AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಣೇಶ ಚತುರ್ಥಿ ಸಂಭ್ರಮ: ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ

ಪ್ರತಿ ವರ್ಷದಂತೆ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಸೆಪ್ಟೆಂಬರ್ 14ರ ಸೋಮವಾರದಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಈ ಕುರಿತು ಜಿಬಿಎ ಉಪ ನಿರ್ದೇಶಕರು (ಪಶುಪಾಲನೆ) ವತಿಯಿಂದ ಆದೇಶ ಹೊರಡಿಸಲಾಗಿದೆ.

ಗಣೇಶ ಚತುರ್ಥಿ ಸಂಭ್ರಮ: ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧ
ಸೆಪ್ಟೆಂಬರ್ 14ರಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ, ಪ್ರಾಣಿವಧೆ ಸಂಪೂರ್ಣ ನಿಷೇಧImage Credit source: tv9
ಗಣಪತಿ ಶರ್ಮಾ
|

Updated on: Sep 12, 2026 | 8:52 AM

Share

ಮುಖ್ಯಾಂಶಗಳು

  • ಸೆಪ್ಟೆಂಬರ್ 14ರಂದು ಮಾಂಸ ಮಾರಾಟ ನಿಷೇಧ
  • ಜಿಬಿಎ ವ್ಯಾಪ್ತಿಯ ಕಸಾಯಿಖಾನೆಗಳು ಬಂದ್
  • ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ

ಬೆಂಗಳೂರು, ಸೆಪ್ಟೆಂಬರ್ 12: ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆದೇಶ ಹೊರಡಿಸಿದೆ. ಸೆಪ್ಟೆಂಬರ್ 14ರ ಸೋಮವಾರದಂದು ಹಬ್ಬದ ಆಚರಣೆ ನಡೆಯಲಿದ್ದು, ನಗರದಾದ್ಯಂತ ಈ ನಿಯಮ ಜಾರಿಯಲ್ಲಿರಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಶುಪಾಲನೆ ವಿಭಾಗದ ಉಪ ನಿರ್ದೇಶಕರು ಈ ಕುರಿತು ಅಧಿಕೃತ ಸುತ್ತೋಲೆ ಹೊರಡಿಸಿದ್ದು, ಜಿಬಿಎ ವ್ಯಾಪ್ತಿಯ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮಾಡುವುದನ್ನು ಹಾಗೂ ಮಾಂಸದ ಮಳಿಗೆಗಳಲ್ಲಿ ಮಾಂಸ ಮಾರಾಟ ಮಾಡುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಹಬ್ಬದ ದಿನದಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ನಿಷೇಧದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಒಂದು ವೇಳೆ ಆದೇಶ ಉಲ್ಲಂಘಿಸಿ ಅಕ್ರಮವಾಗಿ ಪ್ರಾಣಿವಧೆ ಅಥವಾ ಮಾಂಸ ಮಾರಾಟ ಮಾಡಿದ್ದು ಕಂಡುಬಂದರೆ ಸಂಬಂಧಪಟ್ಟವರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆರೆಯಲ್ಲಿ ಪರಿಸರ ಸ್ನೇಹಿ ಗಣೇಶ ವಿಸರ್ಜನೆಗೆ ಜಿಬಿಎ ವ್ಯವಸ್ಥೆ

ಹಲಸೂರು ಕೆರೆಯ ಕಲ್ಯಾಣಿಯಲ್ಲಿ ಗಣೇಶ ವಿಸರ್ಜನೆಗಾಗಿ ವ್ಯಾಪಕ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಇಲ್ಲಿ ಕೇವಲ ಮಣ್ಣಿನ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಮಾತ್ರ ಅವಕಾಶವಿದ್ದು, ಪಿಒಪಿ (Plaster of Paris) ಮೂರ್ತಿಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಜಿಬಿಎ ಎಕ್ಸ್ ಸಂದೇಶ

ಸಾರ್ವಜನಿಕರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾ, 24 ಗಂಟೆಗಳ ಕ್ರೇನ್ ಸೇವೆ, ಆಂಬುಲೆನ್ಸ್, ವಿದ್ಯುತ್ ದೀಪ, ಕುಡಿಯುವ ನೀರು ಹಾಗೂ ಸಂಚಾರ ನಿರ್ವಹಣೆ ವ್ಯವಸ್ಥೆಗಳನ್ನು ಮಾಡಲಾಗಿದೆ. ಸೆಪ್ಟೆಂಬರ್ 14, 16, 18, 20, 22, 24, 26, 27 ಮತ್ತು 28ರಂದು ವಿಸರ್ಜನೆಗೆ ಅವಕಾಶವಿದ್ದು, ಶುಚಿಗೊಳಿಸುವಿಕೆಗಾಗಿ ಸೆಪ್ಟೆಂಬರ್ 15, 17, 19, 21, 23 ಹಾಗೂ 25ರಂದು ವಿಸರ್ಜನೆಯನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಬಿಬಿಸಿ ಸಿಬಿ ಆಯುಕ್ತ ಜಗದೀಶ್ ಜಿ. ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ