ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಇನ್ನಿಲ್ಲ
ಬೆಂಗಳೂರಿನ ಜೆ.ಪಿ.ನಗರದ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳದಿದ್ದಾರೆ.

ಅನಾರೋಗ್ಯದ ಕಾರಣದಿಂದ ಮೃತಪಟ್ಟ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸಾಯಿದತ್ತ ಅವರು ನಿಧನರಾಗಿದ್ದಾರೆ. ಆನಾರೋಗ್ಯ ಸಮಸ್ಯೆಯಿಂದ ಸಾಯಿದತ್ತರನ್ನು ಜೆ.ಪಿ.ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾಯಿದತ್ತ ಕೊನೆಯುಸಿರೆಳದಿದ್ದಾರೆ. ಇನ್ನು ಇವರು ಜಾಹೀರಾತು ಮಾಫಿಯಾ ವಿರುದ್ಧ ದೊಡ್ಡಮಟ್ಟದ ಹೋರಾಟ ನಡೆಸಿದ್ದರು. ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ನಿರತರಾಗಿದ್ದ ಇವರು ಶಾಸಕ ಗರುಡಾಚಾರ್ ಅವರ ಆಪ್ತ ಸಹಾಯಕರಾಗಿದ್ದರು. ಇಂದು ದೇವೆಗೌಡ ಪೆಟ್ರೋಲ್ ಬಂಕ್ ಬಳಿಯಿರುವ ಇವರ ಮನೆಯಲ್ಲಿ ಮಧ್ಯಾಹ್ನ 2-30 ರ ವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬನಶಂಕರಿ ಅಥವಾ ಚಾಮರಾಜಪೇಟೆ ಚಿತಗಾರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.
ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ




