ಬೆಂಗಳೂರಿನಲ್ಲಿಂದು ಈ ಏರಿಯಾಗಳಲ್ಲಿ ರಸ್ತೆ ಮಾರ್ಗ ಬದಲಾವಣೆ, ಮದ್ಯ ನಿಷೇಧ
ಬೆಂಗಳೂರಿನ ಹಲವೆಡೆ ಇಂದು ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲ ಏರಿಯಾಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅಲ್ಲದೇ ವಾಹನಗಳ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಹಾಗಾದ್ರೆ, ಯಾವ-ಯಾವ ಏರಿಯಾಗಳಲ್ಲಿ ಮಾರ್ಗ ಬದಲಾವಣೆ? ಎಲ್ಲೆಲ್ಲಿ ಮದ್ಯ ನಿಷೇಧ? ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.
ಬೆಂಗಳೂರು, (ಸೆಪ್ಟೆಂಬರ್. 22): ನಗರದಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆ (Ganesh idol immersion) ಹಿನ್ನೆಲೆಯಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಸಂಚಾರಿ ಪೊಲೀಸರು ಮಾರ್ಗ ಬದಲಾವಣೆಗೆ ಮುಂದಾಗಿದ್ದಾರೆ(Route Change). ಇಂದು(ಸೆಪ್ಟೆಂಬರ್ 22) ಕೆ.ಜಿ.ಹಳ್ಳಿ ಮತ್ತು ಪುಕೇಶಿನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಣಪತಿ ಮೂರ್ತಿಗಳ ಮೆರವಣಿಗೆ ನಡೆಯಲಿದೆ. ಹಾಗೂ ಹಲಸೂರು ಕೆರೆಯಲ್ಲಿ ಗಣೇಶ ವಿಸರ್ಜನೆ ಕಾರ್ಯಕ್ರಮ ಇರುವುದರಿಂದ ಸುಗಮ ಸಂಚಾರದ ಹಿತದೃಷ್ಟಿಯಿಂದ ಬೆಳಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯ ವರೆಗೆ ಕೆಲವೆಡೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಅಲ್ಲದೇ ಪೂರ್ವ ವಿಭಾಗದ ಡಿ.ಜೆ.ಹಳ್ಳಿ, ಭಾರತಿನಗರ, ಪುಲಿಕೇಶಿನಗರ ಠಾಣಾ ವ್ಯಾಪ್ತಿಯಲ್ಲಿ ಇಂದು ಮದ್ಯ ನಿಷೇಧಿಸಲಾಗಿದೆ.
ಸಂಚಾರವನ್ನು ನಿರ್ಬಂಧಿಸಿರುವ ರಸ್ತೆಗಳು
ಸೆ.22 ಮತ್ತು ಸೆ.24ರ ವರೆಗೆ ರಾತ್ರಿ 8 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನಾಗವಾರ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ರಸ್ತೆಯವರೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಹಾಘೂ ನೇತಾಜಿ ಜಂಕ್ಷನ್‌ನಿಂದ ಪಾಟರಿ ಸರ್ಕಲ್ ಮೂಲಕ ಟ್ಯಾನಿ ರಸ್ತೆ ಕಡೆಗೆ ಸಂಚಾರವನ್ನು ನಿರ್ಬಂಧಿಸಲಾಗಿದೆ. ಕೆನ್ಸಿಂಗ್ಟನ್ ಕಡೆಯಿಂದ ಎಂಇಜಿ ಮೂಲಕ ಹಲಸೂರು ಕೆರೆ ಕಡೆಗೆ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಆದರೆ ಎಂಇಜಿ ಕಡೆಯಿಂದ ಕೆನ್ಸಿಂಗ್ಟನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿ ಕೊಡಲಾಗಿದೆ.
ಪರ್ಯಾಯ ಮಾರ್ಗಗಳು
- ಥಣಿಸಂದ್ರ ಕಡೆಯಿಂದ ಶಿವಾಜಿನಗರ ಜಂಕ್ಷನ್ ಕಡೆಗೆ ಬರುವ ವಾಹನಗಳು ನಾಗವಾರ ಜಂಕ್ಷನ್ ನಿಂದ ಎಡತಿರುವು – ಹೆಣ್ಣೂರು ಜಂಕ್ಷನ್ – ಬಲ ತಿರುವು – ಸಿದ್ದಪ್ಪ ರೆಡ್ಡಿ ಜಂಕ್ಷನ್ -ಅಯ್ಯೋಧೆ ಜಂಕ್ಷನ್ – ಲಿಂಗರಾಜಪುರ – ಐಟಿಸಿ ಫ್ಲೈ ಓವರ್ ಮೂಲಕ ರಾವರ್ಟ್ ಸನ್ ರಸ್ತೆ ಜಂಕ್ಷನ್ನಲ್ಲಿ ಬಲ ತಿರುವು – ಹೇನ್ಸ್ ರಸ್ತೆ ಮೂಲಕ ಶಿವಾಜಿನಗರ ತಲುಪಬಹುದು.
- ಶಿವಾಜಿನಗರ ಕಡೆಯಿಂದ ನಾಗವಾರ ಜಂಕ್ಷನ್ ಕಡೆಗೆ ಬರುವ ವಾಹನಗಳು ಸ್ಪೆನ್ಸರ್ ರಸ್ತೆಯಲ್ಲಿ ಕಡ್ಡಾಯವಾಗಿ ಬಲ ತಿರುವು ಪಡೆದು – ಸೈನ್ಸರ್ ರಸ್ತೆ ಮೂಲಕ ಕೋಲ್ಸ್ ರಸ್ತೆ ತಲುಪಿ ವೀಲರ್ಸ್ ರಸ್ತೆ ಮೂಲಕ ಹೆಣ್ಣೂರು, ಬಾಣಸವಾಡಿ, ಹಲಸೂರು ಕಡೆಗೆ ಸಂಚರಿಸಬಹುದು. ಆರ್.ಟಿ.ನಗರದಿಂದ ಕಾವಲ್ ಬೈರಸಂದ್ರ ಮೂಲಕ ಬರುವ ವಾಹನಗಳು ಪುಷ್ಪಾಂಜಲಿ ಟಾಕೀಸ್ ಬಳಿ ಎಡ ತಿರುವು ಪಡೆದು ವೀರಣ್ಣ ಪಾಳ್ಯ ಜಂಕ್ಷನ್ ಕಡೆಗೆ ಬಲ ತಿರುವು ಪಡೆದು ನಾಗವಾರ ಜಂಕ್ಷನ್ ರಸ್ತೆ ಕಡೆಗೆ ಸಂಚರಿಸಬಹುದು.
- ಹೇನ್ಸ್ – ನೇತಾಜಿ ರಸ್ತೆ ಕಡೆಯಿಂದ ಟ್ಯಾನರಿ ರಸ್ತೆ ಮೂಲಕ ನಾಗವಾರ ಕಡೆಗೆ ಬರುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಲಾಗಿದ್ದು–ನೇತಾಜಿ ಜಂಕ್ಷನ್‌ನಿಂದ – ಬಲ ತಿರುವು – ಮಾಸ್ಕ್ ಜಂಕ್ಷನ್ – ಲಾಜರ್ ರಸ್ತೆ ಎಂ.ಎಂ.ರಸ್ತೆ ಜಂಕ್ಷನ್ – ಎಡ ತಿರುವು – ಪಾಟರಿ ಸರ್ಕಲ್ – ಹೆಣ್ಣೂರು ರಸ್ತೆ ಜಂಕ್ಷನ್ – ಬಲ ತಿರುವು –ಹೆಚ್ಎಂ ರಸ್ತೆ ಡೇವಿಸ್ ರಸ್ತೆ ಜಂಕ್ಷನ್ ಮೂಲಕ ಲಿಂಗರಾಜಪುರಂ ಫ್ಲೈಓವರ್ ಮೂಲಕ ಹೆಣ್ಣೂರು ಕಡೆಗೆ ಸಂಚರಿಸಬಹುದು.
- ಕನ್ಸಿಂಗ್ಟನ್ ಕಡೆಯಿಂದ ಎಂಇಜಿ ಮಲಕ -ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳನ್ನು ಮಾರ್ಗ ಬದಲಾವಣೆ ಮಾಡಿ ಕನ್ಸಿಂಗ್ಟನ್ನಿಂದ ಗುರುದ್ವಾರ ಜಂಕ್ಷನ್ ಬಲ ತಿರುವು – ತಿರುವಳ್ಳವರ್ ಪ್ರತಿಮೆ – ಬಲ ತಿರುವು – ಆರ್ಬಿಐ ಕ್ವಾಟ್ರಸ್ ಜಂಕ್ಷನ್ -ಎಡ ತಿರುವು – ಲಾವಣ್ಯ ಥಿಯೇಟರ್ ಜಂಕ್ಷನ್ -ನಾಗಾ ಜಂಕ್ಷನ್ -ಬಲ ತಿರುವು ಪಡೆದು ಹಲಸೂರು ಕೆರೆ ಕಡೆಗೆ ಹೋಗ ಬಹುದು.
ಪಾರ್ಕಿಂಗ್ ನಿರ್ಬಂಧಿಸಿರುವ ಸ್ಥಳಗಳು
ಸೆ.22 ಮತ್ತು ಸೆ. 24ರಂದು ಈ ಸ್ಥಳಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ಗೆ ನಿರ್ಬಂಧ ಹೇರಲಾಗಿದೆ. ಪಾಟರಿ ಸರ್ಕಲ್ ನಿಂದ ನಾಗವಾರ ಸಿಗ್ನಲ್, ಗೋವಿಂದಪುರ ಜಂಕ್ಷನ್‌ನಿಂದ ಗೋವಿಂದಪುರ ಕಾ&ಸು ಪೊಲೀಸ್ ಠಾಣೆಯವರೆಗೆ ಮತ್ತು ಹೆಚ್.ಬಿ.ಆರ್ ಬಡಾವಣೆಯ ಸಿದ್ದಪ್ಪ ರೆಡ್ಡಿ ಜಂಕ್ಷನ್‌ನಿಂದ ನರೇಂದ್ರ ಟೆಂಟ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿದೆ. ಹಾಗೂ ಪಾಟರಿ ಸರ್ಕಲ್ ಎಂ.ಎಂ. ರಸ್ತೆಯಿಂದ ಲಾಜರ್ ರಸ್ತೆಯ ವರೆಗೆ ಹಾಗೂ ಸಿಂಧಿ ಕಾಲೋನಿ ಜಂಕ್ಷನ್‌ನಿಂದ ವಾರ್ ಮೆಮೊರಿಯಲ್ ಜಂಕ್ಷನ್ ವರೆಗೆ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್ ಅನ್ನು ನಿರ್ಬಂಧಿಸಲಾಗಿದೆ. ಇನ್ನು ಹಲಸೂರು ಕೆರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ರಸ್ತೆಗಳಲ್ಲಿ ಪಾರ್ಕಿಗ್ ಅನ್ನು ನಿರ್ಬಂಧಿಸಲಾಗಿದೆ.