FSLನಿಂದ ಪಿಎಸ್ಐ ಅಭ್ಯರ್ಥಿಗಳ ಅಕ್ರಮ ಬಟಾಬಯಲು! ನಾಳೆ ಹೈಕೋರ್ಟ್ಗೆ ವರದಿ ಸಲ್ಲಿಕೆ
ಓಎಂಆರ್ ಶೀಟ್, ಕಾರ್ಬನ್ ಶೀಟ್ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು.
ಬೆಂಗಳೂರು: 545 ಪಿಎಸ್ಐ ಹುದ್ದೆಗಳ (PSI Recruitment) ನೇಮಕಾತಿಯಲ್ಲಿ ನಡೆದ ಅಕ್ರಮ ಬಯಲಾದ ದಿನದಿಂದ ಸಿಐಡಿ (CID) ಅಧಿಕಾರಿಗಳು ನಿರಂತರವಾಗಿ ವಿಚಾರಣೆ ನಡೆಸುತ್ತಿದ್ದಾರೆ. ಅಕ್ರಮದ ಬಗ್ಗೆ ಅಧಿಕಾರಿಗಳು ಸಂಪೂರ್ಣ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನು ಈ ಪ್ರಕರಣದಲ್ಲಿ ಹಲವಾರು ಆರೋಪಿಗಳು ಈಗಾಗಲೇ ಬಂಧನಕ್ಕೊಳಗಾಗಿದ್ದಾರೆ. ಸದ್ಯ ಓಎಂಆರ್ ಶೀಟ್, ಕಾರ್ಬನ್ ಶೀಟ್ನಲ್ಲಿ ಅಕ್ರಮ ಎಸಗಿರುವುದು ಬಟಾಬಯಲಾಗಿದ್ದು, ಈ ಬಗ್ಗೆ ಎಫ್ಎಸ್ಎಲ್ ವರದಿಯನ್ನು (PSL Report) ನಾಳೆ ಹೈಕೋರ್ಟ್ಗೆ ಸಲ್ಲಿಕೆ ಮಾಡಲಾಗುತ್ತದೆ.
ಓಎಂಆರ್ ಶೀಟ್, ಕಾರ್ಬನ್ ಶೀಟ್ನಲ್ಲಿ ಅಕ್ರಮ ಎಸಗಿರುವ ಕುರಿತು ಬೆಂಗಳೂರಿನಲ್ಲಿ ಸುಮಾರು 27 ಅಭ್ಯರ್ಥಿಗಳ ಮೇಲೆ ಎಫ್ಐಆರ್ ದಾಖಲಾಗಿತ್ತು. ಓಎಂಆರ್ ಶೀಟ್ಗಳನ್ನ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಇದೀಗ ಎಫ್ಎಸ್ಎಲ್ ವರದಿಯಲ್ಲಿ ಅಕ್ರಮ ನಡೆದಿರುವುದು ಪಕ್ಕಾ ಆಗಿದೆ. ಸದ್ಯ ಎಫ್ಎಸ್ಎಲ್ ವರದಿ ಸಿಐಡಿ ಕೈಯಲ್ಲಿದ್ದು, ನಾಳೆ ಕೋರ್ಟ್ಗೆ ನೀಡಲಾಗುತ್ತದೆ.
ಇದನ್ನೂ ಓದಿ: ನೂಪುರ್ ಶರ್ಮಾ ವಿರುದ್ಧದ ಪ್ರತಿಕೂಲ ಅಭಿಪ್ರಾಯವನ್ನು ಹಿಂಪಡೆಯುವಂತೆ ಸುಪ್ರೀಂಕೋರ್ಟ್ಗೆ ಮನವಿ
ನೇಮಕಾತಿಯಲ್ಲಿ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢ: ಪ್ರಕರಣ ಸಂಬಂಧ ದರ್ಶನ್ ಗೌಡ ಅಕ್ರಮವೆಸಗಿರುವುದು ದೃಢವಾಗಿದೆ. ಎಫ್ಎಸ್ಎಲ್ ವರದಿಯಲ್ಲಿ ಅಭ್ಯರ್ಥಿ ದರ್ಶನ್ ಅಕ್ರಮದ ಸತ್ಯ ಬಹಿರಂಗವಾಗಿದ್ದು, ಪರೀಕ್ಷೆಯಲ್ಲಿ ಉತ್ತರ ಬರೆಯದೆ ದರ್ಶನ್ ಗೌಡ ರ್ಯಾಂಕ್ ಬಂದಿದ್ದ. ಪರೀಕ್ಷೆ ದಿನ ಸಂಪೂರ್ಣ ಗೊತ್ತಿದ್ದ ಕೆಲವು ಉತ್ತರ ಮಾತ್ರ ಬರೆದಿದ್ದ. ಉಳಿದ ಜಾಗದಲ್ಲಿ ಹಾಗೆ ಬಿಟ್ಟು ಉತ್ತರ ಪತ್ರಿಕೆ ಕೊಟ್ಟು ಹೋಗಿದ್ದ. ನೇಮಕಾತಿ ವಿಭಾಗದಲ್ಲೇ ಆರೋಪಿಯ ಉತ್ತರ ಪತ್ರಿಕೆ ತಿದ್ದಿದ್ದಾರೆ. ಖಾಲಿ ಉತ್ತರ ಪತ್ರಿಕೆಯನ್ನು ದರ್ಶನ್ ಗೌಡ ಕೊಟ್ಟು ಹೋಗಿದ್ದು, ಬಳಿಕ ಒಎಂಆರ್ ಶೀಟ್ ನಂಬರ್ ತಿಳಿಸಿದ್ದ.
ಇದನ್ನೂ ಓದಿ: ಒಂದೇ ರೂಮ್ನಲ್ಲಿ ನಟಿ ಪವೀತ್ರ ಲೋಕೇಶ್ ನಟ ನರೇಶ್? ರೂಂ ಮುಂದೆ ರಮ್ಯ ರಘುಪತಿ ಹೈಡ್ರಾಮಾ
ಪ್ರಕರಣದ ಪ್ರಮುಖ ಆರೋಪಿ ಎಸ್.ಜಾಗೃತ್ನ್ನು ಸಿಐಡಿ ಡಿವೈಎಸ್ಪಿ ಬಿ.ಕೆ.ಶೇಖರ್ ತಂಡ ನಿನ್ನೆ ಚನ್ನಪಟ್ಟಣದಲ್ಲಿ ಬಂಧಿಸಿದೆ. ಎಸ್.ಜಾಗೃತ್ ಪರೀಕ್ಷೆಯಲ್ಲಿ 4ನೇ ರ್ಯಾಂಕ್ ಬಂದಿದ್ದನು. ಎಸ್.ಜಾಗೃತ್ ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಎಫ್ಐಆರ್ ಹಾಕಿರುವುದನ್ನು ರದ್ದುಪಡಿಸಬೇಕು ಎಂದು ಹೈಕೋರ್ಟ್ ಮೆಟ್ಟಿಲೇರಿದ್ದ ನಾಲ್ವರು ಅಭ್ಯರ್ಥಿಗಳಲ್ಲಿ ಈ ಜಾಗೃತನೂ ಒಬ್ಬನಾಗಿದ್ದಾನೆ.
Published On - 10:36 am, Sun, 3 July 22