ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ

ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.

ಡಿಸೆಂಬರ್​ 1 ರಿಂದ ಅನ್‌ಬಾಕ್ಸಿಂಗ್ ಬೆಂಗಳೂರು ಹಬ್ಬ: 300 ಕ್ಕೂ ಹೆಚ್ಚು ಕಾರ್ಯಕ್ರಮಗಳು ಆಯೋಜನೆ
ಬೆಂಗಳೂರು ಹಬ್ಬ
Follow us
|

Updated on:Nov 20, 2023 | 8:03 AM

ಬೆಂಗಳೂರು ನ.20: ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಮುಂದಿನ ತಿಂಗಳು ನಗರದಾದ್ಯಂತ ನಡೆಯಲಿರುವ ‘ಬೆಂಗಳೂರು ಹಬ್ಬ’ಕ್ಕೆ (Bengaluru Habba) ಪಾಲಿಕೆಯ ಎಲ್ಲ ವಲಯಗಳು ಎಲ್ಲ ರೀತಿಯ ಸಹಕಾರ ನೀಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Girinath) ಅಧಿಕಾರಿಗಳಿಗೆ ಸೂಚಿಸಿದರು.

ಈ ಕುರಿತು ಶನಿವಾರ ನಡೆದ ವರ್ಚುವಲ್ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ಹಬ್ಬವನ್ನು ಡಿಸೆಂಬರ್‌ನಲ್ಲಿ ಆಚರಿಸಲಾಗುತ್ತಿದ್ದು, ಇದಕ್ಕೆ ಬೇಕಾದ ಸಹಕಾರವನ್ನು ಎಲ್ಲ ವಲಯ ಪಾಲಿಕೆಗಳು ನೀಡಬೇಕು. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯಾ ವಲಯ ಆಯುಕ್ತರು ಹಾಗೂ ವಲಯ ಜಂಟಿ ಆಯುಕ್ತರಿಗೆ ಸೂಚಿಸಿದರು.

ಜಂಕ್ಷನ್‌ಗಳು, ಫ್ಲೈಓವರ್‌ಗಳು, ಉದ್ಯಾನವನಗಳು ಮತ್ತು ಮಾರುಕಟ್ಟೆಗಳಂತಹ ಪ್ರಮುಖ ಸ್ಥಳಗಳನ್ನು ಗುರುತಿಸಲಾಗುತ್ತದೆ. ಪಾರಂಪರಿಕ ಕಟ್ಟಡಗಳು ಮತ್ತು ಪ್ರಮುಖ ಸರ್ಕಾರಿ ಕಚೇರಿಗಳಿಗೆ ವಿದ್ಯುತ್ ದೀಪಗಳಿಂದ ಶೃಂಗರಿಸಬೇಕು. ಮತ್ತು ಈ ಎಲ್ಲಾ ಸ್ಥಳಗಳಲ್ಲಿ ಹೆಚ್ಚಿನ ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು.

ಇದನ್ನೂ ಓದಿ: ಬ್ರ್ಯಾಂಡ್​ ಬೆಂಗಳೂರು ನಿರ್ಮಾಣಕ್ಕೆ ಸಮಿತಿ ರಚನೆ : ಡಿಎಸಿಂ ಡಿಕೆ ಶಿವಕುಮಾರ್​

ಬೆಂಗಳೂರು ಹಬ್ಬ ನಿರ್ದೇಶಕ ವಿ ರವಿಚಂದರ್ ಮಾತನಾಡಿ, ಅನ್‌ಬಾಕ್ಸಿಂಗ್ ಬೆಂಗಳೂರು ಫೌಂಡೇಶನ್ ವತಿಯಿಂದ ಡಿಸೆಂಬರ್ 1 ರಿಂದ 11 ರವರೆಗೆ ‘ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ’ವನ್ನು ಆಚರಿಸಲಾಗುತ್ತಿದ್ದು, ಇದನ್ನು 12 ವಿಭಾಗಗಳಾಗಿ ವಿಂಗಡಿಸಲಾಗಿದೆ. ಉತ್ಸವಕ್ಕೆ ಸಂಬಂಧಿಸಿದ ದೃಶ್ಯಗಳನ್ನು ಚಿತ್ರೀಕರಿಸಲಾಗುವುದು ಮತ್ತು ನಾಗರಿಕರು ಉತ್ಸವದ ಬಗ್ಗೆ ವಿವರಗಳನ್ನು https://habba.unboxingblr.com ನಲ್ಲಿ ಪಡೆಯಬಹುದು ಮತ್ತು ನೋಂದಾಯಿಸಿಕೊಳ್ಳಬಹುದು ಎಂದು ಅವರು ಹೇಳಿದರು.

ಡಿಸೆಂಬರ್ 1 ರಿಂದ 11ರ ವರೆಗೆ ಬೆಂಗಳೂರು ಅನ್‌ಬಾಕ್ಸಿಂಗ್ ಬಿಎಲ್‌ಆರ್ ಹಬ್ಬ 2023 ನಡೆಯಲಿದೆ ಇದು ಕಲೆ, ಸಂಸ್ಕೃತಿ, ಸಾಹಿತ್ಯ, ಪರಂಪರೆ, ತಂತ್ರಜ್ಞಾನ, ಪರಿಸರ, ವಿನ್ಯಾಸ, ನೃತ್ಯ, ಸಂಗೀತ ಮತ್ತು ರಂಗಭೂಮಿಗೆ ಸಂಬಂಧಿಸಿದ 300 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹೊಂದಿರುತ್ತದೆ.

Published On - 8:02 am, Mon, 20 November 23

ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
ಮಂಡ್ಯ ಹಿಂಸಾಚಾರ: ನಾಗಮಂಗಲ ಘಟನೆ ಬಗ್ಗೆ ಎಸ್​ಪಿ ಹೇಳಿದ್ದೇನು ನೋಡಿ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ
‘ಕಿರುಕುಳ ಆದಾಗಲೇ ಹೇಳಿ, ಐದು ವರ್ಷ ಬಿಟ್ಟೇಕೆ ಬರುತ್ತೀರಿ’; ನಟಿಯ ಪ್ರಶ್ನೆ