Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ

ಬಾರ್​ನಲ್ಲಿ ಕೂತು ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೊಂದಿಗೆ ಕಿರಿಕ್ ಮಾಡಿಕೊಂಡಿದ್ದ ಯುವಕನನ್ನು ಚಾಕುವಿನಿಂದ ಇರಿದ ಕೊಲೆ ಮಾಡಿದ್ದಾರೆ.

Bengaluru News: ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ, ಸ್ನೇಹಿತರಿಂದಲೇ ಯುವಕನ ಕೊಲೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು

Updated on: Jun 25, 2023 | 6:53 AM

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಜಗಳ ಶುರುವಾಗಿ ಸ್ನೇಹಿತರೇ ಚಾಕುವಿನಿಂದ ಇರಿದು ಯುವಕನನ್ನು ಕೊಲೆ ಮಾಡಿರುವ ಭೀಕರ ಘಟನೆ ನಗರದ ಕಸವಿನಹಳ್ಳಿ ಮುಖ್ಯರಸ್ತೆಯ ಹರಳೂರು ಬಳಿ ನಡೆದಿದೆ(Murder). ಡೇವಿಡ್(20) ಕೊಲೆಯಾದ ಯುವಕ. ನೇಪಾಳ ಮೂಲದವನಾಗಿದ್ದ ಡೇವಿಡ್, ಅಡುಗೆ ಕೆಲಸ ಮಾಡುತ್ತಿದ್ದ. ಜೂನ್ 24ರ ಸಂಜೆ ಸ್ನೇಹಿತರೊಂದಿಗೆ ಬಾರ್​​​​ನಲ್ಲಿ ಪಾರ್ಟಿ ಮಾಡಿದ್ದ ಡೇವಿಡ್, ಕುಡಿಯುವ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರೊಂದಿಗೆ ಕಿರಿಕ್ ಮಾಡಿಕೊಂಡಿದ್ದಾನೆ.

ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ಸ್ನೇಹಿತರು ಡೇವಿಡ್ ಮೇಲೆ ದಾಳಿ ನಡೆಸಿ ಮನ ಬಂದಂತೆ ಚಾಕುವಿನಿಂದ ಇರಿದು, ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಯಿಂದ ತೀವ್ರ ರಕ್ತಸ್ರಾವಕ್ಕೊಳಗಾದ ಡೇವಿಡ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಲೆ ಆರೋಪಿಗಳು ಹಾಗೂ ಮೃತ ಡೇವಿಡ್ ನೇಪಾಳದ ನಿವಾಸಿಗಳಾಗಿದ್ದು ಅಕ್ಕ-ಪಕ್ಕದ ಮನೆಯಲ್ಲಿ ವಾಸಿಸುತ್ತಿದ್ದರು. ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಸ್ಥಳಕ್ಕೆ ವೈಟ್ ಫೀಲ್ಡ್ ಡಿಸಿಪಿ ಗಿರೀಶ್ ಹಾಗೂ ಬೆಳ್ಳಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ.

ಇದನ್ನೂ ಓದಿ: ತುಟಿ ಇನ್ನೂ ದಪ್ಪವಾಗಿ ಆಕರ್ಷಕವಾಗಿ ಕಾಣಬೇಕೆಂದು ಸರ್ಜರಿ ಮಾಡಿಸಿದ ಯುವತಿ; ಆಗಿದ್ದೇನು ನೋಡಿ!

ವಿದ್ಯುತ್ ಅವಘಡ; ಬೈಕ್​​​​​​​​ಗಳಿಗೆ ಹಾನಿ

ಯಶವಂತಪುರದ ಮುತ್ತೂಟ್​ ಫೈನಾನ್ಸ್​ ಕಚೇರಿಯ ತಳಮಹಡಿಯಲ್ಲಿ ವಿದ್ಯುತ್ ಶಾರ್ಟ್​ಸರ್ಕ್ಯೂಟ್​ನಿಂದ ವಿದ್ಯುತ್ ಅವಘಡ ಸಂಭವಿಸಿದೆ. ಘಟನೆಯಲ್ಲಿ ಕೆಲ ಬೈಕ್​​​​​​​​ಗಳಿಗೆ ಹಾನಿಯಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಆಯೇಷಾ ಬಾನು

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Loading...
Unable to load recommendations.
Follow Us