AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಳೆಯಿಂದ ಸೆ. 30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ: ಸರ್ಕಾರ ಆದೇಶ

ಸಾರ್ವಜನಿಕ ಹಿತದೃಷ್ಟಿಯಿಂದ ನಾಳೆಯಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ಶುಕ್ರವಾರ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿಆರ್​ ಮಮತಾ ಅವರಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ನಾಳೆಯಿಂದ ಸೆ. 30ರವರೆಗೆ ಸಬ್ ರಿಜಿಸ್ಟ್ರಾರ್ ಕಚೇರಿ ಅವಧಿ ವಿಸ್ತರಣೆ: ಸರ್ಕಾರ ಆದೇಶ
ಪ್ರಾತಿನಿಧಿಕ ಚಿತ್ರ
Shivaraj
| Edited By: |

Updated on:Sep 22, 2023 | 7:38 PM

Share

ಬೆಂಗಳೂರು, ಸೆಪ್ಟೆಂಬರ್​ 22: 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ನೋಂದಣಿ ಮಾಡಿಸುವವರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ನಾಳೆಯಿಂದ ಸೆ.30ರವರೆಗೆ ರಾಜ್ಯದ ಎಲ್ಲಾ ಸಬ್ ರಿಜಿಸ್ಟ್ರಾರ್ ಕಚೇರಿ (Sub-registrar office) ಅವಧಿಯನ್ನು ಬೆಳಿಗ್ಗೆ 8 ರಿಂದ ರಾತ್ರಿ 8 ರವರೆಗೆ ವಿಸ್ತರಣೆ ಮಾಡಿ ಶುಕ್ರವಾರ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ.

ಈ ಕುರಿತಾಗಿ ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿಆರ್​ ಮಮತಾ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕಚೇರಿ ಕಾರ್ಯನಿರ್ವಹಣಾ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ತಿಳಿಸಿದೆ. ಸೆಪ್ಟೆಂಬರ್ 23 ನಾಲ್ಕನೇ ಶನಿವಾರದಂದೂ ಕೂಡ ಈ ಕಾರ್ಯ ನಿರ್ವಹಣೆ ಇರಲಿದ್ದು, ಹೆಚ್ಚುವರಿ ಕೆಲಸದ ಅವಧಿ ಸೆ. 30 ರವರೆಗೆ ಮಾತ್ರ ಅನ್ವಯ ಆಗಲಿದೆ.

ಇದನ್ನೂ ಓದಿ: Bengaluru Water Supply: ಕೆಪಿಟಿಸಿಎಲ್​ ಕಾಮಗಾರಿ: ಇಡೀ ಬೆಂಗಳೂರಿನಲ್ಲಿ ನಾಳೆ ನೀರು ವ್ಯತ್ಯಯ

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿಯ (Central Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ, ಮಾರ್ಗಸೂಚಿ ದರಗಳನ್ನು ಪರಿಷ್ಕರಣೆ ಮಾಡಲಾಗಿತ್ತಿದೆ. ಹಾಗಾಗಿ ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳು ಇವೆ.

ಇದನ್ನೂ ಓದಿ: ಕಾವೇರಿದ ಕಾವೇರಿ ಕಿಚ್ಚು: ನಾಳೆ ಮಂಡ್ಯ ನಗರ ಬಂದ್, ಏನಿರುತ್ತೆ? ಏನಿರಲ್ಲ?

ಆ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷಿಯಿಂದ ರಾಜ್ಯದ ಎಲ್ಲಾ ಉಪ ನೋಂದಣಿ ಕಛೇರಿಗಳ ಕೆಲಸದ ಅವಧಿಯನ್ನು ಸೆ. 23 ರಿಂದ ಜಾರಿಗೆ ಬರುವಂತೆ ಬೆಳಿಗ್ಗೆ 8.00 ಗಂಟೆಯಿಂದ ರಾತ್ರಿ 8.00 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಛೇರಿ ಅವಧಿಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿದೆ.

ಸೆ. 23 ರಂದು ನಾಲ್ಕನೇ ಶನಿವಾರವಾದರೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಈ ಕೆಲಸದ ಅವಧಿ ಸೆ. 30ರ ವರೆಗೆ ಮಾತ್ರ ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದು ಕೊಳ್ಳುವಂತೆ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮನವಿ ಮಾಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:29 pm, Fri, 22 September 23