AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ; ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಇನ್ಮುಂದೆ ಸಿಗಲಿದೆ ಫ್ರೀ ಬಸ್ ಪಾಸ್

ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಯೋಜನೆಯನ್ನು ಕಲ್ಪಿಸಲು ಕೆಎಸ್​ಆರ್​ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆಯೊಂದಿಗೆ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯಿಂದಲೇ ಶೇಕಡಾ 100 ರಷ್ಟು ವೆಚ್ಚಬರಿಸಿ ಬಸ್ ಪಾಸ್ ವಿತರಣೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ.

ಕಟ್ಟಡ ಕಾರ್ಮಿಕರಿಗೆ ಸಿಹಿ ಸುದ್ದಿ; ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಇನ್ಮುಂದೆ ಸಿಗಲಿದೆ ಫ್ರೀ ಬಸ್ ಪಾಸ್
ಕೆಎಸ್​ಆರ್​ಟಿಸಿ ಬಸ್ (ಸಾಂದರ್ಭಿಕ ಚಿತ್ರ)
TV9 Web
| Updated By: preethi shettigar|

Updated on:Dec 12, 2021 | 8:42 AM

Share

ಬೆಂಗಳೂರು: ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಹೊಸ ವರ್ಷಕ್ಕೂ ಮುನ್ನ ಸಿಹಿ ಸುದ್ದಿ ಸಿಕ್ಕಿದಂತಾಗಿದೆ. ವಾಸಸ್ಥಳದಿಂದ ಕೆಲಸದ ಸ್ಥಳಕ್ಕೆ ಹೋಗಿ ಬರಲು ಕಟ್ಟಡ ಕಾರ್ಮಿಕರಿಗೆ ಇನ್ನು ಮುಂದೆ ಫ್ರೀ ಬಸ್ ಪಾಸ್ (Free bus pass) ಸಿಗಲಿದೆ. ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ (Shivaram Hebbar) ಅಧಿಕೃತವಾಗಿ ಈ ಕುರಿತು ಘೋಷಣೆ ಮಾಡಿದ್ದಾರೆ. ಈ ಹಿಂದೆ ರಾಜಾಧಾನಿಯಲ್ಲಿ ಮಾತ್ರ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿತ್ತು. ಆದರೆ ಇದೀಗಾ ಈ ಯೋಜನೆಯನ್ನು ರಾಜ್ಯದಾದ್ಯಂತ ವಿಸ್ತರಿಸಲಾಗುತ್ತಿದೆ.

ಕಾರ್ಮಿಕರಿಗೆ ಸಾರಿಗೆ ವ್ಯವಸ್ಥೆ ಯೋಜನೆಯನ್ನು ಕಲ್ಪಿಸಲು ಕೆಎಸ್​ಆರ್​ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಸಂಸ್ಥೆಯೊಂದಿಗೆ ಸಭೆ ನಡೆಸಲಾಗಿತ್ತು. ಈ ಸಭೆಯಲ್ಲಿ ಕಾರ್ಮಿಕ ಇಲಾಖೆಯಿಂದಲೇ ಶೇಕಡಾ 100 ರಷ್ಟು ವೆಚ್ಚಬರಿಸಿ ಬಸ್ ಪಾಸ್ ವಿತರಣೆ ಮಾಡುವ ನಿರ್ಧಾರಕ್ಕೆ ಬರಲಾಗಿದೆ. ಈ ಹಿಂದೆ ಪಾಸ್ ವಿತರಣೆಯ ಶೇಕಡಾ 80 ರಷ್ಟು ವೆಚ್ಚವನ್ನು ಕಾರ್ಮಿಕ ಇಲಾಖೆ ವಹಿಸುತ್ತಿತ್ತು. ಉಳಿದ ಶೇಕಡಾ 20 ರಷ್ಟು ವೆಚ್ಚವನ್ನು ಬರಿಸುವ ಪ್ರಸ್ತಾವನೆಗೆ ಬಿಎಂಟಿಸಿಯಿಂದ ಮೌಖಿಕ ಸಂದೇಶ ಸಿಕ್ಕಿತ್ತು. ಆದರೆ ಬಿಎಂಟಿಸಿ ಸಂಕಷ್ಟದಲ್ಲಿ ಇದ್ದ ಕಾರಣದಿಂದಾಗಿ ರಿಯಾಯಿತಿ ನೀಡಲು ಸಾಧ್ಯಾವಾಗಿರಲಿಲ್ಲ. ಇದೀಗಾ ಕಾರ್ಮಿಕ ಇಲಾಖೆಯಿಂದಲೇ ಶೇಕಡಾ 100 ರಷ್ಟು ವೆಚ್ಚ ಭರಿಸಿ ಉಚಿತ ಬಸ್ ಪಾಸ್ ನೀಡಲು ನಿರ್ಧಾರ ಮಾಡಲಾಗಿದೆ.

ಉಚಿತ ಬಸ್ ಪಾಸ್ ಪಡೆಯಲು ಅರ್ಹತೆ ಏನು? 1. ಕರ್ನಾಟಕ ಕಟ್ಟಡ ಮತ್ತು ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೆಸರು ನೊಂದಾಣಿಯಾಗಿರಬೇಕು . 2. ಮಂಡಳಿಯ ಗುರುತಿನ ಚೀಟಿ ಹೊಂದಿರಬೇಕು. 3. ಎರಡು ಸ್ಟಾಂಪ್ ಅಳತೆಯ ಭಾವಚಿತ್ರ ಮತ್ತು ಆಧಾರ್ ಕಾರ್ಡ್ ಸಲ್ಲಿಸಬೇಕು. 4. ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ವಿಜಯನಗರ, ಯಶವಂತಪುರ, ಬನಶಂಕರಿ, ಶಾಂತಿನಗರ, ದೊಮ್ಮಲೂರು, ಕೋರಮಂಗಲ, ಕೆಂಗೇರಿ, ಯಲಹಂಕ, ಹೊಸಕೋಟೆ, ಕೆಆರ್​ ಪುರ , ಹೆಚ್​ಎಸ್​ಆರ್​ ಬಡಾವಣೆ, ಹೆಬ್ಬಾಳ, ನಾಗಮಂಗಲ,ಬಾಗಲಗುಂಟೆ ಕಾರ್ಮಿಕ‌ ಇಲಾಖೆಗಳಲ್ಲಿ ದಾಖಲೆ‌ ಸಲ್ಲಿಸಿ ಪಾಸ್ ಪಡೆಯಬಹುದು.

ಇದನ್ನೂ ಓದಿ: ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರ ವಜಾ ಖಂಡಿಸಿ ಮುಂದುವರೆದ ಪಾದಯಾತ್ರೆ; ತುಮಕೂರಿನಿಂದ ಸಿಎಂ ನಿವಾಸದತ್ತ ಹೊರಟ ನೌಕರರು

Google: ಗೂಗಲ್​ನಿಂದ ಉದ್ಯೋಗಿಗಳಿಗೆ 1,21,000 ರೂಪಾಯಿ ಒಂದು ಸಲದ ನಗದು ಬೋನಸ್ ಘೋಷಣೆ

Published On - 8:31 am, Sun, 12 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ