ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​, ವಾಹನ ನಿಲುಗಡೆ ನಿಷೇಧ

ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ಬೆಂಗಳೂರು ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸಂಚಾರ ಪೊಲೀಸರು ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧ, ಮಾರ್ಗ ಬದಲಾವಣೆ ಸೂಚಿಸಿದ್ದಾರೆ. ​

ಗಣೇಶ ಹಬ್ಬ ಪ್ರಯುಕ್ತ ಬೆಂಗಳೂರಿನ ಈ ರಸ್ತೆಯಲ್ಲಿ ಸಂಚಾರ ಬಂದ್​, ವಾಹನ ನಿಲುಗಡೆ ನಿಷೇಧ
ಗಣೇಶ ವಿಸರ್ಜನೆ
Follow us
|

Updated on: Sep 06, 2024 | 7:56 AM

ಬೆಂಗಳೂರು, ಸೆಪ್ಟೆಂಬರ್​ 06: ನಾಡಿನಲ್ಲಡೆ ಗೌರಿಗಣೇಶ ಹಬ್ಬದ (Gowri Ganesha Festival) ಸಡಗರ ಮನೆ ಮಾಡಿದೆ. ಗಣೇಶ ಹಬ್ಬ (Ganesha Festival) ಪ್ರಯುಕ್ತ ಸಿದ್ದತೆ ಜೋರಾಗಿ ನಡೆದಿದೆ. ಗಣೇಶ ಮಂಡಳಿಗಳು ಸಾರ್ವಜನಿಕ ಗಣಪನನ್ನು ಕೂರಿಸಲು ತಯಾರಾಗಿವೆ. ಸಾರ್ವಜನಿಕ ಗಣೇಶ ಮೆರವಣಿಗೆ, ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಚಾರ ನಿರ್ಬಂಧ, ವಾಹನ ನಿಲುಗಡೆ ನಿಷೇಧಿಸಿ ಬೆಂಗಳೂರು ನಗರ ಸಂಚಾರ ಪೊಲೀಸರು (Benagluru Traffic Police) ಮಾರ್ಗಸೂಚಿ ಹೊರಡಿಸಿದ್ದಾರೆ.

ಪುಲಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಹಲಸೂರು ಲೇಕ್​ ಕಲ್ಯಾಣಿಯಲ್ಲಿ ಸೆಪ್ಟೆಂಬರ್​ 7 ರಿಂದ 9ರವರೆಗೆ ಬೆಂಗಳೂರು ನಗರದ ವಿವಿಧ ಪ್ರದೇಶಗಳ ಸುಮಾರು 40,000ಕ್ಕೂ ಅಧಿಕ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗುತ್ತದೆ. ಕೆರೆಯ ಸುತ್ತಮುತ್ತ ಸಂಚಾರ ದಟ್ಟಣೆ ಉಂಟಾಗುತ್ತದೆ. ವಾಹನ ಸವಾರರ ಸುಗಮ ಸಂಚಾರಕ್ಕಾಗಿ ಈ ದಿನಾಂಕಗಳಂದು ಸಂಜೆ 4 ಗಂಟೆಯಿಂದ ಮರುದಿನ ಬೆಳಗಿನ ಜಾವ 04:00 ಗಂಟೆ ವರೆಗೆ ಸಂಚಾರ ನಿರ್ಬಂಧಿಸಲಾಗಿದೆ.

ಸಂಚಾರ ನಿರ್ಬಂಧ

ಕೆನ್ಸಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್‌ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕೇವಲ ಎಂಇಜಿ ಕಡೆಯಿಂದ ಕನ್ನಿಂಗ್‌ಟನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣ್ಯಸ್ವಾಮಿ ಮೊದಲಿಯಾರ್ ರಸ್ತೆ ಕಡೆಯಿಂದ ಆರ್.ಬಿ.ಐ ಜಂಕ್ಷನ್ ಮುಖಾಂತರ ಹಲಸೂರು ಲೇಕ್ ಕಡೆಗೆ ಅಣಸ್ವಾಮಿ ಮೊದಲಿಯಳ ರಸ್ತೆಯಲ್ಲಿ, ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ. ಕಣ್ಮು ಹಲಸೂರು ಲೇಕ್ ಕಡೆಯಿಂದ ತಿರುವಳ್ಳವರ್ ಪ್ರತಿಮೆ ಜಂಕ್ಷನ್ ಕಡೆಗೆ ವಿಕಮುಖ ಸಂಚಾರಕ್ಕೆ, ಅನುವು ಮಾಡಿಕೊಡಲಾಗಿದೆ.

ಇದನ್ನೂ ಓದಿ: ಗೌರಿ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ, ಖರೀದಿ ಜೋರು; ಹೂ, ಹಣ್ಣು ತುಸು ದುಬಾರಿ

ಮಾರ್ಗ ಬದಲಾವಣೆ

ಕೆನ್ಸಿಂಗ್‌ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್‌ಟನ್ ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚಿಟ್ಟೆ ರಸ್ತೆ ಡಿಕನ್ಸನ್ ರಸ್ತೆ ಬಲ ತಿರುವು- ಸೆಂಟ್ ಜಾನ್ಸ್ ರಸ್ತೆ – ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ – ಪ್ರಾಮಿನೇಡ್ ರಸ್ತೆ-ವೀರ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೊಗಬಹುದು.

ತಿರುವಳ್ಳವರ್ ಪ್ರತಿಮೆ ಜಂಕ್ಷನ್-ಅಣಸ್ವಾಮಿ ಮೊದಾಲಿಯರ್ ರಸ್ತೆ ಕಡೆಯಿಂದ ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಗಂಗಾಧರ್ ಚೆಟ್ಟಿ ರಸ್ತೆಯ ಮುಖಾಂತರ ಆರ್.ಬಿ.ಎನ್.ಎಮ್.ಎಸ್ ಹತ್ತಿರ ಎಡತಿರುವು ಪಡೆದು ಡಿಕೆ ರಸ್ತೆಯ ಮುಖಾಂತರ ಸೆಂಟ್ ಜಾನ್ಸ್ ರಸ್ತೆ ತಲುಪಿ ಸೆಂಟ್ ಚಾನ್ಸ್ ರಸ್ತೆ – ಶ್ರೀ ಸರ್ಕಲ್ – ಲಾವಣ್ಯ ಥಿಯೇಟ‌ರ್ ಜಂಕ್ಷನ್- ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಮಿಲ್ಲರೆ ರಸ್ತೆ ಕಡೆಗೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.

ವಾಹನ ನಿಲುಗಡೆ ನಿಷೇಧ

ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್‌ಟನ್ ರಸ್ತೆ-ಅಣ್ಣಸ್ವಾಮಿ ಮೊದಲಿಯಾರ್ ರಸ್ತೆ-ಟ್ಯಾಂಕ್ ರಸ್ತೆಗಳಲ್ಲಿ ಪಾರ್ಕಿಂಗ್‌ಅನ್ನು ಸೆಪ್ಟೆಂಬರ್​ 7 ರಿಂದ 9 ವರೆಗೆ ಎಲ್ಲ ರೀತಿಯ ವಾಹನಗಳ ಪಾರ್ಕಿಂಗ್ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
ಗಣೇಶ ವಿಸರ್ಜನೆ ಸಮಯ, ಹೇಗೆ ಮಾಡಬೇಕು? ವಿಡಿಯೋ ನೋಡಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಎರಡನೇ ಸೋಮವಾರದ ದಿನಭವಿಷ್ಯ ತಿಳಿಯಿರಿ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
ಮೀನುಗಾರಿಕೆ ಏಳಿಗೆಗಾಗಿ ಬೋಟ್​ ಚಲಾಯಿಸಿಕೊಂಡು ಹೋಗಿ ಪೂಜೆ ಸಲ್ಲಿಸಿದ ಸಚಿವ
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
25 ವರ್ಷಗಳ ಹಿಂದೆ ‘ಉಪೇಂದ್ರ’ ಸಿನಿಮಾಗೆ ಉಪ್ಪಿ ಪಡೆದ ಸಂಭಾವನೆ ಎಷ್ಟು?
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ವೇಸ್ಟ್ ಪ್ಲಾಸ್ಟಿಕ್ ಬಳಸಿ ಗಣೇಶನಿಗೆ ರೂಪ ಕೊಟ್ಟ ಚಿತ್ರಕಲಾ ವಿದ್ಯಾರ್ಥಿಗಳು
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ತಾಯಿಯ ಮೇಲೆ ಮಗುಚಿ ಬಿದ್ದ ಆಟೋ, ಅಮ್ಮನ ಉಳಿಸಲು ಆಟೋವನ್ನೇ ಎತ್ತಿದ ಬಾಲಕಿ
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
ಎದೆ ಝಲ್​ ಎನಿಸುವ ದೃಶ್ಯ: ಬಾಲಕನ ಮೇಲೆ ಹರಿದ ಸರ್ಕಾರಿ ಬಸ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
Duleep Trophy 2024: 9 ವಿಕೆಟ್ ಕಬಳಿಸಿ ಮಿಂಚಿದ ಆಕಾಶ್ ದೀಪ್
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
'ಕಲ್ಕಿ' ಅವತಾರದಲ್ಲಿ ಗಣಪತಿ, ತಮಿಳುನಾಡಿನಲ್ಲಿ ಯಾಸ್ಕಿನ್ ಲೋಕ ಸೃಷ್ಟಿ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ
ಭಾವೈಕ್ಯತೆ ಸಂದೇಶ ಸಾರಿದ ಮುಸ್ಲಿಂ ಕುಟುಂಬ, 24 ವರ್ಷಗಳಿಂದ ಗಣೇಶ ಹಬ್ಬಆಚರಣೆ