ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ

Gandhi Jayanti Meat Ban: ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ

ಗಾಂಧಿ ಜಯಂತಿ: ಅ.2 ರಂದು ಪ್ರಾಣಿ ವಧೆ, ಮಾಂಸ ಮಾರಾಟ ನಿಷೇಧ
ಸಾಂದರ್ಭಿಕ ಚಿತ್ರ
Follow us
ಆಯೇಷಾ ಬಾನು
|

Updated on:Oct 01, 2023 | 7:13 AM

ಬೆಂಗಳೂರು, ಅ.01: ರಾಷ್ಟ್ರಪಿತ ಮಹಾತ್ಮ ಗಾಂಧಿಯವರ ಹುಟ್ಟುಹಬ್ಬ ಹಿನ್ನೆಲೆ ಅಕ್ಟೋಬರ್ 2 ರಂದು ದೇಶದಲ್ಲಿ ಗಾಂಧಿ ಜಯಂತಿ (Gandhi Jayanti) ಆಚರಿಸಲಾಗುತ್ತೆ. ಈ ವಿಶೇಷ ದಿನದಂದು ನಗರದಲ್ಲಿ ಪ್ರಾಣಿ ಹತ್ಯೆ ಮತ್ತು ಮಾಂಸ ಮಾರಾಟವನ್ನು ಬಿಬಿಎಂಪಿ (BBMP) ನಿಷೇಧಿಸಿದೆ. ಬಿಬಿಎಂಪಿಯ ಪ್ರಾಣಿ ಸಲಹಾ ವಿಭಾಗವು ಈ ಕುರಿತು ಆದೇಶ ಹೊರಡಿಸಿದೆ (Meat Sale Ban).

‘ದಿನಾಂಕ 02-10-2023 ಸೋಮವಾರ ಗಾಂಧಿ ಜಯಂತಿ ಪ್ರಯುಕ್ತ ಬೆಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ’ ಎಂದು ಬಿಬಿಎಂಪಿ ಸುತ್ತೋಲೆ ಹೊರಡಿಸಿದೆ. ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಂಸ ಉದ್ದಿಮೆ ನಡೆಸುತ್ತಿರುವ ಉದ್ದಿಮೆದಾರರಿಗೆ ಮಾಂಸ ಮಾರಾಟ ಮಾಡದಂತೆ ಇಲಾಖೆ ಸೂಚನೆ ನೀಡಿದ್ದು, ತಪ್ಪಿದಲ್ಲಿ ಪಾಲಿಕೆ ಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಇನ್ನು ಮತ್ತೊಂದೆಡೆ ಸೋಮವಾರ ಬಿಬಿಎಂಪಿ ವ್ಯಾಪ್ತಿಯಲ್ಲಿ ಯಾವುದೇ ಮಾಂಸ ಮಾರಾಟ ಇರಲ್ಲ ಎಂದು ಪಾಲಿಕೆ ಪಶುಸಂಗೋಪನಾ ಇಲಾಖೆ ಜಂಟಿ-ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಸ್ವಾತಂತ್ರ್ಯ ದೊರೆತ ಸಂಭ್ರಮದ ಸಂದರ್ಭದಲ್ಲಿ ಕೋಮು ಸಾಮರಸ್ಯಕ್ಕಾಗಿ ಕೋಲ್ಕತ್ತದಲ್ಲಿದ್ದ ಮಹಾತ್ಮ ಗಾಂಧಿ!

ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಡುವಲ್ಲಿ ಪ್ರಮುಖ ಪಾತ್ರವಹಿಸಿರುವ ಸ್ವಾತಂತ್ರ್ಯ ಹೋರಾಟದ ಪ್ರಮುಖ ನಾಯಕರಲ್ಲಿ ಒಬ್ಬರಾದ ಮೋಹನ್‌ದಾಸ್ ಕರಮಚಂದ್ ಗಾಂಧಿ ಜೀ ಅವರ ಜನ್ಮದಿನವನ್ನು ಪ್ರತಿ ವರ್ಷ ಅಕ್ಟೋಬರ್ 2 ರಂದು ಆಚರಿಸಲಾಗುತ್ತದೆ.

ಮಹಾತ್ಮ ಗಾಂಧಿ ಜೀ ಅವರು ಅಕ್ಟೋಬರ್ 2, 1869 ರಂದು ಗುಜರಾತ್‌ನ ಪೋರಬಂದರ್‌ನಲ್ಲಿ ಜನಿಸಿದರು. ಇವರು ರಾಷ್ಟ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಲು, ಗಾಂಧಿ ಜಯಂತಿಯನ್ನು ಪ್ರತಿ ವರ್ಷ ಭಾರತದಲ್ಲಿ ರಾಷ್ಟ್ರೀಯ ರಜಾದಿನವಾಗಿ ಆಚರಿಸಲಾಗುತ್ತದೆ. ಈ ದಿನದಂದು ಮಾಂಸ ಮಾರಾಟ ನಿಷೇಧಿಸಲಾಗುತ್ತದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ 

Published On - 7:10 am, Sun, 1 October 23

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್