Ganesha Chaturthi 2021: ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ; ಮಾರ್ಗಸೂಚಿ ಪ್ರಕಟ

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ ಹೊರಬಿದ್ದಿದೆ.

Ganesha Chaturthi 2021: ಗಣೇಶೋತ್ಸವ ಆಚರಣೆಗೆ ಷರತ್ತುಬದ್ಧ ಅನುಮತಿ; ಮಾರ್ಗಸೂಚಿ ಪ್ರಕಟ
ಗಣೇಶೋತ್ಸವ ಆಚರಣೆಗೆ ಕರ್ನಾಟಕ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Sep 07, 2021 | 5:10 PM

ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಬೇಕೋ? ಬೇಡವೋ? ನೀಡುವುದಾದರೆ ಏನೆಲ್ಲಾ ಮಾರ್ಗಸೂಚಿಗಳನ್ನು ಪಾಲಿಸಬೇಕು? ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಅಂತಿಮ ತೀರ್ಮಾನ ಹೊರಬಿದ್ದಿದೆ. ಸಭೆಯಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ಗ್ರೀನ್‌ಸಿಗ್ನಲ್ ಸಿಕ್ಕಿದ್ದು, 3 ದಿನ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಕೊಡಲಾಗಿದೆ. ಆದರೆ, ಮೆರವಣಿಗೆಗೆ, ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ತಜ್ಞರಾದ ಡಾ.ದೇವಿಶೆಟ್ಟಿ, ಡಾ.ಮಂಜುನಾಥ್, ವೈರಾಲಜಿಸ್ಟ್ ಡಾ.ರವಿ, ಡಾ.ಸುದರ್ಶನ್, ಕಂದಾಯ ಸಚಿವ ಅಶೋಕ್, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಜತೆಗೆ ಗಣಪತಿ ಮೂರ್ತಿಗಳನ್ನು ನಿಗದಿತ ಸ್ಥಳಗಳಲ್ಲಿ ಮಾತ್ರ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿಯೇ ವಿಸರ್ಜಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ 3 ದಿನ ಮಾತ್ರ ಸರಳವಾಗಿ ಗಣೇಶೋತ್ಸವ ಇರಲಿದೆ. ಸಾರ್ವಜನಿಕ ಸ್ಥಳದಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೂ ಅದು ಸರಳವಾಗಿ ಇರಬೇಕು. ಅದ್ಧೂರಿ ಆಚರಣೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಸಂಘ, ಸಂಸ್ಥೆಗಳಿಂದ ಭಾರೀ ಒತ್ತಡ ಇದ್ದ ಹಿನ್ನೆಲೆಯಲ್ಲಿ ಅಂತಿಮವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ.

ಬೀದಿಗೊಂದರಂತೆ ಗಣಪತಿ ಕೂರಿಸುವಂತಿಲ್ಲ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರದ ಅನುಮತಿ ಸಿಕ್ಕಿದೆಯಾದರೂ ಬೀದಿಗೆ ಒಂದರಂತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು, ಏರಿಯಾಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತದ ಅನುಮತಿ  ಪಡೆಯಲೇಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ಗರಿಷ್ಠ 5 ದಿನಗಳ ಆಚರಣೆಗೆ ಅನುಮತಿ ರಾಜ್ಯದ ನಗರ ಪ್ರದೇಶಗಳಲ್ಲಿ ಗರಿಷ್ಠ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು. ನಗರಗಳಲ್ಲಿ ವಾರ್ಡ್‌ಗೆ 1 ಮೂರ್ತಿ ಮಾತ್ರ ಪ್ರತಿಷ್ಠಾಪಿಸಬೇಕು. ಗ್ರಾಮಗಳಲ್ಲಿ ಸ್ಥಳೀಯ ಆಡಳಿತ ಅನುಮತಿ ಮೇರೆಗೆ ಸಾರ್ವಜನಿಕ ಉತ್ಸವ ನಡೆಸಲು ಅವಕಾಶ ನೀಡಲಾಗಿದೆ.

ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣೇಶ ಮೂರ್ತಿ ವಿಸರ್ಜಿಸಬೇಕು ಎಲ್ಲೂ ಮೆರವಣಿಗೆ ಮಾಡುವಂತಿಲ್ಲ. ಗಡಿ ಜಿಲ್ಲೆಗಳಲ್ಲಿ ಪಾಸಿಟಿವಿಟಿ ಸರಾಸರಿ ಶೇ 2ಕ್ಕಿಂತ ಕಡಿಮೆ ಇದ್ದರೆ ಮಾತ್ರ ಗಣೇಶೋತ್ಸವಕ್ಕೆ ಅವಕಾಶ ಸಿಗಲಿದೆ.

ಶಾಲಾ-ಕಾಲೇಜುಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ. ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿರ್ಬಂಧಿಸಲಾಗಿದೆ. ಮೂರ್ತಿ ವಿಸರ್ಜನೆ ವೇಳೆ ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಕಾರ್ಯಕ್ರಮಕ್ಕೆ 50X50 ಅಡಿ ಪೆಂಡಾಲ್ ಮಾತ್ರ ಹಾಕಬೇಕು ಅಪಾರ್ಟ್‌ಮೆಂಟ್‌ಗಳಲ್ಲೂ 20ಕ್ಕೂ ಹೆಚ್ಚು ಜನ ಸೇರಬಾರದು. ಆಯಾ ಸಮಿತಿಯವರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು. ಹಬ್ಬ ಆಚರಣೆ ಸ್ಥಳದಲ್ಲಿ ಲಸಿಕೆ ಅಭಿಯಾನ ನಡೆಸಬೇಕು. ಮನೆಗಳಲ್ಲಿ 2 ಅಡಿ, ಸಾರ್ವಜನಿಕವಾಗಿ 4 ಅಡಿ ಮೂರ್ತಿ ಕೂಡಿಸಲು ಅವಕಾಶವಿದೆ ಎಂದು ಆಶೋಕ ಹೇಳಿದ್ದಾರೆ. ರಾಜ್ಯದಲ್ಲಿ ನೈಟ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯಲಿದೆ. ಗ್ರಾಮಗಳಲ್ಲೂ ಕೇವಲ ಒಂದು ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ ಎಂದು ಹೇಳಿದರು.

ಹಬ್ಬದ ಆಚರಣೆಗೆ ವಿರೋಧವಿಲ್ಲ: ಸುಧಾಕರ ಸ್ಪಷ್ಟನೆ ಕರ್ನಾಟಕದಲ್ಲಿ ಐದು ದಿನಗಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ ಎಂದು ಆರೋಗ್ಯ ಸಚಿವ ಸುಧಾಕರ ಹೇಳಿದರು. ಯಾವುದೇ ಹಬ್ಬಗಳಿಗೆ ನನ್ನ ವಿರೋಧವಿಲ್ಲ ಎಂದು ಚಿಕ್ಕಬಳ್ಳಾಪುರದಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್​ ಹೇಳಿದರು.

ಮುಖ್ಯಮಂತ್ರಿ ನೇತೃತ್ವದಲ್ಲಿ ನಡೆದ ಸಭೆಗೆ ವಿಡಿಯೋ ಕಾನ್ಫರೆನ್ಸ್​ ಮೂಲಕ ಭಾಗಿಯಾಗಿದ್ದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಗಣೇಶೋತ್ಸವ ಆಚರಣೆಗೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಗಣೇಶನನ್ನು ಪ್ರತಿಷ್ಠಾಪಿಸುವವರು ಲಸಿಕೆ ಪಡೆಯುವುದು ಕಡ್ಡಾಯ. ಸಂಭ್ರಮಾಚರಣೆ ವೇಳೆ ಜನ ಗುಂಪುಸೇರುವುದನ್ನು ನಾನು ವಿರೋಧಿಸಿದ್ದೆ. ಕೊರೊನಾ ಸೋಂಕಿನ 3ನೇ ಅಲೆ ತಡೆಯುವುದು ನನ್ನ ಉದ್ದೇಶ ಎಂದು ವಿವರಿಸಿದರು.

ಇದನ್ನೂ ಓದಿ: Ganesha Chaturthi 2021: ಗಣೇಶೋತ್ಸವಕ್ಕೆ ಅನುಮತಿ ನೀಡುವುದೇ ಆದಲ್ಲಿ ಈ ಮಾರ್ಗಸೂಚಿಗಳ ಪಾಲನೆ ಕಡ್ಡಾಯ

ಯಾದಗಿರಿ: ಆರ್ಥಿಕ ಸಂಕಷ್ಟದಲ್ಲಿರುವ ಶಿಕ್ಷಕರಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ತಯಾರಿ

Published On - 1:56 pm, Sun, 5 September 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ