AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಯದೇವ ಆಸ್ಪತ್ರೆಯಿಂದ ಹೃದ್ರೋಗಿಗಳಿಗೆ ಉಚಿತ ಸ್ಟೆಂಟ್​ ಅಳವಡಿಕೆ ಶಿಬಿರ: ಇಲ್ಲಿದೆ ವಿವರ

ನಾಡಿನ ಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಉಚಿತ ಆಂಜಿಯೋಪ್ಲಾಸಿ ಕಾರ್ಯಾಗಾರ ನಡೆಯಲಿದ್ದು, 200 ಬಡರೋಗಿಗಳಿಗೆ ಉಚಿತ ಸ್ಟೆಂಟ್ ಅಳವಡಿಸಲು ಸಂಸ್ಥೆ ನಿರ್ಧರಿಸಿದೆ.

ಜಯದೇವ ಆಸ್ಪತ್ರೆಯಿಂದ ಹೃದ್ರೋಗಿಗಳಿಗೆ ಉಚಿತ ಸ್ಟೆಂಟ್​ ಅಳವಡಿಕೆ ಶಿಬಿರ: ಇಲ್ಲಿದೆ ವಿವರ
ಜಯದೇವ ಆಸ್ಪತ್ರೆ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:May 26, 2023 | 7:33 PM

Share

ಬೆಂಗಳೂರು: ನಾಡಿನ ಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (Jayadeva Institute of Cardiovascular Sciences and Research) ಉಚಿತ ಆಂಜಿಯೋಪ್ಲಾಸ್ಟಿ (Angioplasty) ಕಾರ್ಯಾಗಾರ ನಡೆಯಲಿದ್ದು, 200 ಬಡರೋಗಿಗಳಿಗೆ ಉಚಿತ ಸ್ಟೆಂಟ್ ಅಳವಡಿಸಲು ಸಂಸ್ಥೆ ನಿರ್ಧರಿಸಿದೆ. ಜಯದೇವ (Jayadeva Hospital) ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೆಕ್ಟ್ರಾನಿಕ್ಸ್, ಅಮೆರಿಕ ಹಾಗೂ ಡಾ.ಗೋವಿ೦ದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ವಿಸ್ಕಿನ್​ ಸನ್, ಅಮೆರಿಕ ಸಹಯೋಗದೊಂದಿಗೆ 200 ಬಡ ರೋಗಿಗಳಿಗೆ 2023ರ ಜೂನ್​ 12 ರಿಂದ 18ರ ವರೆಗೆ ಮೆಡಿಕೇಟೆಡ್‌ ಸ್ಟೆಂಟ್​ಗಳನ್ನು ಅಳವಡಿಸಲಾಗುವುದು ಎಂದು ಜಯದೇವ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌. ಮಂಜುನಾಥ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಾರ್ಯಾಗಾರವನ್ನು 200 ಜನ ಬಡರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಬಿಪಿಎಲ್‌ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯ

ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.

ಜೂನ್‌ 8 ನೋಂದಣಿಗೆ ಕೊನೆಯ ದಿನ

ಚಿಕಿತ್ಸೆ ಪಡೆಯಲು ರೋಗಿಗಳು ಜೂನ್‌ 8ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಕಾರ್ಯಾಗಾರ ಜೂ.12ರಿಂದ 18 ವರೆಗೆ ನಡೆಯಲಿದೆ.

1. ಜೂ.12 ರಿಂದ 14 ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆ

2. ಜೂ.15-16ರಂದು ಮೈಸೂರಿನ ಜಯದೇವ ಶಾಖೆ

3. ಜೂ.17-18ರಂದು ಕಲಬುರಗಿ ಶಾಖೆಯಲ್ಲಿ ಕಾರ್ಯಾಗಾರ ನಡೆಯಲಿದೆ.

ದಾಖಲಾತಿಗಾಗಿ ಸ೦ಪರ್ಕಿಸಬೇಕಾದ ದೂರವಾಣಿ ಸಂಖ್ಯೆ

1. ಬೆಂಗಳೂರು ಕಚೇರಿ ದೂರವಾಣಿ ಸಂಖ್ಯೆ : 9480827888 ಅಥವಾ 080-26944874

2. ಮೈಸೂರು ಕಚೇರಿ ದೂರವಾಣಿ ಸಂಖ್ಯೆ : 8660105492 ಅಥವಾ 0821-2263255

3. ಕಲಬುರಗಿ ಕಚೇರಿ ದೂರವಾಣಿ ಸಂಖ್ಯೆ : 9482114611 ಅಥವಾ 08472-230511

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:13 pm, Fri, 26 May 23

Follow Us
ವಿವೇಕ ಬಿರಾದಾರ
ವಿವೇಕ ಬಿರಾದಾರ

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ