ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅಂತ್ಯಸಂಸ್ಕಾರ; ಪೊಲೀಸ್ ಬ್ಯಾಂಡ್​ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ

| Updated By: preethi shettigar

Updated on: Jan 10, 2022 | 5:44 PM

ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ವೀರಶೈವ ಸಂಪ್ರದಾಯದಂತೆ ಸಾಹಿತಿ ಚಂಪಾ ಅಂತ್ಯಸಂಸ್ಕಾರ ಮಾಡಲಾಗಿದೆ. ಪೊಲೀಸ್ ಬ್ಯಾಂಡ್​ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ ಮಾಡಲಾಗಿದೆ.

ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ಅಂತ್ಯಸಂಸ್ಕಾರ; ಪೊಲೀಸ್ ಬ್ಯಾಂಡ್​ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ
ಸಾಹಿತಿ ಚಂದ್ರಶೇಖರ ಪಾಟೀಲ್ (ಚಂಪಾ)
Follow us on

ಬೆಂಗಳೂರು: ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ (chandrashekhar patil) ಅವರ ಅಂತ್ಯಕ್ರಿಯೆ ನೆರವೆರಿಸಲಾಯಿತು. ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ವೀರಶೈವ ಸಂಪ್ರದಾಯದಂತೆ ಸಾಹಿತಿ ಚಂಪಾ ಅಂತ್ಯಸಂಸ್ಕಾರ (Funeral) ಮಾಡಲಾಗಿದೆ. ಪೊಲೀಸ್ ಬ್ಯಾಂಡ್​ನೊಂದಿಗೆ ರಾಷ್ಟ್ರಗೀತೆ ನುಡಿಸಿ ಗೌರವ ಸಮರ್ಪಣೆ ಮಾಡಲಾಗಿದೆ.

ಚಂದ್ರಶೇಖರ ಪಾಟೀಲ್, ಕನ್ನಡ ನಾಡು-ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದರು. ಹಲವು ಪ್ರಶಸ್ತಿಗೆ ಭಾಜನರಾಗಿದ್ದರು. ಇವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ಲಭಿಸಿದೆ. ಇವರು ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ಚಂದ್ರಶೇಖರ ಪಾಟೀಲ್‌ರ ಅಂತಿಮ ದರ್ಶನ ಪಡೆದ ಸಿಎಂ ಬಸವರಾಜ ಬೊಮ್ಮಾಯಿ
ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಚಂದ್ರಶೇಖರ ಪಾಟೀಲ್‌ರ ಅಂತಿಮ ದರ್ಶನ ಪಡೆದಿದ್ದಾರೆ.

ಚಂದ್ರಶೇಖರ ಪಾಟೀಲರ ಅಂತಿಮದರ್ಶನ ಪಡೆದ ಸಿದ್ದರಾಮಯ್ಯ
ಸಿದ್ದರಾಮಯ್ಯ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್​ನಲ್ಲಿ ಚಂದ್ರಶೇಖರ ಪಾಟೀಲರ ಅಂತಿಮದರ್ಶನ ಪಡೆದಿದ್ದಾರೆ.

ಚಾಮರಾಜಪೇಟೆ ಬಳಿಯ ಟಿ.ಆರ್. ಮಿಲ್ ಬಳಿಯ ರುದ್ರಭೂಮಿಗೆ ತಲುಪಿದ ಚಂಪಾ ಪಾರ್ಥಿವ ಶರೀರ
ಸದ್ಯ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್ ರುದ್ರಭೂಮಿಗೆ ಆಗಮಿಸಿದ್ದಾರೆ. ವೀರಶೈವ ಸಂಪ್ರದಾಯದಂತೆ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಚಾಮರಾಜಪೇಟೆ ಬಳಿಯ ಟಿ.ಆರ್. ಮಿಲ್ ಬಳಿಯ ರುದ್ರಭೂಮಿಗೆ ಚಂಪಾ ಅವರ ಪಾರ್ಥಿವ ಶರೀರ ತಲುಪಿದೆ.

ಚಂಪಾ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದರು. ಅನೇಕ ಕವಿತೆ, ಕಥೆ ಬರೆದಿದ್ದಾರೆ. ಚಂಪಾ ಎನ್ನುವ ಕಾವ್ಯನಾಮದಿಂದಲೇ ಹೆಸರುವಾಸಿಯಾಗಿದ್ದರು. ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದರು. ನೇರ ನುಡಿ ಹಾಗೂ ಖಡಕ್ ಆಗಿದ್ದ ವ್ಯಕ್ತಿ, ಅಧಿಕಾರ ಸಿಕ್ಕಾಗ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಕನ್ನಡ ಪರ ಯಾವಾಗಲೂ ಹೋರಾಟ ಮಾಡಿಕೊಂಡು ಬರುತ್ತಿದ್ದರು. ಇವರ ಅಗಲಿಕೆಯಿಂದ ಕನ್ನಡ ಸಾಹಿತ್ಯಕ್ಕೆ ಅಪಾರ ನಷ್ಟವಾಗಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ:

ಮಣ್ಣಲ್ಲಿ ಮಣ್ಣಾದ ಕೇಂದ್ರದ ಮಾಜಿ ಸಚಿವ ಆರ್ ಎಲ್ ಜಾಲಪ್ಪ; ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

Basalingayya Hiremath: ಹಿರಿಯ ಜಾನಪದ ಕಲಾವಿದ ಬಸಲಿಂಗಯ್ಯ ಹಿರೇಮಠ ನಿಧನ

 

Published On - 5:29 pm, Mon, 10 January 22