಿಸಿದೆ.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್: ಕೆಯುಡಬ್ಲ್ಯುಜೆ ನಿಯೋಗದಿಂದ ಮುಖ್ಯಮಂತ್ರಿಗೆ ಅಭಿನಂದನೆ
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:May 16, 2024 | 10:23 PM

Share

ಬೆಂಗಳೂರು, ಮೇ.16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮನವಿ ಮೇರೆಗೆ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್(Free bus pass) ಸೌಲಭ್ಯವನ್ನು ಬಜೆಟ್‌ನಲ್ಲಿ ಘೋಷಣೆ ಮಾಡುವ ಮೂಲಕ ಬೇಡಿಕೆ ಈಡೇರಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಕೆಯುಡಬ್ಲೂೃಜೆ(KUWJ)ಅಭಿನಂದನೆ ಸಲ್ಲಿಸಿದೆ. ಗುರುವಾರ(ಮೇ.16) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಕಾರ್ಯಕಾರಿಣಿ ಸದಸ್ಯರುಗಳನ್ನೊಳಗೊಂಡ ನಿಯೋಗ ವಿಧಾನಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಭೇಟಿ ಮಾಡಿ ಧನ್ಯವಾದ ತಿಳಿಸಿತು.

ಬಹು ವರ್ಷಗಳ ಬೇಡಿಕೆಯಾಗಿದ್ದ ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್ ನೀಡುವ ಸಂಬಂಧ ಇತ್ತೀಚೆಗೆ ದಾವಣಗೆರೆಯಲ್ಲಿ ನಡೆದ 38ನೇ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಾತು ಕೊಟ್ಟಂತೆ ನಡೆದಿರುವುದನ್ನು ನೆನಪಿಸಿದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ರಾಜ್ಯದ ಸಾವಿರಾರು ಗ್ರಾಮೀಣ ಪತ್ರಕರ್ತರಿಗೆ ಇದರಿಂದ ಅನುಕೂಲ ಆಗಲಿದ್ದು, ನಿಮ್ಮ ಈ ಉದಾರತೆಗೆ ಪತ್ರಕರ್ತರ ಸಂಘ ಸದಾ ಚಿರರುಣಿಯಾಗಿರುತ್ತದೆ ಎಂದರು. ಇದಕ್ಕೆ ಮುಖ್ಯಮಂತ್ರಿಗಳು ನಗುತ್ತಲೇ ಕೈ ಜೋಡಿಸಿ, ನಿಯೋಗಕ್ಕೆ ಪ್ರತಿ ಧನ್ಯವಾದ ತಿಳಿಸಿದರು.

ಇದನ್ನೂ ಓದಿ:ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ಗೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರರ ಅವಿರತ ಶ್ರಮ ಮುಖ್ಯ ಕಾರಣ: ಕೆವಿ ಪ್ರಭಾಕರ್

ತಮಗೆ ಅಭಿನಂದನಾ ಕಾರ್ಯಕ್ರಮಕ್ಕೆ ದಿನಾಂಕ ನೀಡುವಂತೆ ವಿನಂತಿಸಿದಾಗ, ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ದಿನಾಂಕ ನೀಡುವೆ ಎಂದು ಸಿಎಂ ತಿಳಿಸಿದರು. ಸಂಘದ ನಿಯೋಗದೊಂದಿಗೆ ಮುಖ್ಯಮಂತ್ರಿಗಳು ಬಹಳ ಪ್ರೀತಿ ಮತ್ತು ವಿಶ್ವಾಸದಿಂದ ಮನದುಂಬಿ ಮಾತನಾಡಿದರು. ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಉಪಾಧ್ಯಕ್ಷರಾದ ಪುಂಡಲಿಕ ಬಾಳೋಜಿ, ಭವಾನಿಸಿಂಗ್ ಠಾಕೂರ್, ರಾಜ್ಯ ಕಾರ್ಯದರ್ಶಿ ನಿಂಗಪ್ಪ ಚಾವಡಿ, ರಾಜ್ಯ ಖಜಾಂಚಿ ವಾಸುದೇವ ಹೊಳ್ಳ, ವಿಜಯನಗರ ಜಿಲ್ಲಾಧ್ಯಕ್ಷ ಸತ್ಯನಾರಾಯಣ, ಮಂಗಳೂರು ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ ಇಂಡಾಜೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಬೀದರ್‌ನ ಶಿವಕುಮಾರ ಸ್ವಾಮಿ, ರಾಯಚೂರಿನ ಮೊಹಮದ್ ಪಾಷ, ರಾಜ್ಯ ಕಾರ್ಯಕಾರಣಿ ಸದಸ್ಯರಾದ ಹುಬ್ಬಳ್ಳಿಯ ಗಣಪತಿ ಗಂಗೊಳ್ಳಿ, ಹಾಸನದ ಎಚ್.ಬಿ.ಮದನಗೌಡ, ರಾಯಚೂರಿನ ಶಿವಮೂರ್ತಿ, ಮಂಗಳೂರು ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ, ಖಜಾಂಚಿ ಪುಷ್ಪರಾಜ್ ಮುಂತಾದವರು ನಿಯೋಗದಲ್ಲಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:21 pm, Thu, 16 May 24