AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದ್ಯ ಪ್ರಿಯರಿಗೆ ಶಾಕ್: ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ

ಎಲ್ಲೆಡೆ ಗಣಪತಿ ಹಬ್ಬ ಸಂಭ್ರಮ ಮನೆ ಮಾಡಿದೆ. ಗಣೇಶನನ್ನು ಪ್ರತಿಷ್ಠಾಸಿ ಅದ್ಧೂರಿಯಾಗಿ ಆಚರಣೆ ಮಾಡುತ್ತಿದ್ದಾರೆ. ಇನ್ನು ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆ ಸಾಮೂಹಿಕ ಗಣೇಶ ವಿಸರ್ಜನೆ ಮಾಡುವ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಈ ಎರಡು ದಿನ ಬೆಂಗಳೂರಿನ ಕೆಲ ಪ್ರದೇಶಗಳಲ್ಲಿ ಬಾರ್ ಬಂದ್ ಆಗಿರಲಿವೆ.

ಮದ್ಯ ಪ್ರಿಯರಿಗೆ ಶಾಕ್: ಈ ದಿನದಂದು ಬಾರ್ ಬಂದ್, ಬೆಂಗಳೂರಿನಲ್ಲಿ ಎಣ್ಣೆ ಸಿಗಲ್ಲ
Liquor Sale Ban
ರಮೇಶ್ ಬಿ. ಜವಳಗೇರಾ
|

Updated on: Aug 29, 2025 | 10:36 PM

Share

ಬೆಂಗಳೂರು, (ಆಗಸ್ಟ್ 29): ಸಿಲಿಕಾನ್ ಸಿಟಿ ಬೆಂಗಳೂರು (Bengaluru) ನಗರದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ (ganesh idol impression) ಕಾರ್ಯಕ್ರಮಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಗಸ್ಟ್  31 ಹಾಗೂ ಸೆಪ್ಟಂಬರ್ 14ರಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ (liquor) ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾಮೂಹಿಕ ಗಣೇಶ ಮೂರ್ತಿಗಳು ವಿಸರ್ಜನೆ ನಡೆಯುವುದರಿಂದ   ಕಿಡಿಗೇಡಿಗಳು ಮಧ್ಯ ಸೇವಿಸಿ ಗಲಾಟೆ ಮಾಡುವ ಸಾಧ್ಯತೆ ಇರುವುದರಿಂದ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಹೀಗಾಗಿ ಎರಡು ದಿನ ಬಾರ್ ಬಂದ್ ಇರಲಿವೆ.

ಗಣೇಶ ಮೂರ್ತಿಗಳ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಕೆಲವು ಠಾಣೆಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಆದೇಶಿಸಿದ್ದು, ಈ ಕುರಿತು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ (Karnataka State Police) ಆದೇಶ ಹೊರಡಿಸಿದೆ. ಕಾನೂನು ಸುವ್ಯವಸ್ಥೆಗೆ ತೊಂದರೆಯಾಗುವ ಸಾಧ್ಯತೆ ಹಿನ್ನೆಲೆ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನ ಕೆಲವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ CL-4, CL-6 ಪರವಾನಿಗೆ ಹೊರತುಪಡಿಸಿ ಉಳಿದೆಲ್ಲ ಮದ್ಯದಂಗಡಿಗಳನ್ನು ಬಂದ್ ಮಾಡಲಾಗುವುದು ಹಾಗೂ ರೆಸ್ಟೋರೆಂಟ್, ಹೋಟೆಲ್‌ಗಳಲ್ಲಿ ಆಹಾರ ಸೇವೆಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ದೊಡ್ಡಬಳ್ಳಾಪುರದಲ್ಲಿ ಘೋರ ದುರಂತ: ಗಣೇಶ ಮೆರವಣಿಗೆ ವೇಳೆ ಪಟಾಕಿ ಬಾಕ್ಸ್ ಸ್ಫೋಟಗೊಂಡು ಬಾಲಕ ಸಾವು, 6 ಜನರಿಗೆ ಗಾಯ

ಎಲ್ಲೆಲ್ಲಿ ಬಾರ್ ಬಂದ್?

ಆಗಸ್ಟ್ 31ರ ಬೆಳಿಗ್ಗೆ 6ಗಂಟೆಯಿಂದ ಸೆಪ್ಟೆಂಬರ್ 01ರ ಬೆಳಿಗ್ಗೆ 6 ಗಂಟೆವರೆಗೆ ಪೂರ್ವ ವಿಭಾಗದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಕೆ.ಜಿ. ಹಳ್ಳಿ, ಡಿ.ಜೆ. ಹಳ್ಳಿ, ಗೋವಿಂದಪುರ, ಬಾಣಸವಾಡಿ, ರಾಮಮೂರ್ತಿನಗರ, ಹೆಣ್ಣೂರು, ಕಮರ್ಷಿಯಲ್‌ ಸ್ಟ್ರೀಟ್‌, ಶಿವಾಜಿನಗರ, ಭಾರತಿನಗರ, ಪುಲಿಕೇಶಿನಗರ, ಹಲಸೂರು, ಯಶವಂತಪುರ, ಸಂಜಯನಗರ, ಜಾಲಹಳ್ಳಿ, ಆರ್‌ಎಂಸಿ ಯಾರ್ಡ್‌, ಜೆ.ಸಿ. ನಗರ, ಆರ್‌.ಟಿ. ನಗರ, ಹೆಬ್ಬಾಳ, ಸದಾಶಿವನಗರ, ತಲಘಟ್ಟಪುರ, ಸುಬ್ರಹ್ಮಣ್ಯಪುರ, ಕೆಂಗೇರಿ, ಜ್ಞಾನಭಾರತಿ, ಕುಂಬಳಗೋಡು.

ಸೆಪ್ಟೆಂಬರ್ 14ರ ಬೆಳಿಗ್ಗೆ 6ಗಂಟೆಯಿಂದ ಸೆ.15ರ ಬೆಳಿಗ್ಗೆ 6 ಗಂಟೆವರೆಗೆ ಕಾಮಾಕ್ಷಿಪಾಳ್ಯ ಹಾಗೂ ವಿಜಯನಗರದಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ