ಬೆಂಗಳೂರು: ನಾಡಿನ ಖ್ಯಾತ ಹೃದ್ರೋಗ ಚಿಕಿತ್ಸಾ ಕೇಂದ್ರವಾದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯಲ್ಲಿ (Jayadeva Institute of Cardiovascular Sciences and Research) ಉಚಿತ ಆಂಜಿಯೋಪ್ಲಾಸ್ಟಿ (Angioplasty) ಕಾರ್ಯಾಗಾರ ನಡೆಯಲಿದ್ದು, 200 ಬಡರೋಗಿಗಳಿಗೆ ಉಚಿತ ಸ್ಟೆಂಟ್ ಅಳವಡಿಸಲು ಸಂಸ್ಥೆ ನಿರ್ಧರಿಸಿದೆ. ಜಯದೇವ (Jayadeva Hospital) ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮೆಕ್ಟ್ರಾನಿಕ್ಸ್, ಅಮೆರಿಕ ಹಾಗೂ ಡಾ.ಗೋವಿ೦ದರಾಜು ಸುಬ್ರಮಣಿ ಹಾರ್ಟ್ ಫೌಂಡೇಷನ್, ವಿಸ್ಕಿನ್ ಸನ್, ಅಮೆರಿಕ ಸಹಯೋಗದೊಂದಿಗೆ 200 ಬಡ ರೋಗಿಗಳಿಗೆ 2023ರ ಜೂನ್ 12 ರಿಂದ 18ರ ವರೆಗೆ ಮೆಡಿಕೇಟೆಡ್ ಸ್ಟೆಂಟ್ಗಳನ್ನು ಅಳವಡಿಸಲಾಗುವುದು ಎಂದು ಜಯದೇವ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಕಾರ್ಯಾಗಾರವನ್ನು 200 ಜನ ಬಡರೋಗಿಗಳು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗಾಗಿ ಆಯೋಜಿಸಲಾಗಿದೆ. ಪ್ರತಿ ರೋಗಿಗೂ ಉನ್ನತ ಗುಣಮಟ್ಟದ ಮೆಡಿಕೇಟೆಡ್ ಸ್ಟಂಟ್‌ಗಳನ್ನು ಉಚಿತವಾಗಿ ಅಳವಡಿಸಲಾಗುವುದು. ಈ ಸೌಲಭ್ಯವನ್ನು ಈಗಾಗಲೇ ಅಂಜಿಯೋಗ್ರಾಂ ತಪಾಸಣೆಗೆ ಒಳಪಟ್ಟಿರುವ ರೋಗಿಗಳು ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.
ರೋಗಿಗಳು ದಾಖಲಾತಿ ಸಂದರ್ಭದಲ್ಲಿ ಬಿಪಿಎಲ್ ಕಾರ್ಡ್ ಅಥವಾ ಕಡಿಮೆ ಆದಾಯ ಪ್ರಮಾಣ ಪತ್ರವನ್ನು ಹೊಂದಿರುವುದು ಕಡ್ಡಾಯವಾಗಿದೆ.
ಚಿಕಿತ್ಸೆ ಪಡೆಯಲು ರೋಗಿಗಳು ಜೂನ್ 8ರೊಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಕಾರ್ಯಾಗಾರ ಜೂ.12ರಿಂದ 18 ವರೆಗೆ ನಡೆಯಲಿದೆ.
1. ಜೂ.12 ರಿಂದ 14 ರವರೆಗೆ ಬೆಂಗಳೂರಿನ ಜಯದೇವ ಆಸ್ಪತ್ರೆ
2. ಜೂ.15-16ರಂದು ಮೈಸೂರಿನ ಜಯದೇವ ಶಾಖೆ
3. ಜೂ.17-18ರಂದು ಕಲಬುರಗಿ ಶಾಖೆಯಲ್ಲಿ ಕಾರ್ಯಾಗಾರ ನಡೆಯಲಿದೆ.
1. ಬೆಂಗಳೂರು ಕಚೇರಿ ದೂರವಾಣಿ ಸಂಖ್ಯೆ : 9480827888 ಅಥವಾ 080-26944874
2. ಮೈಸೂರು ಕಚೇರಿ ದೂರವಾಣಿ ಸಂಖ್ಯೆ : 8660105492 ಅಥವಾ 0821-2263255
3. ಕಲಬುರಗಿ ಕಚೇರಿ ದೂರವಾಣಿ ಸಂಖ್ಯೆ : 9482114611 ಅಥವಾ 08472-230511
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:13 pm, Fri, 26 May 23