AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ: ಖಾಸಗಿ ಬಸ್‌ಗಳ ವಿರುದ್ಧ 3,756 ಕೇಸ್​​

ಗಣೇಶ ಚತುರ್ಥಿ ಹಬ್ಬದ ವೇಳೆ ಪ್ರಯಾಣಿಕರಿಂದ ಹೆಚ್ಚುವರಿ ದರ ವಸೂಲಿ ಹಾಗೂ ನಿಯಮ ಉಲ್ಲಂಘಿಸಿದ ಖಾಸಗಿ ಬಸ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿದ ಆರ್‌ಟಿಒ ಅಧಿಕಾರಿಗಳು, 3,756 ಪ್ರಕರಣ ದಾಖಲಿಸಿ 33 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ದಾಖಲೆಗಳ ಪರಿಶೀಲನೆ ಮತ್ತು ತಪಾಸಣೆ ವೇಳೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರೊಬ್ಬರು ಮಾಹಿತಿ ನೀಡಿದ್ದಾರೆ.

ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆ: ಖಾಸಗಿ ಬಸ್‌ಗಳ ವಿರುದ್ಧ 3,756 ಕೇಸ್​​
ಸಾಂದರ್ಭಿಕ ಚಿತ್ರImage Credit source: PTI
ಪ್ರಸನ್ನ ಹೆಗಡೆ
|

Updated on: Sep 18, 2026 | 7:49 AM

Share

ಬೆಂಗಳೂರು, ಸೆಪ್ಟೆಂಬರ್​​ 18: ಹೆಚ್ಚುವರಿ ಶುಲ್ಕ ವಸೂಲಿ ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳ ವಿರುದ್ಧ ಕರ್ನಾಟಕದಾದ್ಯಂತ ಕಳೆದ 5 ದಿನಗಳಲ್ಲಿ ಕಾರ್ಯಾಚರಣೆ ನಡೆಸಿರುವ ಆರ್‌ಟಿಒ ಅಧಿಕಾರಿಗಳು, ಖಾಸಗಿ ಬಸ್‌ಗಳ ವಿರುದ್ಧ 3,756 ಪ್ರಕರಣಗಳನ್ನು ದಾಖಲಿಸಿ, 33 ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ. ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಖಾಸಗಿ ಬಸ್‌ ನಿರ್ವಾಹಕರು ಪ್ರಯಾಣಿಕರಿಂದ ದುಬಾರಿ ದರ ವಸೂಲಿ ಮಾಡುತ್ತಿದ್ದಾರೆ ಎಂಬ ಹಲವು ದೂರುಗಳು ಸಾರಿಗೆ ಇಲಾಖೆಗೆ ಬಂದಿದ್ದವು. ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಲು ಕೆಲ ಪ್ರಯಾಣಿಕರಿಂದ 7,000 ರೂಪಾಯಿ ವಸೂಲಿ ಮಾಡಿರುವ ಆರೋಪವೂ ಕೇಳಿಬಂದಿತ್ತು.

ಒಟ್ಟು 73.6 ಲಕ್ಷ ರೂಪಾಯಿ ಸಂಗ್ರಹ

ಸೆಪ್ಟೆಂಬರ್ 11ರಿಂದ 15ರವರೆಗೆ ಆರ್‌ಟಿಒ ಅಧಿಕಾರಿಗಳು ಅಂತಾರಾಜ್ಯ ಸೇವೆ ಸೇರಿದಂತೆ 14,987 ಖಾಸಗಿ ಬಸ್‌ಗಳನ್ನು ಪರಿಶೀಲಿಸಿದ್ದಾರೆ. ಪರವಾನಗಿ ನಿಯಮ ಉಲ್ಲಂಘನೆ, ಹೆಚ್ಚುವರಿ ಶುಲ್ಕ ವಸೂಲಿ ಹಾಗೂ ತೆರಿಗೆ ವಂಚನೆ ಸೇರಿದಂತೆ ವಿವಿಧ ಉಲ್ಲಂಘನೆಗಳಿಗೆ ಸಂಬಂಧಿಸಿದಂತೆ ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ಅಧಿಕಾರಿಗಳು ಒಟ್ಟು 73.6 ಲಕ್ಷ ರೂಪಾಯಿ ಸಂಗ್ರಹಿಸಿದ್ದು, ಇದರಲ್ಲಿ 40.3 ಲಕ್ಷ ರೂಪಾಯಿ ದಂಡದ ಮೊತ್ತವಾಗಿದೆ.

LIVE TV

ಇದನ್ನೂ ಓದಿ: ಆರೆಂಜ್ ಲೈನ್ ಮೆಟ್ರೋ ಡಬಲ್ ಡೆಕ್ಕರ್‌ಗೆ ಮತ್ತೆ ಅನುಮತಿ ಕೋರಿದ ಬಿಎಂಆರ್​ಸಿಎಲ್: ಕೇಂದ್ರದ ಅನುಮತಿ ಸಿಗೋದು ಅನುಮಾನ

ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿತ್ತು. ದಾಖಲೆಗಳ ಪರಿಶೀಲನೆ ಮತ್ತು ತಪಾಸಣೆ ವೇಳೆ ಹಲವು ನಿಯಮ ಉಲ್ಲಂಘನೆಗಳು ಕಂಡುಬಂದಿದ್ದು, ಅದಕ್ಕೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗಿದೆ. ಸಾರ್ವಜನಿಕರಿಂದ ಬಂದ ದೂರುಗಳನ್ನು ಹೆಚ್ಚಿನ ಕ್ರಮಕ್ಕಾಗಿ ಸಂಬಂಧಪಟ್ಟ ನೋಂದಣಿ ಪ್ರಾಧಿಕಾರಗಳಿಗೆ ಕಳುಹಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಯಾಣಿಕರ ಲಗೇಜ್ ಸಾಗಿಸುವ ಸಂದರ್ಭದಲ್ಲೂ ಬಸ್‌ ನಿರ್ವಾಹಕರು ನಿಯಮ ಉಲ್ಲಂಘಿಸಿರುವುದು ಅಧಿಕಾರಿಗಳ ಪರಿಶೀಲನೆ ವೇಳೆ ಪತ್ತೆಯಾಗಿದೆ ಎನ್ನಲಾಗಿದೆ.

ಹಬ್ಬದ ಸಂದರ್ಭಗಳಲ್ಲಿ ಖಾಸಗಿ ಬಸ್‌ ನಿರ್ವಾಹಕರು ಹೆಚ್ಚುವರಿ ಶುಲ್ಕ ವಸೂಲಿ ಮಾಡುತ್ತಿರುವುದು ಪದೇಪದೆ ಕೇಳಿಬರುತ್ತಿರುವ ಸಮಸ್ಯೆಯಾಗಿದೆ. ವಿಶೇಷವಾಗಿ ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ದುಬಾರಿ ಪ್ರಯಾಣ ದರಗಳ ಬಗ್ಗೆ ಆಗಾಗ್ಗೆ ದೂರು ನೀಡುತ್ತಿದ್ದಾರೆ. ಹೀಗಿದ್ದರೂ ಕೆಲ ಖಾಸಗಿ ಬಸ್​​ಗಳ ಸುಲಿಗರ ಬಗ್ಗೆ ಅಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಆರೋಪವೂ ಪದೇ ಪದೇ ಕೇಳಿಬರುತ್ತಿದ್ದು, ಸಾರಿಗೆ ಸಚಿವರು ಇತ್ತ ಗಮನಹರಿಸಬೇಕಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
ಹೀರೋಗಳೇ ವಿಲನ್ ಆಗಿದ್ದಕ್ಕೆ ಕನ್ನಡ ಚಿತ್ರರಂಗಕ್ಕೆ ಸಮಸ್ಯೆ ಆಯ್ತಾ?
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
‘ಪ್ರೇಮದ ಊರಲಿ’ ಗೆಲುವನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ತರುಣ್ ಸುಧೀರ್
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ರಾಷ್ಟ್ರಪತಿ ಭವನದತ್ತ ಮೆರವಣಿಗೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಕೂಡ ಭಾಗಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಪ್ರತಿಭಟನೆಯಲ್ಲಿ ಭಾಗವಹಿಸದಂತೆ ಮುಸ್ಲಿಮರಿಗೆ ಇಮಾಮ್ ಉಮರ್ ಇಲ್ಯಾಸಿ ಮನವಿ
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬೇಡ್ತಿ ನದಿ ತಿರುವಿನಿಂದಾಗುವ ಪರಿಣಾಮಗಳೇನು? ಯೋಜನೆಗೆ ವಿರೋಧವೇಕೆ?
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
ಬರಿದಾಗ್ತಿದೆ KRS: CWMA ಆದೇಶದಿಂದ ಕುಡಿಯುವ ನೀರಿಗೂ ಹಾಹಾಕಾರದ ಭೀತಿ
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
‘ಆ ಸಿನಿಮಾ ದರ್ಶನ್​​​ಗೆ ಮಾತ್ರ’: ತರುಣ್ ಸುಧೀರ್ ಹೇಳಿದ್ದು ಯಾವ ಕತೆ?
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಭಾರತೀಯ ಕಂಪನಿಗಳನ್ನ ಅಮೆರಿಕ ಟಾರ್ಗೆಟ್ ಮಾಡಿರೋ ಕಾರಣ ಬಿಚ್ಚಿಟ್ಟ ಪೈ!
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಯಡಿಯೂರಪ್ಪ ಡ್ರೈವರ್ ಗ್ಯಾರಂಟಿ ಯೋಜನೆಗೆ ಮೊದಲು ಅರ್ಜಿ ಹಾಕಿದ್ದು
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’
ಮಂಜನ ವಿರುದ್ಧ ಮುಗಿಬಿದ್ದ ಮನೆ ಮಂದಿ, ಮೌನಕ್ಕೆ ಶರಣಾದ ‘ಮಾಡರ್ನ್ ಕವಿ’