AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ!

ಕರ್ನಾಟಕ ಸರ್ಕಾರದ ಶಾಲಾ-ಕಾಲೇಜು ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಆರಂಭದಲ್ಲೇ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮೊದಲ ಎರಡು ದಿನಗಳಲ್ಲಿ 2,764 ಪಾಸ್‌ಗಳನ್ನು ವಿತರಿಸಲಾಗಿದೆ. ಗಡಿಭಾಗದ ವಿದ್ಯಾರ್ಥಿಗಳಿಗೂ ಅನ್ವಯಿಸುವ ಈ ಯೋಜನೆಗೆ ಸರ್ಕಾರ ವಾರ್ಷಿಕ 286 ಕೋಟಿ ರೂ. ವೆಚ್ಚ ಮಾಡಲಿದ್ದು, ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ: ಆರಂಭದ ಎರಡು ದಿನಗಳಲ್ಲೇ 2.7 ಸಾವಿರಕ್ಕೂ ಹೆಚ್ಚು ಪಾಸ್ ವಿತರಣೆ!
ಸಾಂದರ್ಭಿಕ ಚಿತ್ರImage Credit source: The Indian Express
ಭಾವನಾ ಹೆಗಡೆ
|

Updated on: Jun 14, 2026 | 12:49 PM

Share

ಬೆಂಗಳೂರು, ಜೂನ್ 14: ರಾಜ್ಯದ ಎಲ್ಲಾ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿಸ್ತರಿಸಿರುವ ಉಚಿತ ಬಸ್ ಪಾಸ್ (Student Bus Pass) ಯೋಜನೆಗೆ ಮೊದಲ ಎರಡು ದಿನಗಳಲ್ಲೇ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೂನ್ 11 ರಂದು ಸರ್ಕಾರ ಈ ಮಹತ್ವದ ಆದೇಶ ಹೊರಡಿಸಿದ ಬೆನ್ನಲ್ಲೇ, ಕೇವಲ ಎರಡು ದಿನಗಳಲ್ಲಿ ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ಉಚಿತ ವಿದ್ಯಾರ್ಥಿ ಪಾಸ್‌ಗಳನ್ನು ವಿತರಿಸಲಾಗಿದೆ. ಯೋಜನೆ ಜಾರಿಯಾದ ಮೊದಲ ದಿನವಾದ ಶುಕ್ರವಾರ 821 ಪಾಸ್‌ಗಳು ಹಾಗೂ ಶನಿವಾರ 1,943 ಪಾಸ್‌ಗಳನ್ನು ವಿತರಿಸಲಾಗಿದೆ.

ಮುಖ್ಯಾಂಶಗಳು

  • ಉಚಿತ ಬಸ್ ಪಾಸ್ ಯೋಜನೆಗೆ ಆರಂಭದ ಎರಡು ದಿನಗಳಲ್ಲೇ ಭರ್ಜರಿ ಸ್ಪಂದನೆ ಸಿಕ್ಕಿದೆ.
  • ನಾಲ್ಕು ಸಾರಿಗೆ ನಿಗಮಗಳಿಂದ ಒಟ್ಟು 2,764 ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗಿದೆ.
  • ಈ ಉಚಿತ ಯೋಜನೆಯಿಂದ ಸರ್ಕಾರಕ್ಕೆ ವಾರ್ಷಿಕ 286 ಕೋಟಿ ರೂಪಾಯಿ ವೆಚ್ಚವಾಗಲಿದೆ.

ಯಾವ ನಿಗಮದಿಂದ ಎಷ್ಟು ಪಾಸ್ ವಿತರಣೆ?

  • ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (NWKRTC): 995 ಪಾಸ್‌ಗಳು
  • ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC): 860 ಪಾಸ್‌ಗಳು
  • ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KKRTC): 641 ಪಾಸ್‌ಗಳು
  • ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC): 268 ಪಾಸ್‌ಗಳು

ಗಡಿಭಾಗದ ವಿದ್ಯಾರ್ಥಿಗಳಿಗೂ ಪಾಸ್ ಲಭ್ಯ

ಈ ಯೋಜನೆಯು ಕರ್ನಾಟಕದ ಗಡಿಭಾಗದಲ್ಲಿ ವಾಸಿಸುತ್ತಾ ನೆರೆರಾಜ್ಯಗಳ ಶಾಲಾ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಹಾಗೂ ನೆರೆರಾಜ್ಯಗಳ ಗಡಿಭಾಗದಿಂದ ಬಂದು ಕರ್ನಾಟಕದಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೂ ಅನ್ವಯಿಸಲಿದೆ. ಈ ಉಚಿತ ಪಾಸ್ ಯೋಜನೆಗಾಗಿ ಸರ್ಕಾರಕ್ಕೆ ವಾರ್ಷಿಕ ಸುಮಾರು 286.08 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ. ಇದರೊಂದಿಗೆ ಅಪಘಾತ ಪರಿಹಾರ ನಿಧಿ ಮತ್ತು ಪ್ರೊಸೆಸಿಂಗ್ ಶುಲ್ಕಕ್ಕಾಗಿ ಹೆಚ್ಚುವರಿಯಾಗಿ 15 ಕೋಟಿ ರೂಪಾಯಿ ವೆಚ್ಚವಾಗಲಿದೆ.

ಇದನ್ನೂ ಓದಿ ಸೇವಾ ಸಿಂಧು ಪೋರ್ಟಲ್​ನಲ್ಲಿ ಉಚಿತ ಬಸ್ ಪಾಸ್​ಗೆ ಅರ್ಜಿ ಸಲ್ಲಿಸುವುದು ಹೇಗೆ? ಹಂತ ಹಂತದ ಮಾಹಿತಿ

ಈ ಹಿಂದೆ ವಿದ್ಯಾರ್ಥಿ ಪಾಸ್‌ಗಳ ವೆಚ್ಚವನ್ನು ಸರ್ಕಾರ, ಸಾರಿಗೆ ಸಂಸ್ಥೆಗಳು ಮತ್ತು ವಿದ್ಯಾರ್ಥಿಗಳು ಜಂಟಿಯಾಗಿ ಭರಿಸಬೇಕಾಗಿತ್ತು. ಆದರೆ ಈಗ ವಿದ್ಯಾರ್ಥಿಗಳಿಗೆ ಸಂಪೂರ್ಣ ಉಚಿತವಾಗಿ ನೀಡಲಾಗುತ್ತಿದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಶಾಲಾ-ಕಾಲೇಜುಗಳ ಮೂಲಕ ಅಥವಾ ಯಾವುದೇ ಸ್ಥಳದಿಂದ ಸೇವಾ ಸಿಂಧು (Seva Sindhu) ಪೋರ್ಟಲ್ ಮೂಲಕ ಉಚಿತ ಪಾಸ್‌ಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ