ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಬೆಂಗಳೂರಿಂದ ಮೈಸೂರು ಮಾರ್ಗವಾಗಿ ಎಲೆಕ್ಟ್ರಿಕ್ ಬಸ್ ಬಿಡಲು ನಿರ್ಧರಿಸಿದೆ. ಜನವರಿ 16ರ ನಂತರ ಬಸ್‌ಗಳು ರೋಡ್ಗೆ ಇಳಿಯಲಿವೆ. ಇ ಬಸ್ನ (E-Bus) ಪ್ರಯಾಣ ದರ 300 ರೂ. ಆಗಿರಲಿದೆ. ಇನ್ನು ಫೆಬ್ರವರಿ ಅಂತ್ಯದ ಒಳಗೆ ಬೆಂಗಳೂರಿನಿಂದ ವಿವಿಧ ನಗರಗಳಿಗೆ ಸಂಪರ್ಕಿಸುವ 6 ಮಾರ್ಗಗಳಿಗೆ ಇ-ಬಸ್ ಬಿಡುವ ಚಿಂತನೆ ಇದೆ.
ಇ-ಬಸ್‌ಗಳು ಆರಾಮದಾಯಕವಾದ ಆಸನ, ದೂರದರ್ಶನ, ಪ್ರೀಮಿಯಂ ಸೀಟ್‌ಗಳು, ಪ್ರತಿಯೊಂದು ಸೀಟ್ಗು ಚಾರ್ಜಿಂಗ್ ಸಾಕೆಟ್ , ಎಸಿ ವೆಂಟ್‌ಗಳು, ಓದುವ ದೀಪಗಳು ಇನ್ನೂ ಅನೇಕ ಸೌಲಭ್ಯಗಳನ್ನು ಒಳಗೊಳ್ಳಲಿದೆ. ಎಲೆಕ್ಟ್ರಿಕ್ ಬಸ್‌ಗಳು 2022 ಡಿಸೆಂಬರ್ 31 ರಂದು ರಾಜ್ಯಕ್ಕೆ ಬಂದಿದ್ದು, ಈಗಾಗಲೆ ಟ್ರಯಲ್ ರೈಡ್ನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ. ಮೊದಲ ಇ-ಬಸ್ ಜನವರಿ 16ರಂದು ಬೆಂಗಳೂರಿನಿಂದ ಹೊರಟು ಮೈಸೂರು ತಲುಪುತ್ತದೆ. ಬೆಂಗಳೂರಿಂದ ಮೈಸೂರಿಗೆ ಹೊರಡುವ ಎಲೆಕ್ಟ್ರಿಕ್ ಬಸ್ ತಡೆರಹಿತವಾಗಿದ್ದು, ಬಸ್ಗೆ ಪ್ರಿಮಿಯಂ ಸರ್ವಿಸ್ ಪಾಸ್ ಹೊಂದಿರುತ್ತದೆ.
ಎಲೆಕ್ಟ್ರಿಕ್ ಬಸ್ಗಳನ್ನು ಒಂದು ಸಾರಿ ಚಾರ್ಜ್ ಮಾಡಿದರೆ 300ಕೀಮಿ ಸಂಚರಿಸುತ್ತದೆ. ಇನ್ನು ಫೆಬ್ರವರಿಯಲ್ಲಿ ರೋಡಿಗಿಳಿಯುವ 50 ಬಸ್‌ಗಳು ಬೆಂಗಳೂರಿನಿಂದ ಮಡಿಕೇರಿ, ವಿರಾಜಪೇಟ, ಚಿಕ್ಕಮಗಳೂರು, ದಾವಣಗೇರೆ ಮತ್ತು ಶಿವಮೊಗ್ಗ ನಗರಕ್ಕೆ ಸಂಪರ್ಕ ಕಲ್ಪಿಸಲಿವೆ. ಈಗಾಗಲೆ ಬಸ್ಗಳಿಗಾಗಿ ಮೈಸೂರು ಮತ್ತು ಬೆಂಗಳೂರಲ್ಲಿ ಚಾರ್ಜಿಂಗ್ ಪಾಯಿಂಟ್ಗಳನ್ನು ತೆರೆಯಲಾಗಿದೆ. ಮುಂದಿನ ದಿನಗಳಲ್ಲಿ ಮಡಿಕೇರಿ, ವಿರಾಜಪೇಟ, ದಾವಣಗೇರೆ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಬಸ್ ನಿಲ್ದಾಣಗಳಲ್ಲಿ ಚಾರ್ಜಿಂಗ್ ಪಾಯಿಂಟ್ ಇರಿಸಲಾಗುತ್ತದೆ.
ಎಲೆಕ್ಟ್ರಿಕ್ ಬಸ್ಗಳ ಕಾರ್ಯನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದ್ದು, ಗ್ರಾಸ್ ಕಾಸ್ಟ್ ಕಾಂಟ್ರಾಕ್ಟ್ (GCC) ನಿರ್ವಹಿಸಲಿದೆ. ಈ ನಿರ್ವಹಣೆಗೆ ಕೆಎಸ್ಆರ್ಟಿಸಿ ಕೂಡ ಹಣ ನೀಡಲು ಮುಂದಾಗಿದ್ದು, ಕಾರ್ಯಾಚರಣೆಯ ವೆಚ್ಚವಾಗಿ ಕಿಮೀಗೆ 55 ರೂಪಾಯಿಗಳನ್ನು ಪಾವತಿಸಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:02 pm, Sat, 14 January 23