AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್​​ ಸಂಚಾರ

KSRTC Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್ ಸಂಚರಿಸಲಿದ್ದು, ಅತಿ ಕಡಿಮೆ ದರದಲ್ಲಿ ಸುಖಕರವಾದ ಪ್ರಯಾಣ ನಿಮ್ಮದಾಗುತ್ತದೆ.

Electric Bus: ಜನವರಿ 16 ರಿಂದ ಬೆಂಗಳೂರು-ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್​ ಬಸ್​​ ಸಂಚಾರ
ಎಲೆಕ್ಟ್ರಿಕ್​ ಬಸ್​​
TV9 Web
| Updated By: ವಿವೇಕ ಬಿರಾದಾರ|

Updated on:Jan 14, 2023 | 4:02 PM

Share

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿಂದ ಮೈಸೂರು ಮಾರ್ಗವಾಗಿ  ಎಲೆಕ್ಟ್ರಿಕ್​ ​ಬಸ್​ ಬಿಡಲು ನಿರ್ಧರಿಸಿದೆ. ಜನವರಿ 16ರ ನಂತರ ಬಸ್​ಗಳು ರೋಡ್​ಗೆ ಇಳಿಯಲಿವೆ. ಇ ಬಸ್​ನ (E-Bus) ಪ್ರಯಾಣ ದರ 300 ರೂ. ಆಗಿರಲಿದೆ. ಇನ್ನು ಫೆಬ್ರವರಿ ಅಂತ್ಯದ ಒಳಗೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಸಂಪರ್ಕಿಸುವ 6 ಮಾರ್ಗಗಳಿಗೆ ಇ-ಬಸ್​ ಬಿಡುವ ಚಿಂತನೆ ಇದೆ.

ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್​ಗು ಚಾರ್ಜಿಂಗ್ ಸಾಕೆಟ್‌ , ಎಸಿ​ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್​ ಬಸ್​ಗಳು 2022 ಡಿಸೆಂಬರ್​ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್​ ರೈಡ್​​ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು​ ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ  ಎಲೆಕ್ಟ್ರಿಕ್​ ಬಸ್​​ ತಡೆರಹಿತವಾಗಿದ್ದು, ಬಸ್​ಗೆ ಪ್ರಿಮಿಯಂ ಸರ್ವಿಸ್​ ಪಾಸ್​​ ಹೊಂದಿರುತ್ತದೆ.

ಎಲೆಕ್ಟ್ರಿಕ್​ ಬಸ್​​ಗಳನ್ನು ಒಂದು ಸಾರಿ ಚಾರ್ಜ್​ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್​ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜ​ಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್​ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್​ ಪಾಯಿಂಟ್​ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್​ ನಿಲ್ದಾಣಗಳಲ್ಲಿ ಚಾರ್ಜಿಂಗ್​ ಪಾಯಿಂಟ್​ ಇರಿಸಲಾಗುತ್ತದೆ.

ಎಲೆಕ್ಟ್ರಿಕ್​ ಬಸ್​ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್​​ಆರ್​ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:02 pm, Sat, 14 January 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ