AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ

ಬೆಂಗಳೂರಿನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಸ್ಟಾಕ್ ಖಾಲಿಯಾಗಿದೆ. ನಯಾರಾ ಸೇರಿದಂತೆ ಇತರ ಖಾಸಗಿ ಕಂಪನಿಗಳ ಬಂಕ್‌ಗಳಲ್ಲಿ ಬೆಲೆ ಹೆಚ್ಚಾಗಿರುವುದರಿಂದ ಸರ್ಕಾರಿ ಸ್ವಾಮ್ಯದ ಕಂಪನಿಗಳ ಬಂಕ್‌ಗಳಲ್ಲಿ ಬೇಡಿಕೆ ಹೆಚ್ಚಾಗಿದ್ದು, ಡಿಪೋಗಳಿಂದ ಇಂಧನ ಸರಬರಾಜು ವಿಳಂಬವಾಗುತ್ತಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್, ಡೀಸೆಲ್ ಅಭಾವ: ಬಂಕ್‌ಗಳ ಮುಂದೆ ವಾಹನ ಸವಾರರ ಸಾಲು, ತೀವ್ರಗೊಂಡ ಇಂಧನ ಆತಂಕ
ಸಾಂದರ್ಭಿಕ ಚಿತ್ರ (ಎಐ)Image Credit source: Google Gemini
ವಿನಯ್​ ಕಾಶಪ್ಪನವರ್​
| Edited By: |

Updated on:May 06, 2026 | 2:32 PM

Share

ಬೆಂಗಳೂರು, ಮೇ 6: ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಟೋ ಎಲ್‌ಪಿಜಿ (Auto LPG) ಬಿಕ್ಕಟ್ಟಿನ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಪೂರೈಕೆಯಲ್ಲೂ ಭಾರೀ ವ್ಯತ್ಯಯ ಉಂಟಾಗಿದೆ. ನಗರದಲ್ಲಿ ತೈಲ ಪೂರೈಕೆ ಮಾಡುವ ಪ್ರಮುಖ ಕಂಪನಿಗಳಾದ ಎಚ್‌ಪಿ (HP) ಮತ್ತು ಭಾರತ್ ಪೆಟ್ರೋಲಿಯಂ (BP) ಬಂಕ್‌ಗಳಲ್ಲಿ ಕಳೆದ ಎರಡು ದಿನಗಳಿಂದ ಇಂಧನ ದಾಸ್ತಾನು ಖಾಲಿಯಾಗುತ್ತಿದ್ದು, ವಾಹನ ಸವಾರರಲ್ಲಿ ಆತಂಕ ಮನೆಮಾಡಿದೆ. ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ವಲಯದ ಬಂಕ್‌ಗಳ ಮೇಲೆ ಒತ್ತಡ ಹೆಚ್ಚಾಗಿದ್ದು, ಪೂರೈಕೆ ಸರಪಳಿ ಕಡಿತಗೊಂಡಿದೆ.

ಪೆಟ್ರೋಲ್, ಡೀಸೆಲ್ ಅಭಾವದ ಮುಖ್ಯಾಂಶಗಳು

  • ಎಚ್‌ಪಿ ಮತ್ತು ಭಾರತ್ ಪೆಟ್ರೋಲಿಯಂ ಬಂಕ್‌ಗಳಲ್ಲಿ ಪೆಟ್ರೋಲ್, ಡೀಸೆಲ್ ಸ್ಟಾಕ್ ಸಮಸ್ಯೆ ತೀವ್ರ.
  • ಶೆಲ್, ಜಿಯೋ ಮತ್ತು ನಯಾರಾದಂಥ ಖಾಸಗಿ ಬಂಕ್‌ಗಳಲ್ಲಿ ಬೆಲೆ ಏರಿಕೆಯಿಂದಾಗಿ ಸಾರ್ವಜನಿಕ ಬಂಕ್‌ಗಳತ್ತ ಮುಖ ಮಾಡಿದ ಜನ.
  • ಲಕ್ಷಾಂತರ ರೂಪಾಯಿ ಮುಂಗಡ ಹಣ ಪಾವತಿಸಿದರೂ ಡಿಪೋಗಳಿಂದ ಪೂರೈಕೆಯಾಗದ ಇಂಧನ.

ಎಲ್‌ಪಿಜಿ ಬಿಕ್ಕಟ್ಟಿನ ನೆನಪು

ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಆಟೋ ಎಲ್‌ಪಿಜಿ ಮತ್ತು ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿ ದೊಡ್ಡ ಸಂಚಲನ ಮೂಡಿಸಿತ್ತು. ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ದರ ಏರಿಕೆಯಾಗಿದ್ದರೆ, ಪಿಜಿ ಬಾಡಿಗೆಗಳು ಹೆಚ್ಚಾಗುವ ಭೀತಿಯೂ ಎದುರಾಗಿದೆ. ಅದರ ಬೆನ್ನಲ್ಲೇ ಈಗ ಪೆಟ್ರೋಲ್ ಮತ್ತು ಡೀಸೆಲ್ ಸಿಗದೆ ಜನರು ಬಂಕ್‌ಗಳ ಮುಂದೆ ಕ್ಯೂ ನಿಲ್ಲುವ ಪರಿಸ್ಥಿತಿ ನಿರ್ಮಾಣವಾಗಿದೆ. ಆಟೋ ಎಲ್‌ಪಿಜಿಗಾಗಿ ಸವಾರರು ಗಂಟೆಗಟ್ಟಲೆ ಕಾಯುತ್ತಿದ್ದ ದೃಶ್ಯಗಳು ಈಗ ಪೆಟ್ರೋಲ್ ಬಂಕ್‌ಗಳ ಮುಂದೆಯೂ ಮರುಕಳಿಸುವ ಆತಂಕ ಶುರುವಾಗಿದೆ.

ಡಿಪೋಗಳಿಂದ ಪೂರೈಕೆ ಸ್ಥಗಿತ

ತೈಲ ಮಾರಾಟಗಾರರು ಇಂಧನಕ್ಕಾಗಿ ಮುಂಗಡವಾಗಿ ಹಣ ಪಾವತಿಸಿದ್ದರೂ, ಡಿಪೋಗಳಿಂದ ಬಂಕ್‌ಗಳಿಗೆ ಸರಿಯಾದ ಸಮಯಕ್ಕೆ ಸರಬರಾಜು ಆಗುತ್ತಿಲ್ಲ. ಇಂಡಿಯನ್ ಆಯಿಲ್ (Indian Oil) ಬಂಕ್‌ಗಳಲ್ಲಿ ಸದ್ಯಕ್ಕೆ ಪೂರೈಕೆ ಸುಗಮವಾಗಿದ್ದರೂ, ಎಚ್‌ಪಿ ಮತ್ತು ಭಾರತ್ ಬಂಕ್‌ಗಳಲ್ಲಿ ಮಾತ್ರ ಪರಿಸ್ಥಿತಿ ಬಿಗಡಾಯಿಸಿದೆ.

ಇದನ್ನೂ ಓದಿ: ಹೋಟೆಲ್, ಆಟೋ ಬೆನ್ನಲ್ಲೇ ಈಗ ಪಿಜಿ ಸರದಿ: ಬೆಂಗಳೂರಿನಲ್ಲಿ ಶೇ 10ರಷ್ಟು ದುಬಾರಿಯಾಗಲಿದೆ ಪಿಜಿ ಬಾಡಿಗೆ

ಕೆಲವು ಬಂಕ್‌ಗಳಲ್ಲಿ ಇಂದು ದಾಸ್ತಾನು ಬಂದಿದೆ ಎಂದು ಮಾಲೀಕರು ಹೇಳುತ್ತಿದ್ದಾರಾದರೂ, ಬೇಡಿಕೆಗೆ ತಕ್ಕಷ್ಟು ಇಂಧನ ಸಿಗುತ್ತಿಲ್ಲ. ಈ ಪೂರೈಕೆ ಕೊರತೆಯ ಬಗ್ಗೆ ತೈಲ ಕಂಪನಿಗಳಿಂದ ಬಂಕ್ ಮಾಲೀಕರಿಗೆ ಇನ್ನು ಯಾವುದೇ ಸ್ಪಷ್ಟ ಮಾಹಿತಿ ದೊರೆತಿಲ್ಲ. ಇದು ವಾಹನ ಸವಾರರ ಆತಂಕವನ್ನು ಇಮ್ಮಡಿಗೊಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:27 pm, Wed, 6 May 26

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಸಿನಿಮಾ ಸೆನ್ಸಾರ್​​ಗೆ ಹೊಸ ಮಾರ್ಗಸೂಚಿ: ಇಲ್ಲಿದೆ ಪೂರ್ಣ ಮಾಹಿತಿ ವಿಡಿಯೋ
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ