ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಬೆಂಗಳೂರಿನ ಈ ರಸ್ತೆಯಲ್ಲಿ ಇಂದು ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ನಗರದ ಈ ರಸ್ತೆ ವಾಹನ ಸಂಚಾರ ಬಂದ್ ಮಾಡಲಾಗಿದೆ. ಬೆಂಗಳೂರು ಸಂಚಾರಿ ಪೊಲೀಸರು ಮಾರ್ಗ ಬದಲಾವಣೆ ಸೂಚಿಸಿದ್ದಾರೆ.

ಗಣೇಶ ಮೆರವಣಿಗೆ: ಬೆಂಗಳೂರಿನ ಈ ರಸ್ತೆಯಲ್ಲಿ ವಾಹನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ
ಗಣೇಶ ವಿಸರ್ಜನೆ ಮೆರವಣಿಗೆ
Follow us
ವಿವೇಕ ಬಿರಾದಾರ
|

Updated on:Sep 09, 2024 | 9:14 AM

ಬೆಂಗಳೂರು, ಸೆಪ್ಟೆಂಬರ್​ 09: ಮೂರನೇ ದಿನ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರಿನ (Bengaluru) ಚಾಮುಂಡಿನಗರದಲ್ಲಿ ಸೋಮವಾರ ಗಣೇಶ ವಿಸರ್ಜನೆ ಮೆರವಣಿಗೆ ನೆರವೇರಲಿದೆ. ಈ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ಇಂದು (ಸೆ.09) ಸಂಜೆ 6 ಗಂಟೆಯಿಂದ ನಿಷೇಧಿಸಲಾಗಿದೆ.

ಚಾಮುಂಡಿನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಮೆರವಣಿಗೆಯಲ್ಲಿ ಡಿಜೆ, ಟ್ಯಾಬ್ಲೋಗಳು, ಸಂಗೀತ, ಡೊಳ್ಳು ಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸುಮಾರು 16 ರಿಂದ 20 ಗಣೇಶ ಮೂರ್ತಿಗಳು ಸಾಗಲಿವೆ. ಹೀಗಾಗಿ ಸುಗಮ ಸಂಚಾರ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ಸೆ.09ರ ಸಂಜೆ 06.00 ಗಂಟೆಯಿಂದ ಸೆ.10ರ ಬೆಳಿಗ್ಗೆ 2.00 ಗಂಟೆಯವರೆಗು ಮೆರವಣಿಗೆ ಸಾಗುವ ಮಾರ್ಗಗಳಲ್ಲಿ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ಈ ರಸ್ತೆಯಲ್ಲಿ 30 ದಿನ ಸಂಚಾರ ಬಂದ್​, ಮಾರ್ಗ ಬದಲಾವಣೆ ಇಲ್ಲಿದೆ

ಟ್ವಿಟರ್​ ಪೋಸ್ಟ್​

ಬದಲಿ ಮಾರ್ಗ

  • ಸುಲ್ತಾನ್​ಪಾಳ್ಯ ಕಡೆಯಿಂದ ದೂರದರ್ಶನ ಕೇಂದ್ರ ಮತ್ತು ಕಂಟೋನ್ಮಂಟ್ ರೈಲು ನಿಲ್ದಾಣದಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್​ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಬಲ ತಿರುವು ಪಡೆದು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದು ಟಿ.ವಿ ಬದರ್​ನಲ್ಲಿ ಎಡ ತಿರುವು ಪಡೆದು ಜಯಮಹಲ್ ಮುಖ್ಯರಸ್ತೆ ಯಲ್ಲಿ ನೇರವಾಗಿ ಕಂಟೋನ್ವೆಂಟ್​ರೈಲು ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಸುಲ್ತಾನ್ ಪಾಳ್ಯ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಹಾಗೂ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಬಿಬಿ ರಸ್ತೆ)ಯಲ್ಲಿ ವಾಹನ ಸವಾರರು ಸಂಚರಿಸಬೇಕಾದ ಮಾರ್ಗಗಳು: ಸುಲ್ತಾನ್‌ ಪಾಳ್ಯ ಮುಖ್ಯರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಎಡ ತಿರುವು ಪಡೆದು ದೇವೆಗೌಡ ಮುಖ್ಯರಸ್ತೆ ಪಿ.ಆರ್.ಟಿ.ಸಿ ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲ ತಿರುವು ಮಠದಹಳ್ಳಿ ಮುಖ್ಯರಸ್ತೆಯಲ್ಲಿ ಗುಂಡೂರಾವ್ ಸರ್ಕಲ್​ನಲ್ಲಿ ಎಡ ತಿರುವು ಪಡೆದುಕೊಂಡು ತರಳಬಾಳು ರಸ್ತೆ ಎಡತಿರುವು ಪಡೆದುಕೊಂಡು ಬೆಂಗಳೂರು ಬಳ್ಳಾರಿ ರಸ್ತೆ ಮೇತ್ರಿ ಸರ್ಕಲ್​ನಲ್ಲಿ ಪಡೆದುಕೊಂಡು ಬೆಂಗಳೂರು ನಗರದ ಕಡೆಗೆ ಹಾಗೂ ಮೇತ್ರಿ ಸರ್ಕಲ್ ಯು ಟರ್ನ್ ಪಡೆದುಕೊಂಡು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಡೆಗೆ ಸಂಚರಿಸಬಹುದಾಗಿದೆ.
  • ಕಂಟೋನ್ಮೆಂಟ್​​ ರೈಲು ನಿಲ್ದಾಣ ಕಡೆಯಿಂದ ಆರ್.ಟಿ.ನಗರ ಸುಲ್ತಾನ್ ಪಾಳ್ಯ- ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಜಯಮಹಲ್ ರಸ್ತೆ- ಜೆ.ಸಿ ನಗರ ಪಿ.ಎಸ್ ಜಂಕ್ಷನ್ ಟಿವಿ ಟವರ್ (ಸಿ.ಕ್ಯೂ.ಎ.ಎಲ್ ಕ್ರಾಸ್ ಬಲ ತಿರುವು) ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಬಲಕ್ಕೆ ತಿರುಗಿ ಪಡೆದುಕೊಂಡು ವಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಬ್ಬರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಂದಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಯಶವಂತಪುರ ಕಡೆಯಿಂದ ಆರ್.ಟಿ.ನಗರ-ಸುಲ್ತಾನ್ ಪಾಳ್ಯ-ಕಾವಲ್ ಬೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು: ಮೇಕ್ರಿಸರ್ಕಲ್ – ಜಯಮಹಲ್ ಮುಖ್ಯರಸ್ತೆ ಜಂಕ್ಷನ್ ಪಿ.ಆರ್.ಬಿ.ಸಿ ಜಂಕ್ಷನ್ ಟಿ.ವಿ ಬವರ್ (ಸಿ.ಕ್ಯೂ.ಎ.ಎಲ್ ಕ್ರಾಸ್) ಎಡತಿರುವು ಪಡೆದುಕೊಂಡು ವಾಟರ್ ಬ್ಯಾಂಕ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ – ದಿಣ್ಣೂರು ಜಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಸಾಳ್ಯ- ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.
  • ಬೆಂಗಳೂರು ನಗರದ (ಬಿಬಿ ರಸ್ತೆ) ಮೇಖ್ರಿ ಸರ್ಕಲ್ ಕಡೆಯಿಂದ ಆರ್.ಟಿ.ನಗರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಮೇಕ್ರಿ ಸರ್ಕಲ್-ಸಿಬಿಐ ಇಂಕ್ಷನ್​ನಲ್ಲಿ ಬಲ ತಿರುವು ಪಡೆದುಕೊಂಡು ಸಂಜಯನಗರ ಕ್ರಾಸ್ ಸರ್ವಿಸ್ ರಸ್ತೆ, ತರಳಬಾಳು ರಸ್ತೆಯಲ್ಲಿ ಎಡತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಟ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಆರ್. ಟಿ ನಗರ ಮುಖ್ಯರಸ್ತೆಗೆ ಹೋಗಬಹುದು.
  • ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಸುಲ್ತಾನ್ ಪಾಳ್ಯ ಕಾವಲ್‌ಭೈರಸಂದ್ರ ಕಡೆಗೆ ಸಂಚರಿಸುವ ವಾಹನಗಳು ಅನುಸರಿಸಬೇಕಾದ ಮಾರ್ಗಗಳು: ಹೆಬ್ಬಾಳ ಪಿ.ಎಸ್ ಜಂಕ್ಷನ್ ನಿಂದ ಬೆಂಗಳೂರು ಬಳ್ಳಾರಿ ರಸ್ತೆ- ಸಿಬಿಐ ಜಂಕ್ಷನ್ – ಸಂಜಯನಗರ ಕ್ರಾಸ್- ತರಳಬಾಳು ರಸ್ತೆಯಲ್ಲಿ ಎಡ ತಿರುವು ಪಡೆದುಕೊಂಡು ಗುಂಡೂರಾವ್ ಸರ್ಕಲ್​ನಲ್ಲಿ ಬಲ ತಿರುವು ಪಡೆದುಕೊಂಡು ಮಠದಹಳ್ಳಿ ರಸ್ತೆ ವಾಟರ್ ಬ್ಯಾಂಕ್ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ಪಿ.ಆರ್.ಟಿ.ಸಿ ಜಂಕ್ಷನ್​ನಲ್ಲಿ ಎಡ ತಿರುವು ಪಡೆದುಕೊಂಡು ದೇವೆಗೌಡ ರಸ್ತೆ ದಿಣ್ಣೂರು ಜಂಕ್ಷನ್​ಲ್ಲಿ ಬಲ ತಿರುವು ಪಡೆದುಕೊಂಡು ಸುಲ್ತಾನ್ ಪಾಳ್ಯ ಕಾವಲ್ ಭೈರಸಂದ್ರ ಕಡೆಗೆ ಸಂಚರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:56 am, Mon, 9 September 24

ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಕ್ಲಾಸ್​ ನಡೆಯುವಾಗಲೇ 3ನೇ ಮಹಡಿಯಿಂದ ಹಾರಿದ ಕಾಲೇಜು ವಿದ್ಯಾರ್ಥಿ
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ಶ್ರೀರಾಮುಲು ಕಾಂಗ್ರೆಸ್ ಸೇರ್ತಾರಾ? ರಾಜಕೀಯ ಗುಟ್ಟು ಬಿಚ್ಚಿಟ್ಟ ಹಳೇ ಕುಚಿಕು
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ವ್ಯಕ್ತಿತ್ವದಲ್ಲಿ ಉತ್ತಮ ಈ ತ್ರಿವಿಕ್ರಮ: ಗೆಲುವಿನ ಸೂಚನೆ ಕೊಟ್ಟ ಬಿಗ್ ಬಾಸ್
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
ಶ್ರೀರಾಮುಲು ಕಾಂಗ್ರೆಸ್​ಗೆ ಕಳುಹಿಸಲು ಅವರೇ ಪ್ರಯತ್ನಿಸ್ತಿರಬಹುದು: ಡಿಕೆಶಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
9 ವಿಕೆಟ್ ಕಬಳಿಸಿ ದಾಖಲೆ ಬರೆದ ಸಿದ್ಧಾರ್ಥ್ ದೇಸಾಯಿ
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ಮುಡಾ ಹಗರಣದಲ್ಲಿ ಕ್ಲೀನ್​ಚಿಟ್; ಸಿಎಂ ರಿಯಾಕ್ಷನ್ ಇದು
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ರಥೋತ್ಸವದ ವೇಳೆ ವಿಟ್ಲದಲ್ಲಿ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಜಿಂಕೆಯ ವೇಗ, ಹದ್ದಿನ ಕಣ್ಣು... ನಿತೀಶ್ ಕುಮಾರ್ ರೆಡ್ಡಿ ಸೂಪರ್ ಕ್ಯಾಚ್
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
ಬಿಗ್ ಬಾಸ್ ಮನೆಗೆ ನುಗ್ಗಿದ ಅಭಿಮಾನಿಗಳು; ಭಯಬಿದ್ದ ಸ್ಪರ್ಧಿಗಳು
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ
Hanuman Chalisa: ಹನುಮಾನ್ ಚಾಲಿಸಾದ ವಿಶೇಷ ಹಾಗೂ ಮಹತ್ವ