ಬೆಂಗಳೂರಿನಲ್ಲಿ ಮಸಾಲಾ ಚಹಾ ಸವಿದ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಸೈಕಲ್ ಸವಾರಿಯೂ ಮಾಡಿದರು

ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಅವರು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ ಭೇಟಿ ನೀಡಿದರು. ನಗರದಲ್ಲಿ ಸುತ್ತಾಡಿದ ಅವರು ಬೀದಿ ಬದಿ ಮಸಾಲಾ ಚಹಾ ಸವಿದರಲ್ಲದೆ, ಬೈಸಿಕಲ್ ಸವಾರಿಯನ್ನೂ ಮಾಡಿ ಆನಂದಿಸಿದ್ದಾರೆ. ಬಳಿಕ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ಬೆಂಗಳೂರಿನಲ್ಲಿ ಮಸಾಲಾ ಚಹಾ ಸವಿದ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ, ಸೈಕಲ್ ಸವಾರಿಯೂ ಮಾಡಿದರು
ಬೆಂಗಳೂರಿಗೆ ಭೇಟಿಕೊಟ್ಟ ನೆದರ್​ರ್ಲ್ಯಾಂಡ್ಸ್​ ಪ್ರಧಾನಿ ಮಾರ್ಕ್ ರುಟ್ಟೆ ಅವರು ಸ್ಥಳೀಯರೊಂದಿಗೆ ಸೆಲ್ಫಿ ತೆಗೆದುಕೊಂಡರು
Follow us
Rakesh Nayak Manchi
|

Updated on: Sep 12, 2023 | 8:22 PM

ಬೆಂಗಳೂರು, ಸೆ.12: ದೆಹಲಿಯಲ್ಲಿ ನಡೆದ ಜಿ 20 ಶೃಂಗಸಭೆಯಲ್ಲಿ (G20 Summit) ಭಾಗವಹಿಸಲು ಭಾರತಕ್ಕೆ ಆಗಮಿಸಿದ್ದ ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ (Mark Rutte) ಅವರು ಕರ್ನಾಟಕದ ರಾಜಧಾನಿ ಬೆಂಗಳೂರಿಗೆ (Bengaluru) ಭೇಟಿ ನೀಡಿದರು. ನಗರದಲ್ಲಿ ಸುತ್ತಾಡಿದ ಅವರು ಬೀದಿ ಬದಿ ಮಸಾಲಾ ಚಹಾ ಸವಿದರಲ್ಲದೆ, ಬೈಸಿಕಲ್ ಸವಾರಿಯನ್ನೂ ಮಾಡಿ ಆನಂದಿಸಿದ್ದಾರೆ. ಬಳಿಕ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ.

ತಮ್ಮ ಭೇಟಿಯ ಸಮಯದಲ್ಲಿ, ಮಾರ್ಕ್ ರುಟ್ಟೆ ಅವರು ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ವಿಧಾನಸೌಧದಲ್ಲಿ ಭೇಟಿಯಾದರು. ಅಲ್ಲದೆ, ಕರ್ನಾಟಕದಲ್ಲಿ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲು ದುಂಡು ಮೇಜಿನ ಸಮ್ಮೇಳನವನ್ನೂ ನಡೆಸಿದರು.

ನಗರ ಪ್ರದಕ್ಷಿಣೆ ವೇಳೆ ಸ್ಥಳೀಯರೊಂದಿಗೆ ತೆಗೆದ ಸೆಲ್ಫಿಯನ್ನು ಎಕ್ಸ್​ನಲ್ಲಿ​​ (ಟ್ವಿಟರ್) ಹಂಚಿಕೊಂಡ ರುಟ್ಟೆ, “ನೆದರ್ಲ್ಯಾಂಡ್ಸ್ ಮತ್ತು ಭಾರತ ವ್ಯಾಪಕವಾದ ಆರ್ಥಿಕ ಸಂಬಂಧಗಳನ್ನು ಹೊಂದಿವೆ. 350 ಕ್ಕೂ ಹೆಚ್ಚು ಡಚ್ ಕಂಪನಿಗಳು ಇಲ್ಲಿ ವ್ಯವಹಾರ ನಡೆಸುತ್ತವೆ. ಭಾರತ ಮತ್ತು ನೆದರ್ಲ್ಯಾಂಡ್ಸ್ ಸಹ ಅದೇ ಉದ್ಯಮಶೀಲ ಮನೋಭಾವ ಮತ್ತು ನಾವೀನ್ಯತೆಯ ಸಾಮರ್ಥ್ಯವನ್ನು ಹಂಚಿಕೊಳ್ಳುತ್ತವೆ” ಎಂದರು.

ಇದನ್ನೂ ಓದಿ: G20 Summit: ಜಿ-20 ನಾಯಕರಿಗೆ ವಿಶೇಷ ಉಡುಗೊರೆ ನೀಡಿದ ಭಾರತ, ಇಲ್ಲಿದೆ ನೋಡಿ

“ಕೃಷಿ ಮತ್ತು ನೀರಿನ ನಿರ್ವಹಣೆಯಂತಹ ಕ್ಷೇತ್ರಗಳಲ್ಲಿ ನಾವು ಒಟ್ಟಾಗಿ ಕೆಲಸ ಮಾಡುತ್ತೇವೆ ಮತ್ತು ಹೆಚ್ಚಿನ ಅವಕಾಶಗಳು ಸಾರ್ವಕಾಲಿಕವಾಗಿ ತೆರೆದುಕೊಳ್ಳುತ್ತಿವೆ. ಇದು ದಕ್ಷಿಣ ಭಾರತದ ಬೆಂಗಳೂರಿಗೆ ನನ್ನ ಪ್ರವಾಸದ ಕೇಂದ್ರಬಿಂದುವಾಗಿತ್ತು” ಎಂದು ರುಟ್ಟೆ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

ಡಿಜಿಟಲ್ ಪಾವತಿ ಮೂಲಕ ಹಣ ವರ್ಗಾಯಿಸಿ ತಮಗೆ ಬೇಕಾದುದನ್ನು ಖರೀದಿಸಿದ ರುಟ್ಟೆ, ಯುಪಿಐ ಪಾವತಿ ವಿಧಾನದಿಂದ ಪ್ರಭಾವಿತರಾದರು. ಅದನ್ನು ‘ಸರಳ ಮತ್ತು ಸುಲಭ’ ಎಂದು ಕರೆದರು. ಚರ್ಚ್ ಸ್ಟ್ರೀಟ್​ನಲ್ಲಿ ಬೆಂಗಳೂರಿನ ಬೈಸೈಕಲ್ ಮೇಯರ್ ಸತ್ಯ ಶಂಕರನ್ ಅವರೊಂದಿಗೆ ಸೈಕಲ್ ಸವಾರಿ ಮಾಡಿದ ಬಗ್ಗೆಯೂ ರುಟ್ಟೆ ಮಾಹಿತಿ ಹಂಚಿಕೊಂಡಿದ್ದಾರೆ.

ಕರ್ನಾಟಕದ ಉಪ ಮುಖ್ಯಮಂತ್ರಿಯೊಂದಿಗೆ ದುಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿದ ನಂತರ ಮಾತನಾಡಿದ ರುಟ್ಟೆ, “ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಚ್ ಕಂಪನಿಗಳಿಗೆ ಆರ್ಥಿಕ ಬೆಳವಣಿಗೆ ಮತ್ತು ಹೂಡಿಕೆಯ ಸಾಧ್ಯತೆಗಳ ಮೇಲೆ ಕೇಂದ್ರೀಕರಿಸಿ ಪರಸ್ಪರ ಹಿತಾಸಕ್ತಿಯ ಕಾರ್ಯತಂತ್ರದ ವಿಷಯಗಳ ಬಗ್ಗೆ ಚರ್ಚೆಗಳಲ್ಲಿ ತೊಡಗಲು ಅವಕಾಶವನ್ನು ಒದಗಿಸುವ ಗುರಿಯನ್ನು ನೆದರ್ಲ್ಯಾಂಡ್ಸ್ ಹೊಂದಿದೆ” ಎಂದು ಹೇಳಿದರು.

ನವದೆಹಲಿಯಲ್ಲಿ ನಡೆದ ಜಿ 20 ನಾಯಕರ ಶೃಂಗಸಭೆ ಘೋಷಣೆಯ ಬಗ್ಗೆ ಮಾತನಾಡಿದ ನೆದರ್ಲ್ಯಾಂಡ್ಸ್ ಪ್ರಧಾನಿ ರುಟ್ಟೆ, ಘೋಷಣೆಯಲ್ಲಿ ಕೆಲವು ಪ್ರಮುಖ ಅಂಶಗಳಿವೆ, ಅವು ಬಹಳ ಮುಖ್ಯವಾದವು ಮತ್ತು ನಿಸ್ಸಂಶಯವಾಗಿ, ನಾನು ಅದನ್ನು ಬರೆದಿದ್ದರೆ, ಅದು ವಿಭಿನ್ನವಾಗಿರುತ್ತಿತ್ತು” ಎಂದು ಅವರು ಹೇಳಿದರು.

ಪ್ರಧಾನಿ ಮೋದಿ ಜೊತೆ ದ್ವಿಪಕ್ಷೀಯ ಸಭೆ

ನವದೆಹಲಿಯಲ್ಲಿ ನಡೆಯುತ್ತಿರುವ ಜಿ 20 ಶೃಂಗಸಭೆಯ ಹೊರತಾಗಿ ಪ್ರಧಾನಿ ನರೇಂದ್ರ ಮೋದಿ ಅವರು ನೆದರ್ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕೃತ ಹೇಳಿಕೆಯ ಪ್ರಕಾರ, ಉಭಯ ನಾಯಕರು ತಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಬಗ್ಗೆ ಚರ್ಚಿಸಿದರು.

ಈ ದ್ವಿಪಕ್ಷೀಯ ಮಾತುಕತೆಯಲ್ಲಿ ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಶುದ್ಧ ಇಂಧನ, ಹಸಿರು ಹೈಡ್ರೋಜನ್, ಅರೆವಾಹಕಗಳು, ಸೈಬರ್ ತಂತ್ರಜ್ಞಾನ ಮತ್ತು ಡಿಜಿಟಲ್ ತಂತ್ರಜ್ಞಾನ ಸೇರಿದಂತೆ ವಿವಿಧ ಕ್ಷೇತ್ರಗಳ ಬಗ್ಗೆ ಚರ್ಚಿಸಲಾಗಿದೆ. ಇಬ್ಬರು ನಾಯಕರ ನಡುವಿನ ಚರ್ಚೆಗಳು ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳನ್ನೂ ಒಳಗೊಂಡಿವೆ.

ಭಾರತದ ಅಧ್ಯಕ್ಷೀಯ ಅವಧಿಯಲ್ಲಿ ಜಿ 20 ಶೃಂಗಸಭೆಯನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ರುಟ್ಟೆ ಪ್ರಧಾನಿ ಮೋದಿಯವರಿಗೆ ಅಭಿನಂದನೆ ಸಲ್ಲಿಸಿದರು. ಬಾಹ್ಯಾಕಾಶ ಪರಿಶೋಧನೆಯಲ್ಲಿ, ವಿಶೇಷವಾಗಿ ಚಂದ್ರಯಾನ ಮಿಷನ್​ನಲ್ಲಿ ಭಾರತದ ಸಾಧನೆಗಳನ್ನು ಅವರು ಶ್ಲಾಘಿಸಿದರು. ಇದೇ ವೇಳೆ ಸೂರ್ಯನ ಬಗ್ಗೆ ಅಧ್ಯಯನ ನಡೆಸುವ ಆದಿತ್ಯ ಎಲ್​1 ಉಡ್ಡಯನ ಯಶಸ್ವಿಗೂ ಶುಭಾಶಯ ತಿಳಿಸಿದರು.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ